Categories
ರಾಜ್ಯ

ಮೂಡಾ ಹಗರಣ 300ಕೋಟಿ ಸ್ಥಿರಾಸ್ತಿ ಮುಟ್ಟುಗೋಲು..!

ಮೂಡಾ ಹಗರಣ 300ಕೋಟಿ ಸ್ಥಿರಾಸ್ತಿ ಮುಟ್ಟುಗೋಲು..!
– ಜಾರಿ ನಿರ್ದೇಶನಾಲಯ (ಇ.ಡಿ)ದಿಂದ ಸ್ಥಿರಾಸ್ತಿ ಮುಟ್ಟುಗೋಲು
– ಬೇರೆಯವರ ಹೆಸರಲ್ಲಿ ನೋಂದಣಿಯಾಗಿದ್ದ ಆಸ್ತಿಗಳು

NAMMUR EXPRESS NEWS
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣದ ವಿಚಾರದಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಇತರರ ವಿರುದ್ಧ ದಾಖಲಾದ ಪ್ರಕರಣ ಸಂಬಂಧ ಐದು ತಿಂಗಳಿಂದ ನಿರಂತರ ತನಿಖೆ ಕೈಗೊಂಡ ಜಾರಿ ನಿರ್ದೇಶನಾಲಯವು (ಇ.ಡಿ.) ಇದೀಗ 300 ಕೋಟಿ ರು. ಮೌಲ್ಯದ 142 ಸ್ಥಿರಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ. ಜಾರಿ ನಿರ್ದೇಶನಾಲಯವು ಜಪ್ತಿ ಮಾಡಿರುವ ಸ್ಥಿರಾಸ್ತಿಗಳು ರಿಯಲ್ ಎಸ್ಟೇಟ್ ಉದ್ಯಮಿಗಳು ಮತ್ತು ಏಜೆಂಟ್‌ಗಳ ಹೆಸರಿನಲ್ಲಿ ನೋಂದಣಿಯಾಗಿವೆ ಎಂಬ ಮಾಹಿತಿ ಲಭ್ಯವಾಗಿದೆ. ಮುಡಾದಿಂದ ಪಡೆದ ನಿವೇಶನಗಳನ್ನು ಭಾರಿ ಲಾಭಕ್ಕೆ ಮಾರಾಟಮಾಡಿ ಗಳಿಸಿದ ಹಣದಿಂದ ಸಂಪಾದಿಸಿದ ಆಸ್ತಿಗಳು ಇವಾಗಿವೆ ಎಂದು ಇ.ಡಿ ತಿಳಿಸಿದೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.