ಅಯ್ಯೋ…ಖಾಸಗಿ ವಿಡಿಯೊ ವೈರಲ್ ಆಗಿದ್ದಕ್ಕೆ ಪ್ರೇಮಿಗಳ ಆತ್ಮಹತ್ಯೆ!
– ದಾವಣಗೆರೆಯಲ್ಲಿ ಮನನೊಂದು ವಿದ್ಯಾರ್ಥಿಗಳು ಆತ್ಮಹತ್ಯೆ
– ವಿದ್ಯುತ್ ಕಂಬಕ್ಕೆ ಡಿಕ್ಕಿಹೊಡೆದ ಕಾರು
NAMMUR EXPRESS NWES
ದಾವಣಗೆರೆ: ( Davanagere ) ಸೋಶಿಯಲ್ ಮೀಡಿಯಾದಲ್ಲಿ ಖಾಸಗಿ ವಿಡಿಯೊ ಟ್ರೋಲ್ ಆಗಿದ್ದಕ್ಕೆ ಮನನೊಂದು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾದ ಘಟನೆ ದಾವಣಗೆರೆ ನಗರದಲ್ಲಿ ನಡೆದಿದೆ. ದಾವಣಗೆರೆ ನಗರದ ಪದವಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಗಳಿಬ್ಬರು ಮಹಡಿ ಮೇಲೆ ಏಕಾಂತದಲ್ಲಿ ಇದ್ದರು. ಯಾರೋ ಕಿಡಿಗೇಡಿಗಳು ಇದನ್ನೂ ಮೊಬೈಲ್ನಲ್ಲಿ ಸೆರೆಯಿಡಿದು ವೈರಲ್ ಮಾಡಿದ್ದರು. ಖಾಸಗಿ ವಿಡಿಯೊ ವೈರಲ್ ಆಗುತ್ತಿದ್ದಂತೆ ಮನನೊಂದು ತುಂಬಿಗೆರೆ ಗ್ರಾಮದ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಳು. ಇತ್ತ ಆಲೂರಟ್ಟಿ ತಾಂಡಾದ ರತನ್ (20) ಜು.29 ಹಾಸ್ಟೆಲ್ನಲ್ಲಿ ಉಳಿದುಕೊಂಡಿದ್ದ.
ಆದರೆ ಆತನೂ ರಾತ್ರಿ ಹಾಸ್ಟೆಲ್ ಸಮೀಪದಲ್ಲಿದ್ದ ಮರಕ್ಕೆ ನೇಣಿ ಬಿಗಿದುಕೊಂಡು ಮೃತಪಟ್ಟಿದ್ದಾನೆ. ಬೆಳಗ್ಗೆ ಜು.29 ಮರದಲ್ಲಿ ಯುವಕನ ಶವ ನೇತಾಡುತ್ತಿರುವುದನ್ನು ಗಮನಿಸಿ ಸ್ಥಳೀಯರು ಪೊಲೀಸರಿಗೆ ಮಾಹಿತಿಯನ್ನು ನೀಡಿದ್ದರು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಮೃತದೇಹವನ್ನು ಕೆಳಗಿಸಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಈ ಇಬ್ಬರು ಬಿ.ಕಾಂ ದ್ವಿತೀಯ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಸದ್ಯ ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಮಕ್ಕಳ ವಿಡಿಯೊ ವೈರಲ್ ಮಾಡಿದವರ ವಿರುದ್ಧ ಪೋಷಕರು ಪ್ರತ್ಯೇಕ ದೂರು ದಾಖಲು ಮಾಡಿದ್ದಾರೆ.
ಖಾಸಗಿ ಬಸ್ ಪಲ್ಟಿ: 10ಕ್ಕೂ ಹೆಚ್ಚು ಮಂದಿಗೆ ಗಾಯ
ಚಿತ್ರದುರ್ಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ ಆಗಿದೆ. ಚಿಕ್ಕಮಗಳೂರಿನಲ್ಲೂ ಚಾಲಕನ ನಿಯಂತ್ರಣ ತಪ್ಪಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಗಿಡ್ಡಾಪುರ ಬಳಿ ಈ ಅಪಘಾತ ನಡೆದಿದೆ. ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಸಮೀಪದ ಗರಣಿ ಕ್ರಾಸ್ ಕಡೆಗೆ ಹೋಗುತ್ತಿದ್ದ ಖಾಸಗಿ ಬಸ್ ಎದುರುಗಡೆ ಬಂದ ಬೈಕ್ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಖಾಸಗಿ ಬಸ್ ಪಲ್ಟಿಯಾದ ಪರಿಣಾಮ 10ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಬಸ್ ಪಲ್ಟಿಯಾಗುತ್ತಿದ್ದಂತೆ ಸ್ಥಳೀಯರೆಲ್ಲರೂ ಸೇರಿ ಬಸ್ನಲ್ಲಿ ಸಿಲುಕಿದ್ದ ಪ್ರಯಾಣಿಕರನ್ನು ರಕ್ಷಿಸಿದ್ದಾರೆ. ಗಾಯಾಳುಗಳನ್ನು ಚಳ್ಳಕೆರೆ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಈ ಸಂಬಂಧ ನಾಯಕನಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿದ್ಯುತ್ ಕಂಬಕ್ಕೆ ಡಿಕ್ಕಿಹೊಡೆದ ಕಾರು
ಧರ್ಮಸ್ಥಳದಿಂದ ಬೆಂಗಳೂರಿಗೆ ಹೋಗುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ದೃಶ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪದ ಕಾಫಿ ಶಾಪ್ ಮುಂಭಾಗದಲ್ಲಿ ಈ ಘಟನೆ ನಡೆದಿದೆ. ಕಾರು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆಯುವ ದೃಶ್ಯ ಎದೆ ಝಲ್ ಎನಿಸುತ್ತದೆ. ತಿರುವಿನಲ್ಲಿ ಕಾರು ನೇರವಾಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಖಾಲಿ ಜಾಗದಲ್ಲಿ ಬಿದ್ದಿದೆ. ಕೂಡಲೇ ಸ್ಥಳೀಯರೆಲ್ಲವೂ ಓಡಿ ಹೋಗಿ ಕಾರಿನಲ್ಲಿದ್ದವರನ್ನು ರಕ್ಷಿಸಿದ್ದಾರೆ.
ಇದನ್ನೂ ಓದಿ : ರಾಜ್ಯದಲ್ಲಿ ಮತ್ತೆ ಸುದ್ದಿ ಮಾಡಿದ ತೀರ್ಥಹಳ್ಳಿ ಪ್ರತೀಕ್ ಗೌಡ ಕೇಸ್!
HOW TO APPLY : NEET-UG COUNSELLING 2023