ನಾಳೆಯಿಂದ ಮದ್ಯ ಮಾರಾಟ ನಿಷೇಧ!
– ಏ.26ರಂದು ಮತದಾನ ನಡೆಯುವ ಜಿಲ್ಲೆಯಲ್ಲಿ ಮಾರಾಟ ಇಲ್ಲ
– 14 ಲೋಕ ಸಭಾ ಕ್ಷೇತ್ರ ವ್ಯಾಪ್ತಿಗೂ ನಿಯಮ ಅನ್ವಯ
– ಚುನಾವಣೆ ಪ್ರಚಾರಕ್ಕೆ ಹಲವು ನಿಯಮ: ಏನೇನು ನಿಯಮ?
NAMMUR EXPRESS NEWS
ರಾಜ್ಯದ 14 ಲೋಕಸಭಾ ಕ್ಷೇತ್ರಕ್ಕೆ ಏ. 26ರಂದು ಚುನಾವಣೆ ನಡೆಯಲಿರುವ ಹಿನ್ನಲೆ ಸ್ಥಳೀಯ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಮತದಾರರಲ್ಲದ ರಾಜಕೀಯ ಮುಖಂಡರರು, ಕಾರ್ಯಕರ್ತರು, ಸ್ಟಾರ್ ಕ್ಯಾಂಪೇನರ್ಸ್ , ಮೆರವಣಿಗೆ ಅಯೋಜಕರು ಸೇರಿದಂತೆ ಮತ್ತಿತರರು ಏ. 24 ರಂದು ಸಂಜೆ 6 ಗಂಟೆಗೆ ಕ್ಷೇತ್ರ ಬಿಡಬೇಕೆಂದು ಜಿಲ್ಲಾಧಿಕಾರಿಗಳು ಆದೇಶ ಮಾಡಿದ್ದಾರೆ.
ಚುನಾವಣೆಯು ಮುಕ್ತ, ನ್ಯಾಯ ಸಮ್ಮತ ಹಾಗೂ ಶಾಂತಿಯುತವಾಗಿ ನಡೆಯಬೇಕಾದ ಹಿನ್ನಲೆ, ಮತದಾನದ ಅಂತ್ಯದ 48 ಗಂಟೆ ಮುಂಚಿತವಾಗಿ ಯಾವುದೇ ರೀತಿಯ ಬಹಿರಂಗ ಪ್ರಚಾರಗಳನ್ನು ಕೈಗೊಳ್ಳಲು ಅನುಮತಿ ಇರುವುದಿಲ್ಲ.
ಧ್ವನಿವರ್ಧಕಗಳ ಬಳಕೆ ಮಾಡಲು ಅವಕಾಶವಿಲ್ಲ. ಮನೆಮನೆಗೆ ಭೇಟಿ ಪ್ರಚಾರಕ್ಕೆ ಅನುಮತಿ ಇರುತ್ತದೆ ಎಂದರು.ಮತದಾನಕ್ಕೆ ನಿಗಧಿಪಡಿಸಿದ ಅವಧಿ ಕೊನೆಗೊಳ್ಳುವುದಕ್ಕಿಂತ 48 ಗಂಟೆಗಳ ಮುಂಚೆ ಯಾವುದೇ ಮುದ್ರಣ ಹಾಗೂ ವಿದ್ಯುನ್ಮಾನ ಮಾದ್ಯಮಗಳಲ್ಲಿ ಜಾಹೀರಾತು ಪ್ರಕಟಸಬೇಕಾದರೆ ಸಂಬಂಧದಪಟ್ಟ ಅಭ್ಯರ್ಥಿಗಳು ಅಥವಾ ಪಕ್ಷವು ಮಾಧ್ಯಮ ಪ್ರಾಮಾಣೀಕರಣ ಸಮಿತಿ ವತಿಯಿಂದ ಪ್ರಮಾಣಪತ್ರ ಪಡೆಯುವುದು ಕಡ್ಡಾಯವಾಗಿರುತ್ತದೆ. ಯಾವುದೇ ಚುನಾವಣೋತ್ತರ ಸಮೀಕ್ಷೆ ಹಾಗೂ ಸಮೀಕ್ಷಾ ಫಲಿತಾಂಶವನ್ನು ಪ್ರಚಾರಪಡಿಸಲು ಅವಕಾಶವಿರುವುದಿಲ್ಲ ಎಂದು ಹೇಳಿದ್ದಾರೆ.
ಏ. 24 ರಂದು ಸಂಜೆ 5 ಗಂಟೆಯಿಂದ ಏಪ್ರಿಲ್ 26 ರ ಮಧ್ಯರಾತ್ರಿ 12ರ ವರೆಗೆ ಜಿಲ್ಲೆಯಾದ್ಯಂತ ಮದ್ಯ ಮಾರಾಟ ಹಾಗೂ ಸರಬರಾಜನ್ನು ನಿಷೇಧಿಸಲಾಗಿದೆ ಎಂದು ಹೇಳಿದ್ದಾರೆ. ಕರ್ನಾಟಕದ ಜನತೆ ಮತದಾನಕ್ಕೆ ಸಜ್ಜಾಗಿದ್ದು, ಏಪ್ರಿಲ್ 26 ಮತ್ತು ಮೇ 7 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ.
ಮೊದಲ ಹಂತದಲ್ಲಿ ಎಲ್ಲೆಲ್ಲಿ ಚುನಾವಣೆ?
ಹಂತ 1 (ಏಪ್ರಿಲ್ 26) ಉಡುಪಿ ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ, ಕೋಲಾರ
ಹಂತ 2 (ಮೇ 7) ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ, ಗುಲ್ಬರ್ಗ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ