ಸರ್ಕಾರಿ ಬಸ್ ನಲ್ಲಿ ಪುರುಷರ ತಲೆಗೆ ಟೊಪ್ಪಿ?
– ಸಾರಿಗೆ ಬಸ್ಸುಗಳ ಪ್ರಯಾಣ ದರ ಶೇ.15ರಷ್ಟು ಏರಿಕೆ
– ಸಿ. ಎಂ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ
– ಸಾರಿಗೆ ಬಸ್ ಟಿಕೆಟ್ ದರ ಪ್ರಸ್ತಾವನೆ ಕುರಿತಂತೆ ಚರ್ಚೆ!
NAMMUR EXPRESS NEWS
ಬೆಂಗಳೂರು: ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎನ್ನುವಂತೆ ಸಾರಿಗೆ ಬಸ್ಸುಗಳ ಪ್ರಯಾಣ ದರ ಶೇ.15ರಷ್ಟು ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಹೀಗಾಗಿ ಶೀಘ್ರವೇ ಸಾರಿಗೆ ಬಸ್ ಪ್ರಯಾಣ ದರದಿಂದ ಜನತೆಗೆ ಶಾಕ್ಉಂ ಟಾಗಲಿದೆ. ಜ. 2 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆದಿದೆ.
ಈ ಸಭೆಯಲ್ಲಿ ಸಾರಿಗೆ ಬಸ್ಸುಗಳ ಟಿಕೆಟ್ ದರದ ಪ್ರಸ್ತಾವನೆ ಕುರಿತಂತೆ ಚರ್ಚೆ ನಡೆಸಲಾಯಿತು. ಅಂತಿಮವಾಗಿ ಶೇ.15ರಷ್ಟು ಪ್ರಯಾಣ ದರ ಏರಿಕೆಗೆ ಸಂಪುಟ ಅನುಮೋದನೆ ನೀಡಿರುವುದು ತಿಳಿದು ಬಂದಿದೆ. ಸಾರಿಗೆ ಬಸ್ಸುಗಳ ಪ್ರಯಾಣ ದರವನ್ನು ಶೇ.42ರಷ್ಟು ಮಾಡುವಂತೆ ಸರ್ಕಾರಕ್ಕೆ ಸಾರಿಗೆ ನಿಗಮಗಳು ಪ್ರಸ್ತಾಪನೆ ಸಲ್ಲಿಸಿವೆ. ಈ ಬಗ್ಗೆ ಇಂದಿನ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ, ಅಂತಿಮವಾಗಿ ಶೇ.15ರಷ್ಟು ರಾಜ್ಯ ಸಚಿವರಿಗೆ ಅನುಮೋದನೆ ನೀಡಲಾಯಿತು. ಹೀಗಾಗಿ ಶೀಘ್ರವೇ ಸಾರಿಗೆ ಬಸ್ ಟಿಕೆಟ್ ದರ ಈಗಾಗಲೇ ಬರಲಿದೆ. ಆ ಮೂಲಕ ಕೆ ಎಸ್ ಆರ್ ಟಿಸಿ ಬಸ್ ಟಿಕೆಟ್ ದರದಲ್ಲಿ ಕೂಡ ಆಗಲಿದೆ.