ದೀಪಾವಳಿಗೆ ಮಳೆ ಅಡ್ಡಿ!
– ಮೂರು ದಿನ ಮಳೆ: ಹಲವೆಡೆ ಮಳೆ ಆರ್ಭಟ
– ಏನಿದು ಮಳೆ ಬಿಡೋದು ಯಾವಾಗ ದೇವ್ರೇ?
NAMMUR EXPRESS NEWS
ಬೆಂಗಳೂರು: ರಾಜ್ಯದ ಕೆಲವೆಡೆ ದೀಪಾವಳಿಗೆ ಮಳೆ ಅಡ್ಡಿ ಆಗಿದೆ. ಇನ್ನೂ ಮೂರು ದಿನ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶಿವಮೊಗ್ಗ, ಚಿಕ್ಕಮಗಳೂರು, ಕರಾವಳಿ ಸೇರಿ ರಾಜ್ಯದ ಹಲವು ಕಡೆ ಮಳೆ ಸುರಿಯುತ್ತಿದೆ. ಇದು ದೀಪಾವಳಿ ಸಂಭ್ರಮಕ್ಕೆ ನೀರೆರಚಿದೆ. ಮೂರು ದಿನ ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಒಳನಾಡು ಮತ್ತು ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ನ.3ರವರೆಗೆ ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೊಡಗು, ಚಿಕ್ಕಮಗಳೂರು ಮತ್ತು ಚಾಮರಾಜನಗರ ಜಿಲ್ಲೆಗಳ ಕೆಲವು ಭಾಗದಲ್ಲಿ ವ್ಯಾಪಕ ಮಳೆಯಾಗಲಿದ್ದು, ಯೆಲ್ಲೊ ಅಲರ್ಟ್ನ ಎಚ್ಚರಿಕೆ ನೀಡಲಾಗಿದೆ. ವಿಜಯನಗರ ಜಿಲ್ಲೆಯ ಹರಪನ ಹಳ್ಳಿಯಲ್ಲಿ 5, ಸೆಂ. 2, ಹಾವೇರಿ ಜಿಲ್ಲೆಯ ಹಾವೇರಿ ಯಲ್ಲಿ 4 ಸೆಂ.ಮೀ, ಧಾರವಾಡ, ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ, ತುಮಕೂರು ಜಿಲ್ಲೆಯ ತಿಪಟೂರು, ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಗುರುವಾರ ತಲಾ 3 ಸೆಂ.ಮೀ ಮಳೆಯಾಗಿದೆ.