ಬಿಯರ್ ಪ್ರಿಯರಿಗೆ ರಾಜ್ಯ ಸರ್ಕಾರವು ಬಿಗ್ ಶಾಕ್!
– ರಾಜ್ಯದಲ್ಲಿ ಇಂದಿನಿಂದ ಬಿಯರ್ ದರ 10-50 ರೂ ಏರಿಕೆ
– ಸ್ಟ್ರಾಂಗ್ ಬಿಯರ್ ಬೆಲೆ ಏರಿಕೆಯಾಗುವ ಸಾಧ್ಯತೆ!
NAMMUR EXPRESS NEWS
ಬೆಂಗಳೂರು: ಮದ್ಯಪ್ರಿಯರಿಗೆ ಬಿಗ್ ಶಾಕ್ ಎದುರಾಗಿದ್ದು, ಬಜೆಟ್ಗೆ ಮೊದಲೇ ಮದ್ಯದ ದರ ಏರಿಕೆಯಾಗಿದೆ. 10 ರೂಪಾಯಿಯಿಂದ 45 ರೂಪಾಯಿ ವರೆಗೂ ಬೆಲೆ ಏರಿಕೆಯಾಗಿದ್ದು ಇಂದಿನಿಂದಲೇ ಪರಿಷ್ಕೃತ ದರ ಜಾರಿಯಾಗಿದೆ. ರಾಜ್ಯ ಸರ್ಕಾರವು ಬಿಯರ್ ಬೆಲೆಯಲ್ಲಿ 10 ರಿಂದ 50 ರೂ.ವರೆಗೆ ಹೆಚ್ಚಳ ಮಾಡಲು ನಿರ್ಧರಿಸಿದೆ ಎನ್ನಲಾಗಿದ್ದು, ಬಿಯರ್ ನಲ್ಲಿನ ಅಲ್ಕೊಹಾಲ್ ಅಂಶದ ಮೇಲೆ ದರ 10 ರಿಂದ 50 ರೂ.ವರೆಗೆ ಹೆಚ್ಚಳ ಮಾಡಲು ನಿರ್ಧರಿಸಿದೆ ಎಂದು ಹೇಳಲಾಗಿದೆ. ಕಡಿಮೆ ಅಲ್ಕೊಹಾಲ್ ಅಂಶವಿರುವ ಬಿಯರ್ ಗಳ ಬೆಲೆ ಯಥಾಸ್ಥಿತಿ ಇರಲಿದ್ದು, ಸ್ಟ್ರಾಂಗ್ ಬಿಯರ್ ಗಳ ಬೆಲೆ ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಇಂದಿನಿಂದಲೇ ದರ ಹೆಚ್ಚಳ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈ ಮೂಲಕ ಬಿಯರ್ ಪ್ರಿಯರಿಗೆ ರಾಜ್ಯ ಸರ್ಕಾರವು ಬಿಗ್ ಶಾಕ್ ನೀಡಿದೆ. 2024-25ನೇ ಸಾಲಿನ ಬಜೆಟ್ನಲ್ಲಿ ಮುಖ್ಯಮಂತ್ರಿ ಐಎಂಎಲ್ ಹಾಗೂ ಬಿಯರ್ ಸ್ಪ್ಯಾಬ್ಗಳನ್ನು ಪರಿಷ್ಕರಿಸಲಾಗುವುದು ಎಂದು ಪ್ರಕಟಿಸಿದ್ದರು. ಅದರಂತೆ, ಐಎಂಎಲ್ ದರ ಪರಿಷ್ಕರಿಸಲಾಗಿತ್ತು. ಆದರೆ, ಬಿಯರ್ ಮೇಲಿನ ಹೆಚ್ಚುವರಿ ಅಬಕಾರಿ ಸುಂಕವನ್ನು ಅಲೋಹಾಲ್ ಪ್ರಮಾಣಕ್ಕೆ ತಕ್ಕಂತೆ ಪರಿಷ್ಕರಿಸಲು ಕಳೆದ ಆಗಸ್ಟ್ ನಲ್ಲಿಯೇ ಕರಡು ಅಧಿಸೂಚನೆ ಪ್ರಕಟಿಸಿ, ಆಕ್ಷೇಪಣೆ ಆಹ್ವಾನಿಸಿತ್ತು. ಆಗಲೇ ಸುಂಕ ಏರಿಕೆ ಕಡತ ಸಿದ್ಧಪಡಿಸಿ ಮುಖ್ಯಮಂತ್ರಿಗಳ ಅನುಮೋದನೆಗೆ ಸಲ್ಲಿಸಲಾಗಿತ್ತು. ಆದರೆ, ನಾನಾ ಕಾರಣಗಳಿಂದ ಆ ಕಡತಕ್ಕೆ ಸಿಎಂ ಸಿದ್ದರಾಮಯ್ಯ ಸಹಿ ಹಾಕಿರಲಿಲ್ಲ. ಈಗ, ಸಿಎಂ ಸುಂಕ ಏರಿಕೆಗೆ ಸಮ್ಮತಿಸಿರುವ ಹಿನ್ನೆಲೆಯಲ್ಲಿ ಸರ್ಕಾರ ಬಿಯರ್ ಬೆಲೆಯನ್ನು ಹೆಚ್ಚಳ ಮಾಡಲಿದೆ ಎನ್ನಲಾಗಿದೆ.