ರಾಜ್ಯದೆಲ್ಲೆಡೆ ಮಳೆ ಕಂಟಕ!!
* ಅಬ್ಬರಿಸುತ್ತಿರುವ ಭಾರಿ ಮಳೆ
* ಎಲ್ಲೆಲಿ ಅಲರ್ಟ್ ಘೋಷಣೆ??
NAMMUR EXPRESS NEWS
ಬೆಂಗಳೂರು: ಕರ್ನಾಟಕದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಉತ್ತರ ಒಳನಾಡಿನಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು,ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
ದಕ್ಷಿಣ ಒಳನಾಡಿನ ತುಮಕೂರು, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ಮೈಸೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು ಸೇರಿದಂತೆ ವಿಜಯನಗರದಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯೊಂದಿಗೆ ವ್ಯಾಪಕವಾದ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.
ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗದಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿಯಲ್ಲಿ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಎಲ್ಲೆಲ್ಲಿ ಅಲರ್ಟ್ ಘೋಷಣೆ?
ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಐಎಂಡಿ ಯೆಲ್ಲೋ ಅಲರ್ಟ್ ಘೋಷಿಸಿದೆ.