ರೈತರಿಗೆ ಶೂನ್ಯ ಬಡ್ಡಿದರದಲ್ಲಿ 5 ಲಕ್ಷವರೆಗೆ ಸಾಲ!
– ಮಧ್ಯಮಾವಧಿ, ಧೀರ್ಘಾವದಿ ಸಾಲದ ಮಿತಿಯನ್ನು 10 ಲಕ್ಷ ರೂಪಾಯಿಗಳಿಂದ 15 ಲಕ್ಷ ರೂಪಾಯಿಗೆಏರಿಕೆ
– ರೈತರು ಪಿಕ್ ಆಪ್ ಖರೀದಿಸಲು ಸಾಲ ವ್ಯವಸ್ಥೆ
– ರೈತರಿಗೆ ಹಲವು ಯೋಜನೆ: ಕೃಷಿ ಯೋಜನೆಗೆ ಬಲ
NAMMUR EXPRESS NEWS
ಬೆಂಗಳೂರು: ರಾಜ್ಯದ ರೈತರಿಗೆ ಬಜೆಟ್ ಸಿಹಿ ಕೊಟ್ಟಿದೆ. ಸಾಲದ ಮಿತಿ ಹೆಚ್ಚಳದ ಜೊತೆಗೆ ಹಲವು ಯೋಜನೆಗಳನ್ನು ಜಾರಿಗೆ ತರಲಾಗಿದೆ.
ಶೂನ್ಯ ಬಡ್ಡಿದರದಲ್ಲಿ ನೀಡಲಾಗುತ್ತಿರುವ ಅಲ್ಪಾವದಿ ಸಾಲದ ಮಿತಿಯನ್ನು ಮೂರು ಲಕ್ಷ ರೂಪಾಯಿಯಿಂದ ಐದು ಲಕ್ಷ ರೂಪಾಯಿಗೆ ಹೆಚ್ಚಳ ಮಾಡಲಾಗಿದೆ.
ಶೇ.3 ರ ಬಡ್ಡಿದರದಲ್ಲಿ ನೀಡುವ ಮಧ್ಯಮಾವಧಿ ಮತ್ತು ಧೀರ್ಘಾವದಿ ಸಾಲದ ಮಿತಿಯನ್ನು 10 ಲಕ್ಷ ರೂಪಾಯಿಗಳಿಂದ 15 ಲಕ್ಷ ರೂಪಾಯಿಗೆ ಹೆಚ್ಚಿಸಲಾಗುತ್ತದೆ. ಇದರಿಂದಾಗಿ ಪ್ರಸಕ್ತ ಸಾಲಿನಲ್ಲಿ 35 ಲಕ್ಷಕ್ಕಿಂತ ಹೆಚ್ಚಿನ ರೈತರಿಗೆ 25000 ಕೋಟಿ ರೂಪಾಯಿಗಳಷ್ಟು ಸಾಲ ವಿತರಣೆ ಮಾಡುವ ಗುರಿಯನ್ನು ಹೊಂದಲಾಗಿದೆ.
ಗೋದಾಮು ನಿರ್ಮಾಣಕ್ಕೆ ನೆರವು:
ರೈತರು ತಮ್ಮ ಹಾಗೂ ನೆರೆಹೊರೆಯ ರೈತರ ಉತ್ಪನ್ನಗಳನ್ನು ಸಂಗ್ರಹಿಸಲು ಅನುಕೂಲವಾಗುವಂತೆ ಗೋದಾಮು ನಿರ್ಮಿಸಲು ಬ್ಯಾಂಕುಗಳು ನೀಡುವ 20 ಲಕ್ಷ ರೂಪಾಯಿ ವರೆಗಿನ ಸಾಲಕ್ಕೆ ರಾಜ್ಯ ಸರಕಾರವು ಶೇ.7 ರಷ್ಟು ಬಡ್ಡಿ ಸಹಾಯಧನ ನೀಡಲಿದೆ.
ಮಲೆನಾಡು, ಕರಾವಳಿ ರೈತರಿಗೆ ಗುಡ್ ನ್ಯೂಸ್!: ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಗುಡ್ಡಗಾಡು ಪ್ರದೇಶದಲ್ಲಿ ರೈತರ ಕೃಷಿ ಉತ್ಪನ್ನ ಮತ್ತು ಪರಿಕರಗಳನ್ನು ಸಾಗಾಣಿಕೆಗೆ ನಾಲ್ಕು ಚಿಕ್ರದ ಪಿಕ್ಅಪ್ ವ್ಯಾನ್ ಖರೀದಿಸಲು 7 ಲಕ್ಷ ರೂಪಾಯಿ ವರೆಗೆ ಸಾಲವನ್ನು ಶೇ.4ರ ಬಡ್ಡಿದರದಲ್ಲಿ ವಿತರಿಸಲಾಗುತ್ತದೆ. ಶೀಘ್ರವಾಗಿ ಹಾಳಾಗುವ ಹಣ್ಣು, ಹೂವು, ತರಕಾರಿಗಳ ಬೆಲೆ ಕುಸಿತದಿಂದ ರೈತರು ಒತ್ತಡದ ಮಾರಾಟ ಮಾಡುವುದನ್ನು ತಪ್ಪಿಸಿ, ನ್ಯಾಯಯುತವಾಗಿ ಬೆಲೆ ಒದಗಿಸಲು ನೆರವಾಗುವಂತೆ ರಾಜ್ಯದ ಆಯ್ದ 50 ತರಕಾರಿ ಮಾರುಕಟ್ಟೆಗಳಲ್ಲಿ ಕೆಎಪಿಪಿಇಸಿ ಸಹಯೋಗದೊಂದಿಗೆ ಮಿನಿ ಶೀತಲಗೃಹಗಳನ್ನು ಸ್ಥಾಪಿಸಲಾಗುತ್ತದೆ.
ಕೃಷಿ ಉತ್ಪನ್ನ ಮಾರುಕಟ್ಟೆಗಳು ರೈತರ ಉತ್ಪನ್ನಗಳಿಗೆ ಯೋಗ್ಯ ಬೆಲೆ ಒದಗಿಸಿ, ಅವರ ಹಿತ ಕಾಯುವ ಸಂಸ್ಥೆಗಳಾಗಬೇಕು ಎಂಬ ಆಶಯ ನಮ್ಮ ಸರಕಾರದ್ದಾಗಿದ್ದು, ನಮ್ಮ ಹಿಂದಿನ ಅವಧಿಯಲ್ಲಿ ರಾಜ್ಯದ ಕೃಷಿ ಉತ್ಪನ್ನ ಮಾರುಕಟ್ಟೆಗಳನ್ನು ಬಲಪಡಿಸಿ, ಆನ್ಲೈನ್ ಮಾರುಕಟ್ಟೆ ವ್ಯವಸ್ಥೆಯನ್ನು ದೇಶದಲ್ಲೇ ಮೊದಲ ಬಾರಿಗೆ ಜಾರಿಗೊಳಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಇದನ್ನೂ ಓದಿ : ಅಡಿಕೆ ದರ ಎಷ್ಟಿದೆ..ಕಾಳು ಮೆಣಸು ದರ ಎಷ್ಟು?
HOW TO APPLY : NEET-UG COUNSELLING 2023