Categories
ರಾಜ್ಯ

ದಸರಾ ಸಂಭ್ರಮಕ್ಕೆ ಮಳೆ ಅಡ್ಡಿ!

ದಸರಾ ಸಂಭ್ರಮಕ್ಕೆ ಮಳೆ ಅಡ್ಡಿ!

– ರಾಜ್ಯದಲ್ಲಿ ಒಂದು ವಾರ ಮಳೆ ಅಲರ್ಟ್ 
– ಮಲೆನಾಡಲ್ಲಿ ಭೀಕರ ಮಳೆ 

NAMMUR EXPRESS NEWS 

ಬೆಂಗಳೂರು: ಕರ್ನಾಟಕದಲ್ಲಿ ಮತ್ತೆ ಮಳೆ ಶುರುವಾಗಿದ್ದು, ಹಲವೆಡೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಅತೀ ಹೆಚ್ಚು ಮಳೆ ಸುರಿಯುತ್ತಿದ್ದು, ದಸರಾ ಸಂಭ್ರಮಕ್ಕೆ ಮಂಕು ಆವರಿಸಿದೆ.

ಮೈಸೂರು ಸೇರಿ ರಾಜ್ಯದಲ್ಲಿ ಎಲ್ಲಾ ಕಡೆ ದಸರಾ ಸಂಭ್ರಮ ಕಳೆಗಟ್ಟಿದೆ. ಗುರುವಾರದಿಂದ ರಜೆ ಕೂಡ ಇದೆ. ಆದರೆ ಮಳೆ ಸಂಭ್ರಮಕ್ಕೆ ಅಡ್ಡಿ ಮಾಡಿದೆ.

ಬೆಂಗಳೂರಿನಲ್ಲಿ ಬುಧವಾರ ರಾತ್ರಿಯಿಂದಲೇ ಮಳೆ ಶುರುವಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈಗಾಗಲೇ ಈ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.