ರಾಜ್ಯದ ಜನತೆಗೆ ಪವರ್ ಕಟ್ ಶಾಕ್..!
– ಅನಧಿಕೃತ ಲೋಡ್ ಶೆಡ್ಡಿಂಗ್ ಆರಂಭ!
– ವಿದ್ಯುತ್ ಸಮಸ್ಯೆಗೆ ಸಾರ್ವಜನಿಕರ ಆಕ್ರೋಶ
NAMMUR EXPRESS NEWS
ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಕೊರತೆಯಿಂದಾಗಿ ವಿದ್ಯುತ್ ಉತ್ಪಾದನೆಯಲ್ಲಿ ಕುಸಿತ ಹಾಗೂ ಬೇಡಿಕೆಯಲ್ಲಿ ತೀವ್ರಗತಿಯ ಹೆಚ್ಚಳವಾಗಿರುವುದರಿಂದ ಸದ್ದಿಲ್ಲದೇ ಲೋಡ್ ಶೆಡ್ಡಿಂಗ್ ಜಾರಿಯಾಗಿದೆ. ರಾಜ್ಯದಲ್ಲಿ ಈ ಬಾರಿ ಮಳೆ ಕೈಕೊಟ್ಟಿರುವುದರಿಂದ ನಿರೀಕ್ಷೆಯಂತೆ ವಿದ್ಯುತ್ ಉತ್ಪಾದನೆ ಆಗುತ್ತಿಲ್ಲ. ಪ್ರತಿ ನಿತ್ಯ ಅಗತ್ಯಕ್ಕಿಂತ 40ರಿಂದ 50 ಮಿಲಿಯನ್ ಯೂನಿಟ್ ವಿದ್ಯುತ್ ಕೊರತೆ ಎದುರಿಸುತ್ತಿದೆ. ಹೀಗಾಗಿ ರಾಜ್ಯದಲ್ಲಿ ಅಘೋಷಿತ ಲೋಡ್ ಶೆಡ್ಡಿಂಗ್ ಶುರುವಾಗಿದ್ದು, ವಿದ್ಯುತ್ ಸಮಸ್ಯೆಯಿಂದ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಈಗಾಗಲೇ ರೈತರ ಬೆಳೆಗಳು ಸಂಪೂರ್ಣವಾಗಿ ನೆಲಕಚ್ಚಿದೆ. ಈ ನಡುವೆ ತೋಟಗಾರಿಕೆ ಬೆಳೆಗಳು ಉಳಿಸಿಕೊಳ್ಳಲು ವಿದ್ಯುತ್ ಸಮಸ್ಯ ಎದುರಾಗಿದ್ದು, ರೈತರು ಕಂಗಾಲಾಗಿದ್ದಾರೆ. ರಾಜ್ಯದಲ್ಲಿ ಇದೇ ಪರಿಸ್ಥಿತಿ ಮುಂದುವರೆಯುವ ಸಾಧ್ಯತೆ ಹಿನ್ನೆಲೆಯಲ್ಲಿ ಪರಿಸ್ಥಿತಿ ನಿಭಾಯಿಸಲು ಇಲಾಖೆಯು ಉತ್ತರ ಪ್ರದೇಶ ಮತ್ತು ಪಂಜಾಬ್ ರಾಜ್ಯಗಳಿಂದ ವಿನಿಮಯ ಯೋಜನೆಯಡಿ ವಿದ್ಯುತ್ ಪಡೆಯಲು ಕ್ರಿಯಾ ಯೋಜನೆ ಸಿದ್ಧಪಡಿಸಿದೆ ಎನ್ನಲಾಗಿದೆ.