Categories
ರಾಜ್ಯ

ಸೂಪರ್ ಸ್ಟಾರ್ ರಜನೀಕಾಂತ್ ದಿಢೀರ್ ಅಸ್ವಸ್ಥ!

ಸೂಪರ್ ಸ್ಟಾರ್ ರಜನೀಕಾಂತ್ ದಿಢೀರ್ ಅಸ್ವಸ್ಥ!

* ಸೂಪರ್ ಸ್ಟಾರ್ ರಜನಿಕಾಂತ್ ಆಸ್ಪತ್ರೆಗೆ ದಾಖಲು
* ತಮ್ಮದೇ ಗನ್‌ನಿಂದ ಗುಂಡು ಹಾರಿಸಿಕೊಂಡ ನಟ ಗೋವಿಂದ!

NAMMUR EXPRESS NEWS
ಚೆನ್ನೈ: ದಿಢೀರ್ ಅಸ್ವಸ್ಥತೆ ಹಿನ್ನೆಲೆಯಲ್ಲಿ ಸೂಪರ್ ಸ್ಟಾರ್ ರಜನಿಕಾಂತ್ ಅವರನ್ನು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.
73 ವರ್ಷದ ನಟನ ಪ್ರಸ್ತುತ ಸ್ಥಿತಿ ಸ್ಥಿರವಾಗಿದೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.
ನೆಲ್ಸನ್ ದಿಲೀಪ್ ಕುಮಾರ್ ಅವರ ಜೈಲರ್ ಚಿತ್ರದಲ್ಲಿ ಕೊನೆಯ ಬಾರಿಗೆ ಕಾಣಿಸಿಕೊಂಡ ಅವರು ಹೊಟ್ಟೆನೋವಿನ ಕಾರಣ ಸೆ.30ರಂದು ರಾತ್ರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ಮೂಲಗಳು ತಿಳಿಸಿವೆ.
ಇಂಟರ್ವೆನ್ಷನಲ್ ಹೃದ್ರೋಗ ತಜ್ಞ ಡಾ.ಸಾಯಿ ಸತೀಶ್ ಅವರ ನೇತೃತ್ವದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
“ತಲೈವರ್” ಎಂದು ಪ್ರೀತಿಯಿಂದ ಕರೆಯಲ್ಪಡುವ ರಜನಿಕಾಂತ್ ಭಾರತೀಯ ಚಿತ್ರರಂಗದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ನಟರಲ್ಲಿ ಒಬ್ಬರು. ಶಿವಾಜಿ, ಬಾಷಾ, ಎಂದಿರನ್ (ರೋಬೋಟ್), ಅಣ್ಣಾಥೆ, ಪೆಟ್ಟಾ, ಕಾಲಾ, ದರ್ಬಾರ್ ಮತ್ತು ಕಬಾಲಿ ಸೇರಿದಂತೆ ಹಲವು ಅಪ್ರತಿಮ ಚಲನಚಿತ್ರಗಳೊಂದಿಗೆ ಅವರು ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಚಿತ್ರರಂಗದಲ್ಲಿ ತೊಡಗಿಸಿಕೊಂಡಿದ್ದಾರೆ.

* ತಮ್ಮದೇ ಗನ್‌ನಿಂದ ಗುಂಡು ಹಾರಿಸಿಕೊಂಡ ಬಾಲಿವುಡ್ ನಟ ಗೋವಿಂದ!!

ಮುಂಬೈ: ಆಕಸ್ಮಿಕವಾಗಿ ಹಾರಿದ ಗುಂಡಿನಿಂದ‌ ಬಾಲಿವುಡ್ ನಟ ಗೋವಿಂದ ಗಾಯಗೊಂಡಿದ್ದಾರೆ.
ಮುಂಬೈನಲ್ಲಿರುವ ಅವರ ಮನೆಯಲ್ಲಿ ತಮ್ಮದೇ ಗನ್‌ನಿಂದ ನಟ ಗೋವಿಂದ ಕಾಲಿಗೆ ಶೂಟ್ ಮಾಡಿಕೊಂಡಿದ್ದಾರೆ. ಮುಂಜಾನೆ 5 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.
ಸದ್ಯ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಗನ್ನಿಂದ ಫೈಯರ್ ಆದ ಬುಲೆಟ್ ಅವರ ಕಾಲಿಗೆ ತಾಗಿದೆ. ಅವರಿಗೆ ಅಂಧೇರಿಯ ಕೃತಿ ಕೇರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಗುಂಡಿನ ಶಬ್ದ ಕೇಳಿದ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿದ್ದಾರೆ. ಸದ್ಯ ಗೋವಿಂದ ಅವರ ಗನ್ ವಶಕ್ಕೆ ಪಡೆಯಲಾಗಿದ್ದು, ತನಿಖೆ ನಡೆಸುತ್ತಿದ್ದಾರೆ

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.