Categories
ರಾಜ್ಯ

ಪಡಿತರ ಚೀಟಿ ತಿದ್ದುಪಡಿಗೆ ಸರ್ವರ್ ಸಮಸ್ಯೆ.

ಪಡಿತರ ಚೀಟಿ ತಿದ್ದುಪಡಿಗೆ ಸರ್ವರ್ ಸಮಸ್ಯೆ.
– ಜನರಿಗೆ ದಿನನಿತ್ಯ ಕಚೇರಿಗೆ ಅಲೆದಾಡುವ ಪಡಿಪಾಟಲು!
– ಸೆ.1ರಿಂದ 10ವರೆಗೆ ತಿದ್ದುಪಡಿ, ಸೇರ್ಪಡೆಗೆ ಅವಕಾಶ ಕಲ್ಪಿಸಿದ ಆಹಾರ ಇಲಾಖೆ.
– ತಹಶಿಲ್ದಾರ ನಿರ್ಲಕ್ಷ್ಯ.

NAMMUR EXPRESS NEWS
ಉತ್ತರ ಕನ್ನಡ : ಉತ್ತರ ಕನ್ನಡ ಜಿಲ್ಲೆಯಲ್ಲಿ ಪಡಿತರ ಚೀಟಿಗಳನ್ನು ತಿದ್ದುಪಡಿ ಅಥವಾ ಪರಿಷ್ಕರಣೆ ಮಾಡುವ ಪ್ರಕ್ರಿಯೆಗೆ ತೊಂದರೆಯಾಗಿದೆ. ತಹಶೀಲ್ದಾರ್ ಕಚೇರಿಯಲ್ಲಿ ತಿದ್ದುಪಡಿ ಮಾಡಿಸಬೇಕಿದೆ. ಆನ್ ಲೈನ್ ನಲ್ಲೇ ಹೊಸ ಹೆಸರು ಸೇರ್ಪಡೆ, ವಿಳಾಸ ಬದಲಾವಣೆ ಇತ್ಯಾದಿ ಮಾಡಬೇಕಿದೆ. ಆದರೆ, ಇತ್ತೀಚೆಗೆ ಸರ್ವರ್ ಸಮಸ್ಯೆ ಕಾಡಲಾರಂಭಿಸಿದ್ದು ಆನ್ ಲೈನ್ ಮೂಲಕ ನಡೆಯಬೇಕಿರುವ ಈ ತಿದ್ದುಪಡಿ ಕಾರ್ಯ ಆಗುತ್ತಿಲ್ಲ. ತಮ್ಮ ಕೆಲಸಗಳನ್ನು ಬಿಟ್ಟು ತಾಲೂಕು ಕಚೇರಿಗೆ ಆಗಮಿಸುತ್ತಿರುವ ಜನರು ನಿರಾಸೆಯಿಂದ ಹಿಂದಿರುಗುವಂತಾಗಿದೆ. ಕಳೆದ ಒಂದೂವರೆ ತಿಂಗಳಿನಿಂದ ಇಂಥದ್ದೊಂದು ಸಮಸ್ಯೆ ಕಾಡಲಾರಂಭಿಸಿದೆ.

ಕಾರವಾರ: ತಹಶೀಲ್ದಾರ್ ಕಚೇರಿಗೆ ಪಡಿತರ ಚೀಟಿ ತಿದ್ದುಪಡಿ ಮಾಡಿಸಲು ಆಗಮಿಸುವ ಗ್ರಾಮೀಣ ಭಾಗದ ಸಾರ್ವಜನಿಕರಿಗೆ ಕಂಪ್ಯೂಟರ್‌ನಲ್ಲಿ ಸರ್ವರ್ ಬ್ಯುಸಿ (ತಾಂತ್ರಿಕ ದೋಷ) ಸಮಸ್ಯೆ ಕಾಡುತ್ತಿದೆ. ಕಳೆದ ಒಂದೂವರೆ ತಿಂಗಳಿಂದ ಜಿಪಿಎಸ್ ಸರ್ವರ್ ಸಮಸ್ಯೆಯಿಂದಾಗಿ ಗ್ರಾಮಾಂತರ ಭಾಗದ ಜನರು ತಮ್ಮ ಕೆಲಸ ಕಾರ್ಯಗಳನ್ನು ಬಿಟ್ಟು ತಾಲ್ಲೂಕು ಕಚೇರಿಗೆ ಬಂದರೂ, ತಿದ್ದುಪಡಿ ಕಾರ್ಯ ಪೂರ್ಣವಾಗದೇ ನಿರಾಸೆಯಿಂದ ವಾಪಸ್ಸಾಗುವಂತಾಗಿದೆ. ಸರ್ಕಾರ ವಿವಿಧ ಸೇವೆಗಳನ್ನು ಜನಸಾಮಾನ್ಯರಿಗೆ ತಲುಪಿಸಲು ಮತ್ತು ಜನರಿಗೆ ಅವಶ್ಯವಿರುವ ದಾಖಲಾತಿಗಳನ್ನು ಪೂರೈಸಲು ಇದೀಗ ಆನ್ಲೈನ್ ವ್ಯವಸ್ಥೆ ಜಾರಿಗೊಳಿಸಿದೆ. ಆ ಮೂಲಕವೇ ಸರ್ಕಾರದ ವಿವಿಧ ಸೇವೆಗಳನ್ನು ನೀಡುತ್ತದೆ. ಅದರಲ್ಲಿ ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರ ಇಲಾಖೆಯಿಂದಲೂ ಪಡಿತರಕ್ಕೆ ಸಂಬಂಧಿಸಿದಂತೆ ಹೊಸ ಅರ್ಜಿ ಸ್ವೀಕಾರ, ಹೊಸ ಹೆಸರು ಸೇರ್ಪಡೆ, ಹೆಸರು ಡಿಲಿಟ್ ಮಾಡುವುದು, ವಿಳಾಸ ಬದಲಾವಣೆ, ನ್ಯಾಯಬೆಲೆ ಅಂಗಡಿ ಬದಲಾವಣೆ ಸೇರಿದಂತೆ ಇತ್ಯಾದಿ ಸೇವೆಗಳನ್ನು ಒದಗಿಸಲಾಗುತ್ತದೆ. ಆದರೆ ಕಳೆದ ಒಂದುವರೆ ತಿಂಗಳಿದ ಕಾರವಾರ ಜನತೆಗೆ ಈ ಸೇವೆಗಳು ಧಕ್ಕದಂತಾಗಿದೆ.

ನಿತ್ಯವೂ ತಹಶೀಲ್ದಾರ್ ಕಚೇರಿಗೆ ನೂರಾರು ಜನ ಅಲೆದಾಡುತ್ತಿದ್ದರೂ ದಿನಕ್ಕೊಂದು ಅರ್ಜಿಗಳು ವಿಲೇವಾರಿಯಾಗದಂತಾಗಿದೆ. ಅಧಿಕಾರಿಗಳನ್ನು ಕೇಳಿದರೆ ಸರ್ವರ್ ಸಮಸ್ಯೆ ಕಾರಣ ನೀಡಿ ಅಸಹಾಯಕತೆ ತೋಡಿಕೊಳ್ಳುತ್ತಿದ್ದು, ನಿತ್ಯ ಕೆಲಸ ಕಾರ್ಯ ಬಿಟ್ಟು ದಿನವಿಡಿ ನಿಂತರೂ ಸೇವೆ ಪಡೆಯಲು ಸಾಧ್ಯವಾಗದ ಸ್ಥಿತಿ ಇದೆ.
ಪಡಿತರ ಆನ್ಲೈನ್ ಸೇವೆ ಒದಗಿಸಲು ಎನ್‌ಐಸಿಗೆ ತಂತ್ರಾಶದ ನಿರ್ವಹಣೆ ಜವಾಬ್ದಾರಿ ನೀಡಲಾಗಿದೆ. ಈ ಹಿಂದೆ ದಿನವೊಂದಕ್ಕೆ 70 ಅರ್ಜಿಗಳವರೆಗೆ ವಿಲೇವಾರಿ ಆಗುತ್ತಿತ್ತು. ಆದರೆ ಇದೀಗ ಒಂದು- ಎರಡು ಅರ್ಜಿ ಮಾತ್ರ ವಿಲೇವಾರಿಯಾಗುತ್ತಿದೆ. ಇದರಿಂದ ಜನಸಾಮಾನ್ಯರು ನಿತ್ಯವೂ ಪರದಾಡಬೇಕಾಗಿದೆ ಎಂಬ ದೂರು ಕೇಳಿಬಂದಿದೆ. ಆದರೆ ಈ ಬಗ್ಗೆ ತಹಶಿಲ್ದಾರರನ್ನ ಕೇಳಿದ್ರೆ, ಈಗಾಗಲೇ ಈ ಸಮಸ್ಯೆಯನ್ನು ಆಹಾರ ನಾಗರಿಕ ಸರಬರಾಜು ಇಲಾಖೆ ಆಯುಕ್ತರ ಗಮನಕ್ಕೆ ತಂದಿದ್ದು, ಶೀಘ್ರದಲ್ಲಿಯೇ ಬಗೆಹರಿಸುವ ಭರವಸೆ ನೀಡಿದ್ದರು. ಇನ್ನೊಂದು ವಾರದಲ್ಲಿ ಸಮಸ್ಯೆ ಪರಿಹಾರವಾಗುವ ಸಾಧ್ಯತೆ ಇದೆ.

ಇದನ್ನೂ ಓದಿ : ಮಳೆಗಾಗಿ ಪುಟ್ಟ ಮಕ್ಕಳಿಗೆ ಶಾಸ್ರೋಕ್ತವಾಗಿ ಮದುವೆ ಮಾಡಿದ ಗ್ರಾಮಸ್ಥರು
[embedyt] https://www.youtube.com/watch?v=7aC6PnGPWLU%5B/embedyt%5D

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.