ಕರ್ನಾಟಕ ಟಾಪ್ 3: ಇದು ನಿಮಗೆ ಬೇಕಾದ ಸುದ್ದಿ!
– ಇನ್ಮೇಲೆ ಕನ್ನಡಿಗರಿಗೆ ಉದ್ಯೋಗ ಕಡ್ಡಾಯ!
– ರಾಜ್ಯದ ಖಾಸಗಿ ಕಂಪನಿಗಳಲ್ಲಿ ಶೇ.100 ರಷ್ಟು ಮೀಸಲಾತಿ
– ಸಚಿವ ಸಂಪುಟ ಒಪ್ಪಿಗೆ: ಕೈಗಾರಿಕೆಯಲ್ಲೂ ಮೀಸಲು
– ಬಸ್ ದರ ಏರಿಕೆ ಇಲ್ಲ ಎಂದ ಸರ್ಕಾರ
– ಸರ್ಕಾರಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ನೀಟ್ ತರಬೇತಿ
NAMMUR EXPRESS NEWS
ಬೆಂಗಳೂರು : ಕನ್ನಡಿಗರಿಗೆ ರಾಜ್ಯ ಸರ್ಕಾರವು ಭರ್ಜರಿ ಸಹಿಸುದ್ದಿ ನೀಡಿದ್ದು, ರಾಜ್ಯದಲ್ಲಿನ ಎಲ್ಲಾ ಕೈಗಾರಿಗಳಲ್ಲೂ ಶೇ. 100 ರಷ್ಟು ಕನ್ನಡಿಗರಿಗೆ ಮೀಸಲಾತಿ ಕಲ್ಪಿಸುವ ವಿಧೇಯಕವನ್ನು ಅಧಿವೇಶನದಲ್ಲಿ ಮಂಡಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ, ರಾಜ್ಯದಲ್ಲಿನ ಎಲ್ಲಾ ಕೈಗಾರಿಕೆಗಳಲ್ಲೂ ಸಿ ಮತ್ತು ಡಿ ವರ್ಗದ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಶೇ.100 ರಷ್ಟು ಮೀಸಲಾತಿ ಕಲ್ಪಿಸುವ ವಿಧೇಯಕವನ್ನು ಅಧಿವೇಶನದಲ್ಲಿ ಮಂಡಿಸಲು ನಿರ್ಧರಿಸಲಾಗಿದೆ.
ಖಾಸಗಿ ಕಂಪನಿಗಳಲ್ಲಿ ಸಿ ಮತ್ತು ಡಿ ದರ್ಜೆಯ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ಸಂಬಂಧ ಇದೇ ಅಧಿವೇಶನದಲ್ಲಿ ವಿಧೇಯಕವನ್ನು ಮಂಡಿಸಿ ಅಂಗೀಕಾರ ಪಡೆಯುವುದಾಗಿ ಕಾರ್ಮಿಕ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಬಸ್ ಟಿಕೆಟ್ ದರ ಏರಿಕೆ ಇಲ್ಲ
ಸದ್ಯಕ್ಕೆ ಬಸ್ ಟಿಕೆಟ್ ದರ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ರಾಜು ಕಾಗೆ ಅವರ ಹೇಳಿಕೆ ವೈಯಕ್ತಿಕವಾಗಿದೆ. ಪ್ರಯಾಣ ದರ ಏರಿಕೆ ಮಾಡುತ್ತಿಲ್ಲ ಎಂದು ಸಚಿವರು ತಿಳಿಸಿದ್ದಾರೆ.ಬಸ್ ಟಿಕೆಟ್ ದರ ಹೆಚ್ಚಳದ ಬಗ್ಗೆ ರಾಜು ಕಾಗೆ ಅವರು ಹೇಳಿರುವುದು ಅವರ ವೈಯಕ್ತಿಕ ಅಭಿಪ್ರಾಯವಾಗಿದೆ. ಸಾರಿಗೆ ಇಲಾಖೆಯಲ್ಲಿ ಟಿಕೆಟ್ ದರ ಹೆಚ್ಚಳದಂತಹ ಪ್ರಸ್ತಾವನೆ ಇಲ್ಲ ಎಂದು ಸಚಿವರು ತಿಳಿಸಿದ್ದಾರೆ.
ಸರ್ಕಾರಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ನೀಟ್ ತರಬೇತಿ..!
ಬೆಂಗಳೂರು: ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಕಲಿಯುತ್ತಿರುವ ಅಂದಾಜು 25 ಸಾವಿರ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಟ್, ಜೆಇಇ, ಸಿಇಟಿ ತರಬೇತಿ ಯೋಜನೆಯನ್ನು ₹ 12.50 ಕೋಟಿಗಳ ವೆಚ್ಚದಲ್ಲಿ ಅನುಷ್ಠಾನಗೊಳಿಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಸಚಿವ ಸಂಪುಟ ಸಭೆ ಸೋಮವಾರ ನಡೆಯಿತು.