Categories
ರಾಜ್ಯ

ಸ್ಪರ್ಧಾತ್ಮಕ ಪರೀಕ್ಷೆ ಕೋಚಿಂಗ್ ಸೆಂಟರ್ ಗಳಿಗೆ ಹೊಸ ರೂಲ್ಸ್

ಸ್ಪರ್ಧಾತ್ಮಕ ಪರೀಕ್ಷೆ ಕೋಚಿಂಗ್ ಸೆಂಟರ್ ಗಳಿಗೆ ಹೊಸ ರೂಲ್ಸ್
– ಕೋಚಿಂಗ್ ಸೆಂಟರ್ ನೋಂದಣಿ ಕಡ್ಡಾಯ
– ನೋಂದಣಿಗಾಗಿ 15 ದಿನ ಕಾಲಾವಕಾಶ

NAMMUR EXPRESS NEWS
ರಾಜ್ಯದಲ್ಲಿ ಐಎಸ್‌ಎಸ್, ಐಪಿಎಸ್, ಐಎಫ್‌ಎಸ್, ಕೆಎಸ್‌ಎಸ್ ಸೇರಿದಂತೆ ಇತರ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡುತ್ತಿರುವ ಕೋಚಿಂಗ್ ಕೇಂದ್ರಗಳ ನೋಂದಣಿ ಕಡ್ಡಾಯವಾಗಿದ್ದು, ಈವರೆಗೆ ನೋಂದಣಿಯಾಗದ ಕೇಂದ್ರಗಳು ಮುಂದಿನ 15 ದಿನಗಳಲ್ಲಿ ನೋಂದಣಿ ಮಾಡಿಕೊಳ್ಳುವಂತೆ ಕಾಲೇಜು ಶಿಕ್ಷಣ ಇಲಾಖೆ ಈ ಕುರಿತು ಸೂಚನೆ ನೀಡಿದೆ.
ಈ ಸಂಬಂಧ ಇಲಾಖಾ ಆಯುಕ್ತರು ಸುತ್ತೋಲೆ ಹೊರಡಿಸಿದ್ದು.

ನೋಂದಣಿ ಹೇಗೆ :

ಸರ್ಕಾರವು ಕರ್ನಾಟಕ ಶಿಕ್ಷಣ ಕಾಯ್ದೆಯಡಿ ಸ್ಪರ್ಧಾತ್ಮಕ ತರಬೇತಿ ಸಂಸ್ಥೆಗಳ ನೋಂದಣಿಯನ್ನು ಕಡ್ಡಾಯಗೊಳಿಸಿ ಅದಕ್ಕೆ ಸಂಬಂಧಿಸಿದ ಸಂಸ್ಥೆಗಳಿಗೆ 25 ಸಾವಿರ ರೂ. ಶುಲ್ಕ ಪಾವತಿಸಿ ನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆ, ಬೆಂಗಳೂರು ಇಲ್ಲಿ ನೋಂದಣಿ ಮಾಡಿಕೊಳ್ಳಬೇಕು. ತಪ್ಪಿದರೆ ಕಾನಾತ್ಮಕವಾಗಿ ಕ್ರಮ ಜರುಗಿಸಲು ಸೂಚಿಸಲಾಗಿದೆ.

ಸುತ್ತೋಲೆಯಲ್ಲಿ ಏನಿದೆ :

ಕೇಂದ್ರವು ನೋಂದಣಿ ಸಂಖ್ಯೆ, ಪಾನ್ ಮತ್ತು ಜಿಎಸ್ಟಿ ನಂಬರ್ ಹೊಂದಿರಬೇಕು. ವಿಶಾಲವಾದ ತರಬೇತಿ ಕೊಠಡಿಗಳು, ಸುಸಜ್ಜಿತ ಗ್ರಂಥಾಲಯ, ಅರ್ಹ ವಿದ್ಯಾರ್ಹತೆ ಹೊಂದಿದ ಬೋಧಕರು, ಪುರುಷ, ಮಹಿಳೆಯರಿಗೆ ಪ್ರತ್ಯೇಕ ಶೌಚಾಲಯ ಹೊಂದಿರಬೇಕು. ಕೇಂದ್ರದಲ್ಲಿ ಸಿಸಿ ಕ್ಯಾಮರಾ ಅಳವಡಿಸಿರಬೇಕು. ಕಟ್ಟಡ ಕರಾರು, ಭದ್ರತಾ ಸಿಬ್ಬಂದಿ, ಅಗ್ನಿ ಸುರಕ್ಷತೆ, ಆದಾಯ ತೆರಿಗೆ ಸಲ್ಲಿಕೆಗೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ಹೊಂದಿರಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.