Categories
ರಾಜ್ಯ

ಇಂದಿನಿಂದ ಮುಂದಿನ 5 ದಿನ ಮಳೆ!?: ಭಾರೀ ಚಳಿ!

ಇಂದಿನಿಂದ ಮುಂದಿನ 5 ದಿನ ಮಳೆ!?: ಭಾರೀ ಚಳಿ!
– ಡಿಸೆಂಬರ್‌ 28ರವರೆಗೂ ಭಾರೀ ಮಳೆ ಎಂದು ಮುನ್ಸೂಚನೆ
– ಹಲವು ಪ್ರದೇಶಗಳಲ್ಲಿ ಹೈ ಅಲರ್ಟ್​ ಘೋಷಣೆ

NAMMUR EXPRESS NEWS
ಬೆಂಗಳೂರು: ಇಂದಿನಿಂದ ಮುಂದಿನ ಐದು ದಿನಗಳ ಕಾಲ ಕರ್ನಾಟಕದ ಈ ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಡಿಸೆಂಬರ್‌ 28ರವರೆಗೂ ಹಲವು ಪ್ರದೇಶಗಳಲ್ಲಿ ಭಾರೀ ಮಳೆ ಬೀಳಲಿದ್ದು, ಹೈ ಅಲರ್ಟ್​ ಘೋಷಣೆ ಮಾಡಲಾಗಿದೆ. ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದೇಶಾದ್ಯಂತ ಭಾರೀ ಚಳಿ!

ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮಳೆ ಜೊತೆಗೆ ಚಳಿ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಡಿಸೆಂಬರ್ 30ವರೆಗೆ ಕರ್ನಾಟಕದ ಉತ್ತರ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ವರುಣನ ಆರ್ಭಟ ಜೋರಾಗಿ ಇರಲಿದೆ. ಇಂದು ರಾಜ್ಯದ ಆಯ್ದ ಪ್ರದೇಶಗಳಲ್ಲಿ ಲಘು ಮಳೆಯಾಗಲಿದೆ. ನಾಳೆ ದಕ್ಷಿಣ ಒಳನಾಡಿನ ಜಿಲ್ಲೆಗಳು ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ನಾಡಿದ್ದು ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಉತ್ತರ ಒಳನಾಡಿನ ಪ್ರದೇಶಗಳಲ್ಲಿ ಲಘು ಮಳೆ ಬೀಳಬಹುದು. ಡಿಸೆಂಬರ್ 27ರ ವೇಳೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.