ಶಾಲೆಗಳಲ್ಲಿ ಮತ್ತಷ್ಟು ಉದ್ಯೋಗ ಅವಕಾಶ!?
– ಸರಕಾರಿ, ಖಾಸಗಿ ಅನುದಾನಿತ ಶಾಲೆಗಳ ಖಾಲಿ ಹುದ್ದೆ ಶೀಘ್ರ ಭರ್ತಿ
– ಸರಕಾರಿ ಮತ್ತು ಖಾಸಗಿ ಶಾಲೆಗಳಿಗೆ ಒಂದೇ ಮಾನದಂಡ: ಮಧು ಬಂಗಾರಪ್ಪ
NAMMUR EXPRESS NEWS
ಸರಕಾರಿ ಹಾಗೂ ಖಾಸಗಿ ಅನುದಾನಿತ ಶಾಲೆಗಳ ಖಾಲಿ ಹುದ್ದೆ ಭರ್ತಿ ಕುರಿತು ಆದಷ್ಟು ಬೇಗ ಕ್ರಮ ಕೈಗೊಳ್ಳಲಾಗುತ್ತದೆ. ಹುದ್ದೆ ಭರ್ತಿ ವಿಚಾರದಲ್ಲಿ ಸರಕಾರಿ ಮತ್ತು ಖಾಸಗಿ ಶಾಲೆಗಳಿಗೆ ಮಾನದಂಡ ಅನುದಾನಿತ ಒಂದೇ ಅನುಸರಿಸಲಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ನೇಮಕಾತಿ ಪ್ರಕ್ರಿಯೆ ಸ್ಪೀಡಪ್ ಮಾಡಲು ನಾನು ಬದ್ಧನಿದ್ದೇನೆ. ಶೀಘ್ರವೇ ಭರ್ತಿ ಮಾಡುವ ಕೆಲಸ ಆಗಲಿದೆ. ಮಕ್ಕಳಿಗೆ ಶಿಕ್ಷಣ ಕೊಡುವ ಕೆಲಸಕ್ಕೆ ಬದ್ಧವಾಗಿದ್ದೇವೆ. ಕೋರ್ಟ್ ಆದೇಶದ ಮೂಲಕವೇ ನೇಮಕ ಆಗಬೇಕು. ಅದಕ್ಕೆ ನಾವು ಮಧ್ಯಪ್ರವೇಶ ಮಾಡೋದಿಲ್ಲ.
ವೇತನದಲ್ಲಿ ಕಡಿತ ಮಾಡಿ ಇನ್ಶೂರೆನ್ಸ್ ಮಾಡುವ ಪ್ರಕ್ರಿಯೆ ಬಗ್ಗೆ ಸಿಎಂ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುತ್ತದೆ” ಎಂದರು. ಪ್ರಶೋತ್ತರ ಅವಧಿಯಲ್ಲಿ ಸದಸ್ಯ ಮರಿತಿಬ್ಬೇಗೌಡ ಮತ್ತು ಎಸ್.ವಿ.ಸಂಕನೂರ ಪ್ರಶ್ನೆಗಳಿಗೆ ಉತ್ತರಿಸಿ, ಖಾಲಿ ಹುದ್ದೆಗಳನ್ನು ಭರ್ತಿ ಮಾಡುವಾಗ ಸರಕಾರಿ ಶಾಲೆಗಳ ಜತೆಗೆ ಅನುದಾನಿತ ಶಾಲೆಗಳನ್ನೂ ಪರಿಗಣಿಸುತ್ತೇವೆ. ಹಣಕಾಸು ಇಲಾಖೆ ಅನುಮತಿ ಪಡೆದು ಹುದ್ದೆಗಳನ್ನು ಭರ್ತಿ ಮಾಡುತ್ತೇವೆ. ಸರಕಾರಿ ಹಾಗೂ ಅನುದಾನಿತ ಶಾಲೆ ಎರಡಕ್ಕೂ ಒಂದೇ ಮಾನದಂಡ ಇರಲಿದೆ. ಈ ಬಗ್ಗೆ ಎಂಟು ತಿಂಗಳಿಂದ ಪ್ರಕ್ರಿಯೆ ನಡೆಯುತ್ತಿದೆ. ಮುಖ್ಯಮಂತ್ರಿಯವರ ಜತೆ ಚರ್ಚಿಸಿ ಶೀಘ್ರವೇ ನೇಮಕಾತಿ ಮಾಡುತ್ತೇವೆ. ನ್ಯಾಯಾಲಯದಲ್ಲಿರುವ ಪ್ರಕರಣದ ಬಗ್ಗೆಯೂ ಹೆಚ್ಚು ಗಮನ ಕೊಡುತ್ತೇವೆ ಎಂದರು.