ರಾಜ್ಯದ 10 ಜಿಲ್ಲೆಗಳಲ್ಲಿ ಸಾಧಾರಣ ಮಳೆ!
– 6 ಜಿಲ್ಲೆಗಳಿಗೆ ವಾಡಿಕೆಗಿಂತ ಹೆಚ್ಚು ಚಳಿಯ ಅಲರ್ಟ್
– ಮಳೆಯ ಚೆಲ್ಲಾಟ: ರೈತರ ಪರದಾಟ
NAMMUR EXPRESS NEWS
ಬೆಂಗಳೂರು: ಕೆಲ ದಿನಗಳ ಕಾಲ ಕಣ್ಮರೆಯಾಗಿದ್ದ ಮಳೆ ಮತ್ತೆ ರಾಜ್ಯಕ್ಕೆ ಎಂಟ್ರಿಯಾಗಲಿದೆ. ರಾಜ್ಯದ 10 ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದ್ದು, ಉಳಿದೆಡೆ ವಾಡಿಕೆಗಿಂತಲೂ 3 ಡಿಗ್ರಿ ಹೆಚ್ಚು ಚಳಿ ಇರಲಿದೆ. ಕರಾವಳಿ ಕರ್ನಾಟಕದ ಚಳಿಯಲ್ಲಿ ಹೆಚ್ಚು ವ್ಯತ್ಯಾಸ ಆಗುವುದಿಲ್ಲ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮತ್ತೆ ವಾಯುಭಾರ ಕುಸಿತ?: ಮುಂದಿನ 24 ಗಂಟೆಗಳಲ್ಲಿ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಆಗಲಿದೆ ನಂತರ ಅದು ತಮಿಳುನಾಡು ಕರಾವಳಿಯ ಕಡೆಗೆ ಚಲಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ವಾಡಿಕೆಗಿಂತ ಕನಿಷ್ಠ ತಾಪಮಾನ 6 ರಿಂದ 7 ಡಿಗ್ರಿ ಸೆಲ್ಸಿಯಸ್ ಕಡಿಮೆ ಇರಲಿದ್ದು, ಮುಂದಿನ ಮೂರು ದಿನ ಬೀದರ್, ಬಿಜಾಪುರ, ಗುಲ್ಬರ್ಗಾ, ಹಾಗೂ 4-5 ಡಿಗ್ರಿ ಯಾದಗಿರಿ, ರಾಯಚೂರು, ಬಾಗಲಕೋಟೆಯಲ್ಲಿ ಕಡಿಮೆ ತಾಪಮಾನ ದಾಖಲಾಗಲಿದ್ದು ಭಾರೀ ಚಳಿ ಇರಲಿದೆ. 5 ದಿನಗಳ ಬಳಿಕ ರಾಜ್ಯದಲ್ಲಿ ಮತ್ತೆ ಹಗುರ ಹಾಗೂ ಸಾಧಾರಣ ಮಳೆ ಮುನ್ಸೂಚನೆ ನೀಡಲಾಗಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಚಾಮರಾಜನಗರ, ತುಮಕೂರು, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಕರ್ನಾಟಕದಲ್ಲಿ ಒಣ ಹವೆ ಇರಲಿದ್ದು, ಉತ್ತರ ಕರ್ನಾಟಕದಲ್ಲಿ ಚಳಿ, ಮಂಜಿನ ವಾತಾವರಣ ಇರಲಿದೆ. ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಚಾಮರಾಜನಗರ, ತುಮಕೂರು, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಕರ್ನಾಟಕ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಉಳಿದ ಜಿಲ್ಲೆಗಳಲ್ಲಿ ಶುಷ್ಕ ಹವಾಮಾನವು ಚಾಲ್ತಿಯಲ್ಲಿರಲಿದೆ. ಕರಾವಳಿ ಕರ್ನಾಟಕದ ಜಿಲ್ಲೆಗಳ ಮೇಲೆ ಒಂದೆರಡು ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡು ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ರಾಯಚೂರು, ಕೊಪ್ಪಳ, ಗದಗ ಮತ್ತು ಹಾವೇರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಒಟ್ಟಿನಲ್ಲಿ ಈ ವಾರ ಕೆಲ ಜಿಲ್ಲೆಗಳಲ್ಲಿ ಹಗುರ ಮಳೆಯಾಗಲಿದೆ.