Categories
ರಾಜ್ಯ

ಖಾತ್ಯವಾಗ್ಮಿ ಚಕ್ರವರ್ತಿ ಸೂಲಿಬೆಲೆಗೆ ಪಿತೃ ವಿಯೋಗ

ಖಾತ್ಯವಾಗ್ಮಿ ಚಕ್ರವರ್ತಿ ಸೂಲಿಬೆಲೆಗೆ ಪಿತೃ ವಿಯೋಗ

* ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸಿದ್ದ ದೇವದಾಸ್ ಸುಬ್ರಾಯ ಶೇಟ್
* ಅನಾರೋಗ್ಯದಿಂದ ನಿಧನ,ಹಿರಿಯರ ನಿಧನಕ್ಕೆ ಗಣ್ಯರ ಸಂತಾಪ

NAMMMUR EXPRESS NEWS
ಬೆಂಗಳೂರು: ಖ್ಯಾತ ವಾಗ್ಮಿ, ಚಿಂತಕ, ಅಂಕಣಕಾರ ಮತ್ತು ಯುವ ಬ್ರಿಗೇಡ್ ಸಂಸ್ಥಾಪಕರಾದ ಚಕ್ರವರ್ತಿ ಸೂಲಿಬೆಲೆಯವರ ತಂದೆ ದೇವದಾಸ್ ಸುಬ್ರಾಯ ಶೇಟ್ ಅವರು ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರರು ಇಂದು ಬೆಳಿಗ್ಗೆ ನಿಧನರಾಗಿದ್ದಾರೆ. ಸೂಲಿಬೆಲೆ ಅವರ ತಂದೆ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸಿ, ಅನೇಕ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ್ದರು.

* ಹಿರಿಯರ ನಿಧನಕ್ಕೆ ರಾಜಕೀಯ ಹಾಗೂ ಸಾಮಾಜಿಕ ವಲಯದ ಸಂತಾಪ
ದೇವದಾಸ್ ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ರಾಜಕೀಯ ಹಾಗೂ ಸಾಮಾಜಿಕ ವಲಯದಿಂದ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
ಮಾಜಿ ಸಂಸದ ಪ್ರತಾಪ್ ಸಿಂಹ ಅವರು ತಮ್ಮ ಎಕ್ಸ್ ನಲ್ಲಿ, “ಆತ್ಮೀಯರಾದ ಶ್ರೀ ಚಕ್ರವರ್ತಿ ಸೂಲಿಬೆಲೆ ಅವರ ತಂದೆಯವರು ನಿಧನರಾದ ಸುದ್ದಿ ತಿಳಿದು ವಿಷಾದವಾಯಿತು. ಮೃತರ ಆತ್ಮಕ್ಕೆ ಶಾಂತಿ ದೊರಕಲೆಂದು ಹಾಗೂ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲೆಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ” ಎಂದು ಸಂತಾಪ ಸೂಚಿಸಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕೂಡ ಸಂತಾಪ ಸೂಚಿಸಿ “ರಾಷ್ಟ್ರವಾದಿ ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರ ತಂದೆಯವರ ಅಗಲಿಕೆ ತುಂಬಾ ದುಃಖಕರ. ಕುಟುಂಬ ವರ್ಗಕ್ಕೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಮೃತರ ಆತ್ಮಕ್ಕೆ ಚಿರಶಾಂತಿ ದೊರೆಯಲಿ” ಎಂದು ಹೇಳಿದ್ದಾರೆ.
ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಕೂಡ ತಮ್ಮ ಸಂತಾಪ ಸೂಚನೆ ಹಂಚಿಕೊಂಡಿದ್ದು, “ಸಮಾಜಕ್ಕೆ ರಾಷ್ಟ್ರ, ಧರ್ಮಕ್ಕಾಗಿ ಜೀವನವನ್ನು ಮುಡಿಪಾಗಿಟ್ಟ ಪುತ್ರನನ್ನು ನೀಡಿದ ತೀರ್ಥರೂಪರಾದ ದೇವದಾಸ್ ಶೇಟ್ ಅವರ ಆತ್ಮಕ್ಕೆ ಸದ್ಗತಿ ಕೋರುತ್ತೇನೆ. ಕುಟುಂಬ, ಬಂಧುಗಳು ಹಾಗೂ ಶಿಷ್ಯವರ್ಗಕ್ಕೆ ಭಗವಂತನು ಧೈರ್ಯ ನೀಡಲಿ” ಎಂದು ಬರೆದಿದ್ದಾರೆ.
ಇನ್ನೂ ಅನೇಕ ಗಣ್ಯರು ಸಂತಾಪ ಸೂಚಿಸಿ ಕಂಬನಿ ಮಿಡಿದಿದ್ದಾರೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.