ಇನ್ನು ಮುಂದೆ ಹೊಸ ರೇಷನ್ ಕಾರ್ಡ್ ಸುಲಭ!
– ಅರ್ಜಿ ಸಲ್ಲಿಸಲು ಕಾಯಬೇಕಾಗಿಲ್ಲ
– ಆನ್ ಲೈನ್ ಗಳಲ್ಲಿ ಅರ್ಜಿ ಸಲ್ಲಿಸಲು ಅವಕಾಶ!
– ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು ಏನೇನು?
NAMMUR EXPRESS NEWS
ಹೊಸ ರೇಷನ್ ಕಾರ್ಡ್ ಅರ್ಜಿಗೆ ಇಲ್ಲಿಯವರೆಗೆ ಜಾತಕ ಪಕ್ಷಿಯಂತೆ ಕಾಯುತ್ತಿದ್ದ ಕುಟುಂಬಗಳಿಗೆ ಈಗ ಸರ್ಕಾರ ಸಿಹಿ ಸುದ್ದಿ ಕೊಟ್ಟಿದೆ. ಆಹಾರ ಇಲಾಖೆಯ ಅಡಿಯಲ್ಲಿ ಇಷ್ಟು ದಿನ ಹೊಸ ರೇಷನ್ ಕಾರ್ಡ್ ವಿತರಣೆಗೆ ತಡೆ ಇದ್ದ ಹಿನ್ನೆಲೆಯಲ್ಲಿ ಹೊಸ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ಇರಲಿಲ್ಲ. ಈಗ ಆಹಾರ ಇಲಾಖೆ ಕಡೆಯಿಂದ ಗ್ರೀನ್ ಸಿಗ್ನಲ್ ಸಿಗುವ ಬಗ್ಗೆ ಸರ್ಕಾರ ಮಹತ್ವದ ಸುಳಿವು ನೀಡಿದೆ.
ಆಹಾರ ಇಲಾಖೆ ವೆಬ್ಸೈಟ್ ರಲ್ಲಿ ಸರ್ಕಾರ ಅರ್ಜಿ ಸಲ್ಲಿಸಲು ಅವಕಾಶ ನೀಡಿದ್ದು, ಅರ್ಹರು ಮೊಬೈಲ್, ಕಂಪ್ಯೂಟರ್, ಸೇವಾಸಿಂಧು ಪೋರ್ಟಲ್ಗಳಲ್ಲಿ ಹೊಸ ಪಡಿತರ ಚೀಟಿಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಈ ಹಿಂದೆ ರೇಷನ್ ಕಾರ್ಡ್ ಗೆ ಸಲ್ಲಿಸಿದ್ದ ಅರ್ಜಿಗಳ ಪರಿಶೀಲನೆ ಸೆಪ್ಟೆಂಬರ್ ಮೊದಲ ವಾರದಲ್ಲಿ ನಡೆಯುತ್ತಿದ್ದು, ಪರಿಶೀಲನೆ ಸಂಪೂರ್ಣವಾಗಿ ಮುಗಿದು, ರೇಷನ್ ಕಾರ್ಡ್ ವಿತರಣೆ ಆದ ತಕ್ಷಣವೆ ಹೊಸ ರೇಷನ್ ಕಾರ್ಡ್ ಅರ್ಜಿಯ್ನು ಸಲ್ಲಿಸಲು ಸೆಪ್ಟೆಂಬರ್ 15 ರಿಂದ 30ನೇ ತಾರೀಕಿನೊಳಗೆ ಯಾವುದಾದರೂ ಒಂದು ದಿನದಲ್ಲಿ ಅವಕಾಶ ಮಾಡಿಕೊಡಲಾಗುತ್ತದೆ ಎಂದು ಆಹಾರ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಅಗತ್ಯ ದಾಖಲೆಗಳಿದ್ದರೆ ಮೇಲೆ ಕಾಣಿಸಿದ ವೆಬೈಟ್ ಮುಖಾಂತರವೇ ತಾವಿದ್ದಲ್ಲಿಂದಲೇ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಆನ್ ಲೈನ್ ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಿದ ಕೆಲವೇ ದಿನಗಳಲ್ಲಿ ಅರ್ಜಿ ಪರಿಶೀಲನೆ ನಡೆಸಲಾಗುವುದು ಎಂದು ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ತಿಳಿಸಿದ್ದಾರೆ.
* ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು
ವೋಟರ್ ಐಡಿ
ಆಧಾರ್ ಕಾರ್ಡ್
ವಯಸ್ಸಿನ ಪ್ರಮಾಣ ಪತ್ರ
ಡ್ರೈವಿಂಗ್ ಲೈಸೆನ್ಸ್
ಪಾರ್ಸ್ ಪೋರ್ಟ್ ಭಾವಚಿತ್ರ
ಮೊಬೈಲ್ ಸಂಖ್ಯೆ
ಸ್ವಯಂ ಘೋಷಿತ ಪ್ರಮಾಣ ಪತ್ರ