ಅಟ್ಟಾಡಿಸಿದ ಕಾಡಾನೆ: ಇಬ್ಬರು ಪಾರು!
– ಚಾಮರಾಜನಗರ ಜಿಲ್ಲೆ ಹನೂರಲ್ಲಿ ಘಟನೆ
– ಶ್ರೀರಂಗಪಟ್ಟಣ: ನದಿಯಲ್ಲಿ ಮುಳುಗಿ ಯುವಕ ಸಾವು
– ಹಾವೇರಿಯಲ್ಲಿ ಅಪಘಾತಕ್ಕೆ ಬಲಿ!
– ವೇಶ್ಯಾವಾಟಿಕೆ :7 ಮಹಿಳೆಯರ ರಕ್ಷಣೆ;8 ಜನ ಪುರುಷರು ಅರೆಸ್ಟ್.!
NAMMUR EXPRESS NEWS
ಚಾಮರಾಜನಗರ: ದನಗಾಹಿಗಳನ್ನು ಕಾಡಾನೆ ಅಟ್ಟಾಡಿಸಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ದಿನ್ನಳ್ಳಿ ಅರಣ್ಯದಲ್ಲಿ ನಡೆದಿದೆ. ಹನೂರು ತಾಲೂಕಿನ ಪಿಜಿ ಪಾಳ್ಯ ಗ್ರಾಪಂ ವ್ಯಾಪ್ತಿಯ ಯರಗಬಾಳು ಗ್ರಾಮದ ಸಿದ್ದಮರಿ, ಗಿರಿಯಪ್ಪ ಗಾಯಗೊಂಡ ಸಹೋದರರಾಗಿದ್ದಾರೆ. ತಮಿಳುನಾಡಿನ ಆಡಿ ಜಾತ್ರೆಗೆ ತಮ್ಮ ದನಗಳನ್ನು ಮಾರಾಟ ಮಾಡಿ ಮಾರಾಟವಾಗದ ದನಗಳನ್ನು ವಾಪಾಸ್ ಕರೆತರುತ್ತಿದ್ದಾಗ ಏಕಾಏಕಿ ಕಾಡಾನೆ ದಾಳಿ ಮಾಡಿದ್ದು ಇಬ್ಬರನ್ನೂ ಅಟ್ಟಾಡಿಸಿದೆ. ಕಾಡಿನ ರಸ್ತೆಯಲ್ಲಿ ಎದ್ದುಬಿದ್ದು ಸ್ವಲ್ಪದರಲ್ಲೇ ಬಚಾವಾದ ಇಬ್ಬರನ್ನೂ ಕಂಡ ಸ್ಥಳೀಯರು ರಾಮಪುರ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಸದ್ಯ, ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಹಾವೇರಿಯಲ್ಲಿ ಅಪಘಾತಕ್ಕೆ ಬಲಿ!
ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವ್ಯಕ್ತಿಗಳು ಸ್ಥಳದಲ್ಲೇ ಸಾವಿಗೀಡಾದ ಘಟನೆ ಹಾವೇರಿ ಜಿಲ್ಲೆ ಶಿಗ್ಗಾವಿ ತಾಲ್ಲೂಕಿನ ನೀರಲಗಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸೋಮವಾರ ನಡೆದಿದೆ. ನೀರಲಗಿ ಗ್ರಾಮದ ವಿರೂಪಾಕ್ಷಪ್ಪ ಕಾಳಿ (60) ಮತ್ತು ಚಿದಾನಂದ ಶೇರವಾಡ (55) ಮೃತಪಟ್ಟವರು. ಹೊನ್ನಾಪುರ ಗ್ರಾಮದ ಬಸನಗೌಡ ಶಿವನಗೌಡ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಗೊಂಡಿದ್ದ ಚಿದಾನಂದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ಸರಿಯಾದ ಸಮಯಕ್ಕೆ ಆಂಬುಲೆನ್ಸ್ ಬಾರದ ಕಾರಣ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಒಂದು ಗಂಟೆಗೂ ಹೆಚ್ಚು ಕಾಲ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.
ಶ್ರೀರಂಗಪಟ್ಟಣ: ನದಿಯಲ್ಲಿ ಮುಳುಗಿ ಯುವಕ ಸಾವು
ಶ್ರೀರಂಗಪಟ್ಟಣ ತಾಲ್ಲೂಕಿನ ಬೆಳಗೊಳ ಸಮೀಪದ ಬಲಮುರಿ ಪ್ರಕೃತಿ ತಾಣಕ್ಕೆ ಭಾನುವಾರ ವಿಹಾರಕ್ಕೆ ಬಂದಿದ್ದ ಯುವಕ ಈಜುವ ವೇಳೆ ಕಾವೇರಿ ನದಿಯಲ್ಲಿ ಮುಳುಗಿ ಮೃತಪಟ್ಟರು. ಕೋಲಾರ ಜಿಲ್ಲೆ ಕೆಜಿಎಫ್ ಪೊಲೀಸ್ ಠಾಣೆಯ ಎಎಸ್ಐ ವಾಸುದೇವಸಿಂಗ್ ಅವರ ಪುತ್ರ ಯಶ್ವಂತ್ (26) ಮೃತರು. ಅವರು ಮೂವರು ಸ್ನೇಹಿತರೊಂದಿಗೆ ಇಲ್ಲಿಗೆ ಬಂದಿದ್ದರು. ನದಿಯಲ್ಲಿ ಸುಳಿಗೆ ಸಿಕ್ಕಿ ಅವರು ಸಾವಿಗೀಡಾಗಿದ್ದಾರೆ’ ಎಂದು ಪೊಲೀಸರು ತಿಳಿಸಿದರು.
ವೇಶ್ಯಾವಾಟಿಕೆ :7 ಮಹಿಳೆಯರ ರಕ್ಷಣೆ;8 ಜನ ಪುರುಷರು ಅರೆಸ್ಟ್.!
ಬಳ್ಳಾರಿ ನಗರದ ಇನ್ವೆಂಟ್ರಿ ರಸ್ತೆಯಲ್ಲಿರುವ ಸೆಲೂನ್ವೊಂದರಲ್ಲಿ ನಡೆಯುತ್ತಿದ್ದ ಹೈಟೆಕ್ ವೇಶ್ಯಾವಾಟಿಕೆ ಅಡ್ಡೆಯ ಮೇಲೆ ಕೌಲ್ ಬಜಾರ್ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿ ವೇಳೆ 7 ಮಹಿಳೆಯರನ್ನು ರಕ್ಷಿಸಿ, 8 ಪುರುಷರನ್ನು ಮಕ್ಕಳನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ನಾಗಲ್ಯಾಂಡ್, ದೆಹಲಿ, ವೆಸ್ಟ್ ಬೆಂಗಾಲ್ ಮತ್ತು ಓಡಿಸ್ಸಾ ಮೂಲದ ಮಹಿಳೆಯರನ್ನು ರಕ್ಷಣೆ ಮಾಡಿದ್ದಾರೆ. ವ್ಯವಸ್ಥಾಪಕ ಪ್ರಭುಗೌಡ ಸೇರಿದಂತೆ 8 ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಈ ಕುರಿತು ಕೌಲ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ರೈತರಿಗೆ ಖುಷ್: ಕಾಳು ಮೆಣಸು ದರ ಏರಿಕೆ!
HOW TO APPLY : NEET-UG COUNSELLING 2023