ಮತ್ತೆ ರಾಜ್ಯದಲ್ಲಿ ಸಣ್ಣ ಮಳೆ!?
– ಶನಿವಾರ ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ
– 5 ಜಿಲ್ಲೆಗಳಿಗೆ ಮಳೆ ಅಲರ್ಟ್: ಎಂತಾ ಕಥೆ ಮಾರಾಯ್ರೆ
NAMMUR EXPRESS NEWS
ಬೆಂಗಳೂರು: ತಮಿಳುನಾಡಿನ ಕರಾವಳಿ ತೀರದ ಚಂಡಮಾರುತದ ಪರಿಣಾಮವಾಗಿ ರಾಜ್ಯ ಕೆಲ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ದಕ್ಷಿಣ ಒಳ ಕರ್ನಾಟಕದ ಕೋಲಾರ, ಚಿಕ್ಕಮಂಗಳೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಕರ್ನಾಟಕ, ಉತ್ತರ ಒಳ ಕರ್ನಾಟಕ ಮತ್ತು ದಕ್ಷಿಣ ಒಳನಾಡು ಕರ್ನಾಟಕದ ಉಳಿದ ಜಿಲ್ಲೆಗಳಲ್ಲಿ ಒಣ ಹವೆಯಿರುವ ಸಾಧ್ಯತೆ ಇದೆ. ಉತ್ತರ ಕರ್ನಾಟಕದ ಪ್ರತ್ಯೇಕ ಸ್ಥಳಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-4 ಡಿಗ್ರಿ ಸೆಲ್ಸಿಯಸ್ಗಿಂತ ಕಡಿಮೆ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ
ನಾಳೆಯ ಹವಾಮಾನ-ಭಾರೀ ಮಳೆ ಅಲರ್ಟ್ ಕರಾವಳಿ ಕರ್ನಾಟಕ, ಉತ್ತರ ಒಳ ಕರ್ನಾಟಕ ಮತ್ತು ದಕ್ಷಿಣ ಒಳನಾಡು ಕರ್ನಾಟಕದ ಉಳಿದ ಜಿಲ್ಲೆಗಳಲ್ಲಿ ಒಣ ಹವಾಮಾನದ ಸಾಧ್ಯತೆ ಕೋಲಾರ, ಚಿಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರದಲ್ಲಿ ಭಾರೀ ಮಳೆ ಹಾಗೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ತುಮಕೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಲಘು, ಮಧ್ಯಮ ಮಳೆ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಆಂತರಿಕ ಕರ್ನಾಟಕದ ಪ್ರತ್ಯೇಕ ಸ್ಥಳಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-4 ಡಿಗ್ರಿ ಸೆಲ್ಸಿಯಸ್ಗಿಂತ ಕಡಿಮೆ ಇರುವ ಸಾಧ್ಯತೆಯಿದೆ.
*ಭಾನುವಾರ ಭಾರೀ ಮಳೆ ಅಲರ್ಟ್
ಕೋಲಾರ, ಚಿಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರದಲ್ಲಿ ಭಾರೀ ಮಳೆ ಹಾಗೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ತುಮಕೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಲಘು, ಮಧ್ಯಮ ಮಳೆ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಕರ್ನಾಟಕ, ಉತ್ತರ ಒಳ ಕರ್ನಾಟಕ ಮತ್ತು ದಕ್ಷಿಣ ಒಳನಾಡು ಕರ್ನಾಟಕದ ಉಳಿದ ಜಿಲ್ಲೆಗಳಲ್ಲಿ ಒಣ ಹವಾಮಾನದ ಸಾಧ್ಯತೆ, ಉತ್ತರ ಆಂತರಿಕ ಕರ್ನಾಟಕದ ಪ್ರತ್ಯೇಕ ಸ್ಥಳಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-4 ಡಿಗ್ರಿ ಸೆಲ್ಸಿಯಸ್ಗಿಂತ ಕಡಿಮೆ ಇರುವ ಸಾಧ್ಯತೆಯಿದೆ.