ಧರ್ಮಸ್ಥಳ, ಕೊಡಗು, ಚಿಕ್ಕಮಗಳೂರಿನಲ್ಲಿ ಮಿನಿ ಏರ್ಪೋರ್ಟ್!
– ತುರ್ತು ಸ್ಪಂದನೆ ಉದ್ದೇಶದಿಂದ ಸರ್ಕಾರ ಮಹತ್ವದ ಯೋಜನೆ
– ಮಲೆನಾಡು, ಕರಾವಳಿ ಪ್ರವಾಸೋದ್ಯಮಕ್ಕೆ ಅನುಕೂಲ
NAMMUR EXPRESS NEWS
ಬೆಂಗಳೂರು: ಧರ್ಮಸ್ಥಳ, ಕೊಡಗು, ಚಿಕ್ಕಮಗಳೂರಿನಲ್ಲಿ ಮಿನಿ ವಿಮಾನ ನಿಲ್ದಾಣಕ್ಕೆ ಸರ್ಕಾರ ಮಹತ್ವದ ಯೋಜನೆ ರೂಪಿಸಿದೆ. ಪ್ರವಾಸೋದ್ಯಮ, ಕೈಗಾರಿಕೆ ಅಭಿವೃದ್ಧಿ, ನೈಸರ್ಗಿಕ ವಿಕೋಪದ ಸಂದರ್ಭದಲ್ಲಿ ತುರ್ತು ಸ್ಪಂದನೆ ಉದ್ದೇಶದಿಂದ ವಿಮಾನ ನಿಲ್ದಾಣಗಳು ಜಿಲ್ಲೆಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಏರ್ ಸ್ಟ್ರಿಪ್ ನಿರ್ಮಾಣಕ್ಕೆ ಕ್ರಮ ಕೈಗೊಂಡಿದೆ.ರಾಜ್ಯದ ಮೂರು ಕಡೆ ಏರ್ ಸ್ಟ್ರಿಪ್ ಸ್ಥಾಪಿಸಲು ಯೋಜನೆ ರೂಪಿಸಿದೆ. ಸಾರ್ವಜನಿಕ ವಾಯು ಸೇವೆಯನ್ನು ಬಳಸದೆ ಖಾಸಗಿ ಅಥವಾ ಸರ್ಕಾರಿ ವಿಮಾನಗಳನ್ನು ಇಳಿಸುವಿಕೆ ಮತ್ತು ಹಾರಾಟಕ್ಕೆ ಬಳಕೆಯಾಗುವಂತೆ ರಾಜ್ಯದ ಮೂರು ಕಡೆಯ ಏರ್ ಸ್ಟ್ರಿಪ್ ನಿರ್ಮಾಣ ಮಾಡಲು 2023 -24ನೇ ರಾಜ್ಯ ಸಾಲಿನ ಬಜೆಟ್ ನಲ್ಲಿ ಘೋಷಿಸಲಾಗಿದೆ. ಅದೇ ಚಿಕ್ಕಮಗಳೂರು, ಕೊಡಗಿನಲ್ಲಿ ಏರ್ ಸ್ಟ್ರಿಪ್ ಜಾಗ ಗುರುತಿಸಲಾಗಿದೆ, ಧರ್ಮಸ್ಥಳದಲ್ಲಿ ಜಾಗ ಗುರುತಿಸಲಾಗಿದೆ.