ಕನ್ನಡೋತ್ಸವದಲ್ಲಿ ಮುಳುಗಿದ ಕರುನಾಡು!
– ಮೈಸೂರು ರಾಜ್ಯವನ್ನು ಕರ್ನಾಟಕ ಮಾಡಿದ್ದು ಹೇಗೆ..?
– ಕನ್ನಡ ಉಳಿಸುವ ಹೋರಾಟ ನವೆಂಬರ್ ತಿಂಗಳಿಗೆ ಸೀಮಿತವಾಗದಿರಲಿ…!
NAMMUR EXPRESS NEWS
ಸಮಸ್ತ ಕನ್ನಡಿಗರಿಗೆ ನವೆಂಬರ್ 1 ಸಂಭ್ರಮದ ದಿನ. ಕರುನಾಡಿಗೆ ಕರ್ನಾಟಕ ಎಂದು ನಾಮಕರಣ ಮಾಡಿದ ದಿನ. ಎಲ್ಲೆಡೆ ರಾಜ್ಯೋತ್ಸವ ಸಂಭ್ರಮದಿಂದ ನಡೆಯುತ್ತಿದೆ. ಕರ್ನಾಟಕ ರಾಜ್ಯವನ್ನು ಮೊದಲು ಮೈಸೂರು ಪ್ರಾಂತ್ಯ ಎಂದು ಕರೆಯಲಾಗುತ್ತಿತ್ತು. ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕ ನಂತರ ಅಂದಿನ ಮೈಸೂರು ಮಹಾರಾಜರಾಗಿದ್ದ ಒಡೆಯರ್ ಅವರು ತಮ್ಮ ರಾಜ್ಯವನ್ನು ಭಾರತ ದೇಶದೊಂದಿಗೆ ವಿಲೀನ ಮಾಡಲು ಒಪ್ಪಿದರು. ಹೀಗಾಗಿ ಮೈಸೂರು 1950ರಲ್ಲಿ ಭಾರತದ ಮೈಸೂರು ರಾಜ್ಯವಾಯಿತು.
ಭಾರತ ದೇಶದಲ್ಲಿ ರಾಜ್ಯಗಳ ಒಗ್ಗೂಡಿಸುವ ಪ್ರಕ್ರಿಯೆಯು 1956ರಲ್ಲಿ ರಾಜ್ಯವು ಪುನರ್ವಿಗಂಡನಾ ಕಾಯ್ದೆಯ ಜಾರಿಯೊಂದಿಗೆ ಪ್ರಕ್ರಿಯೆ ಮುಕ್ತಾಯವಾಯಿತು. ಕೂರ್ಗ್, ಮದರಾಸು, ಹೈದರಾಬಾದ್ ಮತ್ತು ಬಾಂಬೆ ಸಂಸ್ಥಾನದ ಕೆಲ ಪ್ರದೇಶಗಳು ಈ ಪ್ರಕ್ರಿಯೆಯಲ್ಲಿ ಮೈಸೂರು ರಾಜ್ಯಕ್ಕೆ ಸೇರಿಸಲ್ಪಟ್ಟವು. ದಕ್ಷಿಣ ಭಾರತದಲ್ಲಿ ಹರಡಿದ್ದ ಕನ್ನಡ ಭಾಷಿಕರ ಎಲ್ಲ ಪ್ರದೇಶಗಳನ್ನು ಒಗ್ಗೂಡಿಸಿ ಮೈಸೂರು ರಾಜ್ಯವು 1956ರಲ್ಲಿ ಅಸ್ತಿತ್ವಕ್ಕೆ ಬಂದಿತು. ಕರ್ನಾಟಕ ಹುಟ್ಟಿಗೆ ಆಲೂರು ವೆಂಕಟರಾವ್ ಅವರು ಮೊದಲಿಗೆ ಕರ್ನಾಟಕ ಏಕೀಕರಣ ಚಳುವಳಿಯನ್ನು ಸ್ವಾತಂತ್ರ್ಯ ಪೂರ್ವವೇ 1905 ರಲ್ಲಿ ಆರಂಭಿಸಿದರು.
ನಂತರ ಭಾರತಕ್ಕೆ ಸ್ವಾತಂತ್ರ್ಯ ದೊರೆತು ಗಣರಾಜ್ಯವಾದ ನಂತರ ಭಾಷೆಗಳ ಆಧಾರದ ಮೇಲೆ 1956ರ ನವೆಂಬರ್ 01 ರಂದು ರಾಜ್ಯಗಳನ್ನು ವಿಂಗಡಿಸಿದರು. ಕನ್ನಡಿಗರನ್ನು ಒಟ್ಟಿಗೆ ಸೇರಿ ಮೈಸೂರು ರಾಜ್ಯವನ್ನು ಕರ್ನಾಟಕ ರಾಜ್ಯ ಎಂದು ಕರೆಯಲಾಗುತ್ತದೆ ಹಾಗಾಗಿ ಈ ದಿನದ ದಿನದ ನೆನಪಿಗಾಗಿ ಪ್ರತೀ ವರ್ಷ ಕನ್ನಡ ರಾಜ್ಯೋತ್ಸವಾಗಿ ಆಚರಿಸಲಾಗುತ್ತಿದೆ.
ನವೆಂಬರ್ ತಿಂಗಳಿಗೆ ಸೀಮಿತವಾಯ್ತೆ?
ಸಾವಿರಾರು ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆ ಈಗ ಪರ ಭಾಷೆಯ ವ್ಯಾಮೋಹಕ್ಕೆ ತತ್ತರಿಸಿ ನಶಿಸುವ ಅಂಚಿಗೆ ಬಂದಿದೆ. ಬಹುತೇಕ ಕಡೆ ಕನ್ನಡದ ಮೇಲಿನ ಗೌರವ ಪ್ರೀತಿ ನವೆಂಬರ್ ತಿಂಗಳಿಗೆ ಸೀಮಿತವಾಗಿದೆ. ಕನ್ನಡ ಸಂಘಟನೆಗಳು, ಸಂಘ ಸಂಸ್ಥೆಗಳು, ಸಾಹಿತಿಗಳು ಕನ್ನಡ ಉಳಿಸುವ ಹೋರಾಟದಲ್ಲಿ ತೊಡಗಿದ್ದಾರೆ.
ಕರುನಾಡಿನ ಸಮಸ್ತ ಕನ್ನಡಿಗರಿಗೆ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಷಯಗಳು