ಕರ್ನಾಟಕ ಟಾಪ್ ನ್ಯೂಸ್
ಮಂಗಳೂರು: ಮುಮಾಝ್ ಅಲಿ ಆತ್ಮಹತ್ಯೆ: ಆರೋಪಿಗಳು ಅರೆಸ್ಟ್!
ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಆರೋಗ್ಯದಲ್ಲಿ ಏರುಪೇರು
ರೇಪ್: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ವಿರುದ್ಧ ಕೇಸ್
NAMMUR EXPRESS NEWS
ಸುರತ್ಕಲ್: ಕೃಷ್ಣಾಪುರದ ಉದ್ಯಮಿ, ಮಾಜಿ ಶಾಸಕ ಮೊಯಿದೀನ್ ಬಾವ ಸಹೋದರ ಮುಮಾಝ್ ಅಲಿ ಸಾವು ಕುರಿತಂತೆ ತನಿಖೆ ಚುರುಕುಗೊಳಿಸಿರುವ ಮಂಗಳೂರು ಉತ್ತರ ಉಪವಿಭಾಗದ ಪೊಲೀಸ್ ಉಪ ಆಯುಕ್ತ ಮನೋಜ್ ಕುಮಾರ್ ನೇತೃತ್ವದ ಪೊಲೀಸರ ತಂಡ ಪ್ರಕರಣದ ಎ1 ಆರೋಪಿ ರಹಮತ್ ಸೇರಿ ಮೂವರನ್ನು ವಶಕ್ಕೆ ಪಡೆದುಕೊಂಡಿರುವುದಾಗಿ ತಿಳಿದು ಬಂದಿದೆ.
ಮುತ್ತಾಝ್ ಅಲಿ ಸಾವು ಪ್ರಕರಣದಕ್ಕೆ ಸಂಬಂಧಿಸಿ A1 ಆರೋಪಿ ಸುರತ್ಕಲ್ ಕೃಷ್ಣಾಪುರ 7ನೇ ಬ್ಲಾಕ್ ನಿವಾಸಿ ರೆಹಮತ್ (41) ಆಕೆಯ ಪತಿ A5 ಆರೋಪಿ ಶುಐಬ್ ಹಾಗೂ ಆರೋಪಿ ಸತ್ತಾರ್ ಎಂಬವರ ಕಾರು ಚಾಲಕ ಎ 6 ಆರೋಪಿ ಸಿರಾಜ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಪೊಲೀಸರು ಇನ್ನೂ ಅಧಿಕೃತ ಪ್ರಕಟಣೆ ನೀಡಿಲ್ಲ
ರೆಹಮತ್ ಮತ್ತು ಆಕೆಯ ಪತಿ ಶುಐಬ್ನನ್ನು ಸೋಮವಾರ ಸಂಜೆ ಕೇರಳದಲ್ಲಿ ವಶಕ್ಕೆ ಪಡೆದಿದ್ದು, ಸಿರಾಜ್ ನನ್ನು ಕೃಷ್ಣಾಪುರದ ಆತನ ಮನೆಯಿಂದಲೇ ಸಿಸಿಬಿ ಪೊಲೀಸರ ತಂಡ ವಶಕ್ಕೆ ಪಡೆದುಕೊಂಡಿದೆ ಎಂದು ತಿಳಿದು ಬಂದಿದೆ.
ಘಟನೆಗೆ ಸಂಬಂಧಿಸಿ ಮತ್ತಾಝ್ ಅಲಿ ಅವರ ಸಹೋದರ ಹೈದರ್ ಅಲಿ ಎಂಬವರು ರೆಹಮತ್, ಅಬ್ದುಲ್ ಸತ್ತಾರ್, ಕಲಂದರ್ ಶಾಫಿ, ಮುಸ್ತಫಾ, ಶುಐಬ್, ಸಿರಾಜ್ ಎಂಬವರು ಮಾನಸಿಕ ಕಿರುಕುಳ ನೀಡುತ್ತಿದ್ದರು. ಈ ಹಿನ್ನೆಲೆಯಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿರುವ ಕುರಿತು ಶಂಕೆ ವ್ಯಕ್ತಪಡಿಸಿ ದೂರು ನೀಡಿದ್ದರು.
ಪ್ರಮೋದ್ ಮಧ್ವರಾಜ್ ಆರೋಗ್ಯದಲ್ಲಿ ಏರುಪೇರು!
ಉಡುಪಿ :ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅನಾರೋಗ್ಯದಿಂದ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಜ್ವರದಿಂದ ಬಳಲುತ್ತಿದ್ದ ಅವರನ್ನು ಅ. 8ರಂದು ರಾತ್ರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶ್ವಾಸಕೋಶದ ಸೋಂಕು ನ್ಯುಮೋನಿಯಾ ಕಾಣಿಸಿಕೊಂಡಿದ್ದು ವೈದ್ಯರು ಚಿಕಿತ್ಸೆ ನೀಡಿದ್ದಾರೆ. ಇನ್ನೆರಡು ದಿನಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ರೇಪ್: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ವಿರುದ್ಧ ಕೇಸ್
ಬೆಂಗಳೂರು: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ರೈತ ನಾಯಕಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಈ ಹಿನ್ನೆಲೆಯಲ್ಲಿ ಸಂತ್ರಸ್ತೆ ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ವಿನಯ್ ಕುಲಕರ್ಣಿ ವಿರುದ್ಧ ದೂರು ನೀಡಿದ ಹಿನ್ನೆಲೆಯಲ್ಲಿ ಎಫ್ಐಆರ್ ದಾಖಲಾಗಿದೆ.
ರೈತ ನಾಯಕಿಯ ಮೇಲೆ ಅತ್ಯಾಚಾರ ಆರೋಪ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಮೇಲೆ FIR ದಾಖಲಾಗಿದೆ.
2022ರ ಆಗಸ್ಟ್ 24 ರಂದು ಸಂಜೆ 4 ಗಂಟೆಗೆ ಕಾರಿನಲ್ಲಿ ಬಂದ ವಿನಯ್ ಕುಲಕರ್ಣಿ ನನಗೆ ಕುಳಿತುಕೊಳ್ಳುವಂತೆ ಹೇಳಿ, ದೇವನಹಳ್ಳಿ ಸಮೀಪದ ಐವಿಸಿ ರೋಡ್ ಬಳಿಯ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋದರು. ಕತ್ತಲೆ ಆದ ನಂತರ ಹಿಂದಿನ ಸೀಟ್ನಲ್ಲಿ ನನ್ನ ಹತ್ತಿರ ಕುಳಿತು ಅಸಭ್ಯ ವರ್ತನೆ ತೋರಿದ್ದಲ್ಲದೆ, ನನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ. ಬಳಿಕ ಅಕ್ಟೋಬರ್ 2 ರಂದು ಗಾಂಧಿ ಜಯಂತಿಯಂದೂ ತಮ್ಮ ಮೇಲೆ ಮತ್ತೊಮ್ಮೆ ಅತ್ಯಾಚಾರ ಮಾಡಿದ್ದ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಇದೀಗ ಸಂತ್ರಸ್ತೆ ನೀಡಿದ ದೂರಿನ ಅನ್ವಯ ಸಂಜಯ್ ನಗರ ಪೊಲೀಸ್ ಠಾಣೆಯ ಪೊಲೀಸರು ಶಾಸಕ ವಿನಯ್ ಕುಲಕರ್ಣಿ ವಿರುದ್ಧ ಅತ್ಯಾಚಾರ, ಕಿರುಕುಳ, ಜೀವ ಬೆದರಿಕೆ, ವಂಚನೆ ಸೇರಿದಂತೆ ಹಲವು ಪ್ರಕರಣಗಳು ದಾಖಲಾಗಿವೆ.
ನಿಜವಾಯ್ತು ಕೊರಗಜ್ಜನ ಭವಿಷ್ಯ!
ಕಳೆದ ಜುಲೈನಲ್ಲಿ ವಿಧಾನಸಭೆ ಚುನಾವಣೆಯ ಪ್ರಚಾರದ ವೇಳೆ ವಿನಯ್ ಕುಲಕರ್ಣಿ ತುಳುನಾಡಿನ ಆರಾಧ್ಯದೈವ ಕೊರಗಜ್ಜನಿಗೆ ಹರಕೆಯ ಕೋಲ ಸಲ್ಲಿಸಲು ಮಂಗಳೂರಿಗೆ ಹೋಗಿದ್ದರು. ಈ ವೇಳೆ ಕೊರಗಜ್ಜ ಮೂರು ವರ್ಷಗಳ ಕಾಲ ತುಂಬಾ ಸೂಕ್ಷ್ಮವಾಗಿ ಇರಬೇಕು. ಅಧರ್ಮದಲ್ಲಿ ಹೋದವರನ್ನು ನಾನು ನೋಡಿಕೊಳ್ಳುತ್ತೇನೆ. ಸಂಕಷ್ಟ ನಿವಾರಿಸಿ ಒಳ್ಳೆಯದು ಮಾಡುತ್ತೇನೆ ಎಂದು ದೈವ ಸೂಚನೆ ನೀಡಿತ್ತು. ಆದರೆ, ಮೂರು ವರ್ಷದ ಒಳಗಾಗಿ ಹೆಣ್ಣಿನ ಕಾರಣದಿಂದ ವಿನಯ್ ಕುಲಕರ್ಣಿ ಮೇಲೆ ಎಫ್ಐಆರ್ ದಾಖಲಾಗಿದೆ.