ಬಿಜೆಪಿ ಮಾಜಿ ಸಂಸದನ ಮಗನ ವಿರುದ್ಧ ರೇಪ್ ಕೇಸ್!
– ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಆರೋಪ
– ಕರ್ನಾಟಕ – ಕೇರಳ ಗಡಿಯಲ್ಲಿ ನಕ್ಸಲ್ ಅಲರ್ಟ್
NAMMUR EXPRESS NEWS
ಬಳ್ಳಾರಿ: ಬಳ್ಳಾರಿ ಬಿಜೆಪಿ ಸಂಸದ ದೇವೇಂದ್ರಪ್ಪ ಅವರ ಪುತ್ರ ರಂಗನಾಥ್ ಅವರು ಯುವತಿಯೊಬ್ಬರಿಗೆ ಮದುವೆಯಾಗುವುದಾಗಿ ನಂಬಿಸಿ, ಆಕೆಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿದ ಆರೋಪ ಕೇಳಿಬಂದಿದೆ.
ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಉಪನ್ಯಾಸರಾಗಿ ಕಾರ್ಯನಿರ್ವಹಿಸುತ್ತಿರುವ ರಂಗನಾಥ್ ಅವರ ವಿರುದ್ಧ ಬೆಂಗಳೂರು ಮೂಲದ ಯುವತಿ ಪೊಲೀಸರಿಗೆ ದೂರು ನೀಡಿದ್ದು, ಮದುವೆಯಾಗುವುದಾಗಿ ನಂಬಿಸಿ ಲೈಂಗಿಕವಾಗಿ ಬಳಿಸಿಕೊಂಡು ಇದೀಗ ಮೋಸ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಯುವತಿ ನೀಡಿದ ದೂರಿನ ಆಧಾರದ ಮೇಲೆ ಬೆಂಗಳೂರಿನ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಒಂದೂವರೆ ವರ್ಷದ ಹಿಂದೆ ಪಾರ್ಟಿವೊಂದರಲ್ಲಿ ಯುವತಿಯನ್ನು ಪರಿಚಯ ಮಾಡಿಕೊಂಡಿರುವ ರಂಗನಾಥ್, ಬಳಿಕ ಮೈಸೂರಿನ ಹೋಟೆಲ್ನಲ್ಲಿ ಆಕೆಯ ಜೊತೆ ಲೈಂಗಿಕ ಸಂಪರ್ಕ ಬೆಳೆಸಿದ್ದಾರೆ ಎಂದು ಆರೋಪಿಸಲಾಗಿದೆ. ಆದರೆ ಈಗ ಮದುವೆಯಾಗಲು ಹಿಂದೇಟು ಹಾಕುತ್ತಿದ್ದಾರೆ ಎಂದು ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ಇಬ್ಬರಿಗೂ ನೋಟಿಸ್ ಜಾರಿ ಮಾಡಿದ್ದಾರೆ. ವಿಚಾರಣೆಗೆ ಬರುವಂತೆ ರಂಗನಾಥ್ ಅವರಿಗೆ ನೋಟಿಸ್ ನೀಡಲಾಗಿದೆ ಮತ್ತು ಯುವತಿಗೆ ಸೂಕ್ತ ದಾಖಲೆ ಸಮೇತ ಠಾಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಲಾಗಿದೆ.
ರಂಗನಾಥ್ ಅವರು ಸಹ ಯುವತಿ ವಿರುದ್ಧ ಮೈಸೂರು ನಗರದ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರತಿ ದೂರು ದಾಖಲಿಸಿದ್ದಾರೆ. ನನ್ನ ಖಾಸಗಿ ಫೋಟೋಗಳು ಮತ್ತು ವಿಡಿಯೋಗಳನ್ನು ಇಟ್ಟುಕೊಂಡು ಯುವತಿ ನನಗೆ ಬ್ಲಾಕ್ಮೇಲ್ ಮಾಡುತ್ತಿದ್ದು, 15 ಲಕ್ಷ ರೂ.ಗೆ ಬೇಡಿಕೆ ಇಟ್ಟಿರುವುದಾಗಿ ಎಂದು ಆರೋಪಿಸಿದ್ದಾರೆ. ಈ ಸಂಬಂಧ ವಿಜಯನಗರ ಪೊಲೀಸರು ಸಂತ್ರಸ್ಥ ಯುವತಿ ಮತ್ತು ಮತ್ತೊಬ್ಬ ವ್ಯಕ್ತಿ ಶ್ರೀನಿವಾಸ್ ಎಂಬುವವರ ವಿರುದ್ಧ ದೂರು ದಾಖಲಿಸಿದ್ದಾರೆ.
ಕರ್ನಾಟಕ ಗಡಿಯಲ್ಲಿ ನಕ್ಸಲ್ ಅಲರ್ಟ್
ಕೇರಳ-ಕರ್ನಾಟಕದ ಕಣ್ಣೂರು- ಕೊಡಗು ಗಡಿ ಪ್ರದೇಶದಲ್ಲಿ ಕೇರಳ ನಕ್ಸಲ್ ನಿಗ್ರಹ ಪಡೆ (ತಂಡರ್ ಬೋಲ್ಟ್) ಮತ್ತು ನಕ್ಸಲರ ಮಧ್ಯೆ ನ. 15ರಂದು ರಾತ್ರಿ ಗುಂಡಿನ ಚಕಮಕಿ ನಡೆದಿದ್ದು, ಓರ್ವ ನಕ್ಸಲ್ ಗಾಯಗೊಂಡಿದ್ದಾನೆ. ಉಂಧ್ರಪ್ರದೇಶದ ಲನಾ ಮತ್ತು ತಮಿಳುನಾಡಿನ ವನಜಾಕ್ಷಿ ಪದಾರಿಯಾಗಿದ್ದಾರೆ ಅರಣ್ಯದಿಂದ ಪರಾರಿಯಾಗಿರುವ ಈ ಇಬ್ಬರು ಬಸ್ನಲ್ಲಿ ರೈಲು ನಿಲ್ದಾಣಕ್ಕೆ ಬಂದು ಅಲ್ಲಿಂದ ರೈಲಿನಲ್ಲಿ ಪ್ರಯಾಣಿಸುವ ಸಾಧ್ಯತೆಯ ಹಿನ್ನೆಲೆಯಲ್ಲಿ ಕಾಸರಗೋಡು ಸಹಿತ ರಾಜ್ಯದ ಎಲ್ಲ ರೈಲು ನಿಲ್ದಾಣಗಳಲ್ಲಿ ಪೊಲೀಸರು ಬೀಗು ಶಾಸಣೆ ನಡೆಸುತ್ತಿದ್ದಾರೆ. ಮಾತ್ರವಲ್ಲ ಕಣ್ಣೂರು ಜಿಲ್ಲೆಯಲ್ಲಿ ಅಲರ್ಟ್ ಘೋಷಿಸಲಾಗಿದೆ.
ಗುಂಡಿನ ಚಕಮಕಿ ನಡೆದ ಸ್ಥಳದಿಂದ ಮೂರು ರೈಫಲ್ಗಳು, ಒಂದು ಲ್ಯಾಪ್ಟಾಪ್, ನಾಲ್ಕು ಮೊಬೈಲ್ ಫೋನ್ಗಳು ಹಾಗು ಎರಡು ಟೆಂಟ್ಗಳನ್ನು ವಶಪಡಿಸಲಾಗಿದೆ. ಈ ಸ್ಥಳದಲ್ಲಿ 9 ಮಂದಿ ನಕ್ಸಲರು ಇದ್ದಿರಬಹುದೆಂದು ಶಂಕಿಸಲಾಗಿದೆ. ಪರಾರಿಯಾಗಿದ್ದವರು ಕಬಿನಿ ದಳದವರಾಗಿದ್ದಾರೆ. ಈ ದಳದ ಮುಖಂಡ ಮೊದೀನ್ ಈ ಪ್ರದೇಶದಲ್ಲಿ ತಂಗಿದ್ದನೆಂದು ಪೊಲೀಸರಿಗೆ ಮಾಹಿತಿ ಲಭಿಸಿದೆ. ಹೆಚ್ಚುವರಿ ಪೊಲೀಸ್ ಪಡೆಯನ್ನು ಸ್ಥಳಕ್ಕೆ ಕಳುಹಿಸಲಾಗಿದೆ.