ಕಾಫಿ ನಾಡಲ್ಲಿ ಪ್ರವಾಸಕ್ಕಿಲ್ಲ ಈಗ ಅವಕಾಶ!
– ಭಾರೀ ಮಳೆ: ಚಿಕ್ಕಮಗಳೂರಿಗೆ ಪ್ರವಾಸಿಗರಿಗೆ ನಿರ್ಬಂಧ
– ಜುಲೈ 17 ರಿಂದ ಜುಲೈ 22 ರವರೆಗೆ ಒಂದು ವಾರ ನಿಷೇಧ
NAMMUR EXPRESS NEWS
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಮಳೆ ಹೆಚ್ಚಾಗಿದ್ದು ಜಿಲ್ಲೆಯ ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿದೆ. ಹಲವೆಡೆ ಪ್ರವಾಹ ಪರಿಸ್ಥಿತಿ ಎದುರಾಗಿ ಜನಜೀವನ ಅಸ್ಥವ್ಯಸ್ಥವಾಗಿದೆ. ಹಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಹಲವೆಡೆ ಭೂಕುಸಿತಗಳಾಗಿ ರಸ್ತೆ ಸಂಪರ್ಕ ಕಡಿತಗೊಂಡಿದ್ದು ಜಿಲ್ಲೆಯ ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿದೆ. ಜಿಲ್ಲೆಗೆ ಬರುವ ಪ್ರವಾಸಿಗರ ಸಂಖ್ಯೆ ಕೂಡ ತೀರಾ ಹೆಚ್ಚಾಗಿದ್ದು ಹಲವು ಭಾಗಗಳಲ್ಲಿ ಪ್ರವಾಸಿಗರ ಹುಚ್ಚಾಟದ,ಮೋಜು ಮಸ್ತಿ,ಅಸಭ್ಯ ವರ್ತನೆಗಳಂತಹ ಪ್ರಕರಣಗಳು ವರದಿಯಾಗಿದ್ದು.ಇದಕ್ಕೆಲ್ಲ ಕಡಿವಾಣ ಹಾಕಲು ಮತ್ತು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಹಿಸಬೇಕಾಗಿರುವುದರಿಂದಮಾನ್ಯ ಜಿಲ್ಲಾಧಿಕಾರಿಗಳು ಜುಲೈ 17 ರಿಂದ ಜುಲೈ 22 ರವರೆಗೆ ಒಂದು ವಾರಗಳ ಕಾಲ ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ ಸೇರಿದಂತೆ ಚಂದ್ರದ್ರೋಣ ತೀರ ಪ್ರದೇಶಗಳಿಗೆ ಪ್ರವಾಸಿಗರನ್ನು ನಿರ್ಬಂಧಿಸಿ ಆದೇಶ ಹೊರಡಿಸಿದ್ದಾರೆ.
ಜಿಲ್ಲಾಧಿಕಾರಿಗಳ ಸೂಚನೆಯಲ್ಲಿ ಏನಿದೆ..??:
* ಸಾರ್ವಜನಿಕರು/ ಪ್ರವಾಸಿಗರು ನದಿಗಳಿಗೆ ಮತ್ತು ತಗ್ಗು ಪ್ರದೇಶಗಳಿಗೆ ಇಳಿಯದಂತೆ ಕಟ್ಟೆಚ್ಚರ ವಹಿಸುವುದು.
* ಅತಿಯಾದ ಮಳೆಯಿಂದ ಧರೆ,ಗುಡ್ಡ ಕುಸಿತ ಉಂಟಾಗುವ ಸಂಭವವಿರುವುದರಿಂದ ಚಾರಣಿಗರು ಟ್ರಕ್ಕಿಂಗ್ ನಡೆಸುವುದನ್ನು ತಾತ್ಕಾಲಿಕವಾಗಿ ಮುಂದೂಡುವುದು.
* ಹೋಂ ಸ್ಟೇ,ರೆಸಾರ್ಟ್, ಅರಣ್ಯ ಇಲಾಖೆಯಿಂದ ಕೈಗೊಳ್ಳುವ ಟ್ರಕ್ಕಿಂಗ್ನ್ನು ಸದ್ಯಕ್ಕೆ ಸ್ಥಗಿತಗೊಳಿಸುವುದು.
* ರಾಜ್ಯದ ವಿವಿಧ ಸ್ಥಳಗಳಿಂದ ಚಿಕ್ಕಮಗಳೂರು ಜಿಲ್ಲೆಯ ಪ್ರವಾಸೀ ತಾಣಗಳಿಗೆ ಆಗಮಿಸುವ ಪ್ರವಾಸಿಗರು ಚಿಕ್ಕಮಗಳೂರು ಜಿಲ್ಲಾ ಪ್ರವಾಸವನ್ನು ತಾತ್ಕಾಲಿಕವಾಗಿ ಮುಂದೂಡುವುದು.
ಪ್ರವಾಸದ ಸಮಯ ಈಗಲ್ಲ..
ಸದ್ಯ ಚಿಕ್ಕಮಗಳೂರಿಗೆ ಪ್ರವಾಸದ ಯೋಚನೆ ಮಾಡಿದ್ದರೆ ಅದನ್ನು ಮುಂದೂಡುವುದು ಒಳಿತು. ಇದು ಮಲೆನಾಡಿನ ಮತ್ತು ಜಿಲ್ಲೆಗೆ ಬರುವ ಪ್ರವಾಸಿಗರ ಒಳಿತಿಗಾಗಿ ನಮ್ಮೂರ್ ಎಕ್ಸ್ಪ್ರೆಸ್ ಮಾಧ್ಯಮದ ಕಳಕಳಿ.