ಅಯ್ಯೋ ದೇವ್ರೇ ಫೆಂಗಲ್ ಅಬ್ಬರ ಶುರು!
– ರಾಜ್ಯದ 10 ಜಿಲ್ಲೆಗಳ ಜಿಲ್ಲಾಡಳಿತಗಳ ಸಿದ್ಧತೆ
– ಎಲ್ಲೆಲ್ಲಿ ಭಾರೀ ತೊಂದರೆ?: ಜನರಿಗೆ ಎಚ್ಚರಿಕೆ
– 10 ಜಿಲ್ಲೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
NAMMUR EXPRESS NEWS
ಬೆಂಗಳೂರು: ಫೆಂಗಲ್ ಚಂಡಮಾರುತ ಕರಾವಳಿಗೆ ಅಪ್ಪಳಿಸಿದ್ದು, ಡಿಸೆಂಬರ್ 2ರ ಸಂಜೆಯಿಂದ ಧಾರಾಕಾರ ಮಳೆ ಸುರಿಯಲು ಆರಂಭವಾಗಿದೆ. ಗುಡುಗು ಮಿಂಚು ಸಹಿತವಾಗಿ ಜಿಲ್ಲೆಯಾದ್ಯಂತ ಮಳೆಯಾಗುತ್ತಿದೆ, ಡಿಸೆಂಬರ್ 3 ರಂದು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಸರ್ಕಾರಿ ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಡಿಸೆಂಬರ್ 3 ರಂದು ಆರಂಜೆ ಅಲರ್ಟ್ ಘೋಷಣೆ ಮಾಡಲಾಗಿದ್ದು, ಡಿಸೆಂಬರ್ 4ರ ಬಳಿಕ ಚಂಡಮಾರುತದ ಎಫೆಕ್ಟ್ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಯಾವ ಯಾವ ಜಿಲ್ಲೆಯಲ್ಲಿ ತೊಂದರೆ?
ಕರ್ನಾಟಕದಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ, ರಾಮನಗರ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹೆಚ್ಚು ಪರಿಣಾಮ ಆಗಲಿದೆ ಎಂಬ ಮುನ್ಸೂಚನೆ ಇದೆ. ಇನ್ನು, ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ, ಉತ್ತರಕನ್ನಡ, ತುಮಕೂರು, ಹಾವೇರಿ ಜಿಲ್ಲೆಗಳ ಮೇಲೂ ನಿಗಾ ಇಡುವಂತೆ ಕೇಂದ್ರ ಹವಾಮಾನ ಇಲಾಖೆ ಹೇಳಿದೆ. ಹೀಗಾಗಿ, ಫೆಂಗಲ್ನಿಂದ ಹೆಚ್ಚು ಮಳೆಯಾಗಬಹುದು ಎಂಬ ಮುನ್ಸೂಚನೆ ಇರುವ 10 ಜಿಲ್ಲೆಗಳ ಜಿಲ್ಲಾಡಳಿತಗಳು ಮುಂಜಾಗ್ರತಾ ಕ್ರಮವಾಗಿ ಶಾಲೆ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮೈಸೂರು, ಮಂಡ್ಯ, ಚಾಮರಾಜನಗರ, ಕೋಲಾರ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಚಿಕ್ಕಬಳ್ಳಾಪುರ, ರಾಮನಗರ ಜಿಲ್ಲೆಗಳಲ್ಲಿ ಇಂದು ಶಾಲೆಗಳಿಗೆ ರಜೆ ನೀಡಲಾಗಿದೆ.