ಬಿಜೆಪಿ ಹಿರಿಯ ಕೊಂಡಿ ಭಾನುಪ್ರಕಾಶ್ ಇನ್ನಿಲ್ಲ!
– ಮಾಜಿ ಎಂಎಲ್ಸಿ ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ
– ಶಿವಮೊಗ್ಗದಲ್ಲಿ ಘಟನೆ: ಬಿಜೆಪಿ ನಾಯಕರ ಸಂತಾಪ
NAMMUR EXPRESS NEWS
ಶಿವಮೊಗ್ಗ : ಬಿಜೆಪಿಯ ಹಿರಿಯ ನಾಯಕ ಎಂ ಬಿ ಭಾನುಪ್ರಕಾಶ್ ಅವರು ನಿಧನರಾಗಿದ್ದಾರೆ. ಮಾಜಿ ಎಂಎಲ್ಸಿ ಎಂಬಿ ಭಾನುಪ್ರಕಾಶ್, ಹೃದಯಾಘಾತದಿಂದ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಶಿವಮೊಗ್ಗ ತಾಲೂಕಿನ ಮತ್ತೂರು ಗ್ರಾಮದ ಎಂ ಬಿ ಭಾನುಪ್ರಕಾಶ್ ಬಿಜೆಪಿ ಸಂಘಟನೆಯಲ್ಲಿ ಹಲವಾರು ಹುದ್ದೆಗಳನ್ನು ನಿರ್ವಹಿಸಿದ್ದರು.
ಶಿವಮೊಗ್ಗ ಜಿಲ್ಲೆಯ ಮತ್ತೂರಿನವರಾದ ಭಾನುಪ್ರಕಾಶ್ 2019ರಲ್ಲಿ ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿ ಕೂಡ ಇವರು ಕರ್ತವ್ಯ ನಿರ್ವಹಿಸಿದ್ದರು. ಭಾನುಪ್ರಕಾಶ್ ಬಿಜೆಪಿಯ ಹಿರಿಯ ಮುಖಂಡ. ಸರಳ, ಸಜ್ಜನ ಎಂಬ ಹೆಗ್ಗಳಿಕೆ. ಸತ್ಯ, ನ್ಯಾಯ, ನಿಷ್ಠೆಯ ಪರವಾಗಿ ಮಾತನಾಡುವ ಉತ್ತಮ ವಾಗ್ಮಿ. ಗಾಜನೂರು ಜಿ.ಪಂ. ಕ್ಷೇತ್ರದಿಂದ ಆಯ್ಕೆಯಾಗಿದ್ದ ಭಾನುಪ್ರಕಾಶ್ 2001ರಿಂದ 2005ರ ಅವಧಿಯಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದರು. ಬಳಿಕ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದರು.
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ನಾಯಕ!
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಟ್ಟಾ ಅನುಯಾಯಿಯಾಗಿದ್ದ ಭಾನುಪ್ರಕಾಶ್, ಮಾಜಿ ಮುಖ್ಯಮಂತ್ರಿ ದಿವಂಗತ ಎಸ್.ಬಂಗಾರಪ್ಪ ಬಿಜೆಪಿ ತೊರೆದು ಸಮಾಜವಾದಿ ಪಕ್ಷದಿಂದ ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಸ್ಪರ್ಧಿಸಿದ್ದಾಗ ಬಿಜೆಪಿಯಿಂದ ಬಂಗಾರಪ್ಪ ಎದುರು ನಿಂತಿದ್ದರು. ಬಿಜೆಪಿಯ ಸಕ್ರಿಯ ಕಾರ್ಯಕರ್ತನಾಗಿ ಪಕ್ಷ ಕಟ್ಟುವಲ್ಲಿ ಶ್ರಮಿಸಿದವರು.
ಭಾನುಪ್ರಕಾಶ್ ಬಿಜೆಪಿಯ ಹಿರಿಯ ಮುಖಂಡ. ಸರಳ, ಸಜ್ಜನ ಎಂಬ ಹೆಗ್ಗಳಿಕೆ. ಸತ್ಯ, ನ್ಯಾಯ, ನಿಷ್ಠೆಯ ಪರವಾಗಿ ಮಾತನಾಡುವ ಉತ್ತಮ ವಾಗ್ಮಿ. ಗಾಜನೂರು ಜಿ.ಪಂ. ಕ್ಷೇತ್ರದಿಂದ ಆಯ್ಕೆಯಾಗಿದ್ದ ಭಾನುಪ್ರಕಾಶ್ 2001ರಿಂದ 2005ರ ಅವಧಿಯಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದರು. ಬಳಿಕ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಮಾಜಿ ಮುಖ್ಯಮಂತ್ರಿ ದಿವಂಗತ ಎಸ್.ಬಂಗಾರಪ್ಪ ಬಿಜೆಪಿ ತೊರೆದು ಸಮಾಜವಾದಿ ಪಕ್ಷದಿಂದ ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಸ್ಪರ್ಧಿಸಿದ್ದಾಗ ಬಿಜೆಪಿಯಿಂದ ಅವರಿಗೆ ಎದುರು ನಿಂತವರು ಇದೇ ಎಂ.ಬಿ.ಭಾನುಪ್ರಕಾಶ್.
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಟ್ಟಾ ಅನುಯಾಯಿಯಾಗಿರುವ ಭಾನುಪ್ರಕಾಶ್, ತಮ್ಮ ಮಾತುಗಾರಿಕೆ, ಸರಳತೆಯಿಂದಲೇ ಗುರುತಿಸಿಕೊಂಡವರು. ಬಿಜೆಪಿಯ ಸಕ್ರಿಯ ಕಾರ್ಯಕರ್ತನಾಗಿ ಪಕ್ಷ ಕಟ್ಟುವಲ್ಲಿ ಬೆವರು ಸುರಿಸಿದವರು.
ಭಾನುಪ್ರಕಾಶ್ ಸಾವಿಗೆ ಗಣ್ಯರು ಕಂಬನಿ ವ್ಯಕ್ತಪಡಿಸಿದ್ದಾರೆ.