ಕಸ್ತೂರಿ ರಂಗನ್ ವರದಿ ತಿರಸ್ಕರಿಸಿದ ಕರ್ನಾಟಕ!
– ರಾಜ್ಯದ ನಿಲುವು ಸ್ಪಷ್ಟಪಡಿಸಿದ ಸಚಿವ ಈಶ್ವರ್ ಖಂಡ್ರೆ
– ಆತಂಕದಿಂದ ನಿಟ್ಟುಸಿರು ಬಿಟ್ಟ ಪಶ್ಚಿಮಘಟ್ಟ ಜನತೆ?!
– ಮುಂದಿನ ಆರು ತಿಂಗಳಲ್ಲಿ ಜಂಟಿ ಸರ್ವೆ ವರದಿ ಸಲ್ಲಿಕೆ
NAMMUR EXPRESS NEWS
ಪಶ್ಚಿಮ ಘಟ್ಟದ ಕುರಿತು ಹಿರಿಯ ವಿಜ್ಞಾನಿ ಡಾ. ಕಸ್ತೂರಿರಂಗನ್ ವರದಿ ಬಗೆಗಿನ ಆತಂಕ, ಗೊಂದಲಗಳನ್ನು ನಮ್ಮ ಸರ್ಕಾರ ನಿವಾರಣೆ ಮಾಡಿದ್ದು, ಕಸ್ತೂರಿ ರಂಗನ್ ವರದಿಯನ್ನು ನಾವು ತಿರಸ್ಕರಿಸಿದ್ದೇವೆ,” ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. ಈ ಮೂಲಕ ಪಶ್ಚಿಮಘಟ್ಟ ಜನತೆ ಆತಂಕದಿಂದ ನಿಟ್ಟುಸಿರು ಬಿಟ್ಟಿದ್ದಾರೆ.
ಶತಮಾನಗಳಿಂದ ಜನರು ಅರಣ್ಯದಂಚಿನಲ್ಲಿ ವಾಸಿಸುತ್ತಿದ್ದು, ಇವರೇ ಅರಣ್ಯ ರಕ್ಷಿಸುತ್ತಿದ್ದಾರೆ. ಅರಣ್ಯ ರಕ್ಷಣೆಗೆ ಈಗಾಗಲೇ ನಮ್ಮಲ್ಲಿ ಯೋಜನೆಗಳಿವೆ. ಜನರ, ಜನಪ್ರತಿನಿಧಗಳ ಬೇಡಿಕೆಯಂತೆ ಕಸ್ತೂರಿ ರಂಗನ್ ವರದಿ ತಿರಸ್ಕಾರ ಮಾಡಿದ್ದೇವೆ ಎಂದು ಕೇಂದ್ರಕ್ಕೆ ಪುನರುಚ್ಚರಿಸಿದ್ದೇವೆ,” ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ರಾಜ್ಯದ ನಿಲುವು ಸ್ಪಷ್ಟಪಡಿಸಿದ್ದಾರೆ. ”ರಾಜ್ಯದ 31 ಜಿಲ್ಲೆಗಳಲ್ಲಿ ಜಂಟಿ ಸರ್ವೆ ನಡೆಸಲು ಸಮಿತಿಗಳನ್ನು ರಚಿಸಲಾಗಿದೆ. ಅದರಂತೆ ಮುಂದಿನ ಆರು ತಿಂಗಳಲ್ಲಿ ಜಂಟಿ ಸರ್ವೆ ನಡೆಸಿ ವಾಸ್ತವದ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಕೆಯಾಗಲಿದೆ. ಈ ಮೂಲಕ ಸಮಸ್ಯೆಗಳ ಪರಿಹಾರಕ್ಕೆ ಪ್ರಯತ್ನ ನಡೆಯಲಿದೆ,” ಎಂದಿದ್ದಾರೆ.