ರಾತ್ರಿಯಿಂದ ಗುಡುಗು, ಮಿಂಚಿನ ಮಳೆ!
– ರಾಜ್ಯದಲ್ಲಿ ಭಾರೀ ಮಳೆ ಅಲರ್ಟ್: ದೇವರೇ ಕಾಪಾಡು
– ರೈತರ ಬದುಕು ಬೀದಿಗೆ ಬೀಳೋದು ಗ್ಯಾರಂಟಿ!
NAMMUR EXPRESS NEWS
ಬೆಂಗಳೂರು : ಮತ್ತೆ ರಾಜ್ಯದಲ್ಲಿ ಮಳೆಯಾಗ್ತಿದ್ದು, ಕೆಲವೆಡೆ ನಾನಾ ಅವಾಂತರಗಳು ಸೃಷ್ಟಿಯಾಗಿದೆ. ಸೈಕ್ಲೋನ್ ಎಫೆಕ್ಟ್ನಿಂದಾಗಿ ಕರ್ನಾಟಕದಲ್ಲೂ ವರುಣನ ಆರ್ಭಟ ಮತ್ತಷ್ಟು ಹೆಚ್ಚಾಗಿದೆ. ಚಳಿ-ಮಳೆಗೆ ಜನರು ತತ್ತರಿಸಿ ಹೋಗ್ತಿದ್ದಾರೆ. ಇನ್ನು 5 ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, 12 ಜಿಲ್ಲೆಗಳಿಗೆ ಭಾರೀ ಮಳೆ ಅಲರ್ಟ್ ನೀಡಿದೆ.
12 ಜಿಲ್ಲೆಗೆ ಭಾರೀ ಮಳೆಯ ಅಲರ್ಟ್
ಕಳೆದ ಎರಡು ದಿನಗಳಿಂದ ರಾಜ್ಯದ ಹಲವೆಡೆ ಭಾರೀ ಮಳೆಯಾಗುತ್ತಿದೆ. ಬೆಂಗಳೂರಿನಲ್ಲೂ ರಾತ್ರಿಯಿಡೀ ಗುಡುಗು ಸಹಿತ ಮಳೆಯಾಗಿದೆ. ಇನ್ನು 5 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ದಕ್ಷಿಣ ಕನ್ನಡ , ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ ಜಿಲ್ಲೆಗಳಿಗೆ ಭಾರೀ ಮಳೆಯಾಗ್ತಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಅ.15ರ ವರೆಗೂ ಮಳೆ
ರಾಜ್ಯದಲ್ಲಿ ಮಳೆಯಾರ್ಭಟ ಜೋರಾಗಿದೆ. ಹವಾಮಾನ ಇಲಾಖೆ ಗುಡುಗು, ಮಿಂಚು ಸಹಿತ ಮಳೆಯ ಎಚ್ಚರಿಕೆ ನೀಡಿದೆ. ಅಕ್ಟೋಬರ್ 15 ರವರೆಗೆ ಮಳೆ ಮುಂದುವರೆಯುವ ಸಾಧ್ಯತೆ ಇದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಇಂದು ಹಾಗೂ ನಾಳೆ ಮಳೆ ಮುಂದುವರಿಯಲಿದ್ದು, ಗುಡುಗು ಮತ್ತು ಮಿಂಚು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಈ ಪ್ರದೇಶಗಳಲ್ಲಿ 10 ಮಿ.ಮೀ.ಯಿಂದ 30 ಮಿ.ಮೀ.ವರೆಗೂ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಜಿಲ್ಲೆಗಳಲ್ಲಿ ಭೂ ಕುಸಿತ ಉಂಟಾಗುವ ಸಾಧ್ಯತೆಗಳ ಬಗ್ಗೆ ಎಚ್ಚರಿಕೆ ನೀಡಲಾಗಿದೆ.







