ಟಾಪ್ 3 ನ್ಯೂಸ್
ಬೆಳ್ಳಂ ಬೆಳಗ್ಗೆ ರಾಜ್ಯದ ಹಲವು ಕಡೆ ಲೋಕಾಯುಕ್ತ ದಾಳಿ
– ಬೆಂಗಳೂರು : ಬಿಎಂಟಿಸಿ ಬಸ್ ಚಾಲಕನ ಸಡನ್ ಬ್ರೇಕ್ಗೆ ಬಿದ್ದ ಮಹಿಳಾ ಕಂಡಕ್ಟರ್
– ಮಂಡ್ಯ : ರೈಲಿಗೆ ಸಿಲುಕಿ 17ಕ್ಕೂ ಹೆಚ್ಚು ಕುರಿಗಳು ಸಾವು
NAMMUR EXPRESS NEWS
ಬೆಳ್ಳಂ ಬೆಳಗ್ಗೆ ರಾಜ್ಯದ ಹಲವು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಬಾಗಲಕೋಟೆ, ಬೆಳಗಾವಿ, ರಾಯಚೂರು ಸೇರಿ ಹಲವು ಕಡೆ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂ ಬೆಳಗ್ಗೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಬಾಗಲಕೋಟೆಯಲ್ಲಿ ಪಿಡಿಒ ಎಸ್.ಪಿ. ಹಿರೇಮಠ ಅವರ ನಿವಾಸದ ಮೇಲೆ ದಾಳಿ ನಡೆಸಲಾಗಿದೆ. ಬಾಗಲಕೋಟೆಯ ವಿದ್ಯಾಗಿರಿಯಲ್ಲಿರುವ ಹೊಲಗೇರಿ ಗ್ರಾಮ ಪಂಚಾಯಿತಿ ಪಿಡಿಒ ಹಿರೇಮಠ ನಿವಾಸದ ಮೇಲೆ ದಾಳಿ ನಡೆಸಲಾಗಿದೆ. ಲೋಕಾಯುಕ್ತ ಡಿವೈಎಸ್ಪಿ ಸಿದ್ದೇಶ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಐಷಾರಾಮಿ ಮನೆ, ಅಪಾರ ಪ್ರಮಾಣದ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ಹಿರೇಮಠ ನಿವಾಸದ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಇನ್ನೂ, ರಾಯಚೂರು, ಬೆಳಗಾವಿಯಲ್ಲೂ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳ ಚಳಿ ಬಿಡಿಸಿದ್ದಾರೆ.
– ಬೆಂಗಳೂರು : ಬಿಎಂಟಿಸಿ ಬಸ್ ಚಾಲಕನ ಸಡನ್ ಬ್ರೇಕ್ಗೆ ಬಿದ್ದ ಮಹಿಳಾ ಕಂಡಕ್ಟರ್
ಬೆಂಗಳೂರು : ಬಿಎಂಟಿಸಿ ಬಸ್ ಚಾಲಕ ದಿಢೀರ್ ಬ್ರೇಕ್ ಹಾಕಿದ್ದಕ್ಕೆ ಆಯತಪ್ಪಿ ಮಹಿಳಾ ಕಂಡಕ್ಟರ್ ಬಿದ್ದಿರುವಂತಹ ಘಟನೆ ಎಲೆಕ್ಟ್ರಾನಿಕ್ ಸಿಟಿ ಹಾಗೂ ಹೊಸರೋಡ್ಗೆ ಚಲಿಸುತ್ತಿದ್ದ ಬಿಎಂಟಿಸಿ ಬಸ್ನಲ್ಲಿ ನಡೆದಿದೆ. ಚಲಿಸುತ್ತಿದ್ದ ಬಸ್ನಲ್ಲಿ ಮಹಿಳಾ ಕಂಡಕ್ಟರ್ ಪ್ರಯಾಣಿಕರಿಗೆ ಟಿಕೆಟ್ ವಿತರಣೆ ಮಾಡುತ್ತಿದ್ದರು. ಏಕಾಏಕಿ ಬ್ರೇಕ್ ಹಾಕಿದ ಕಾರಣ ಡೋರ್ ಬಳಿ ಹೋಗಿ ಬಿದಿದ್ದಾರೆ. ಆಯತಪ್ಪಿ ಬೀಳ್ಳುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ ಆಗಿದೆ. ಮಹಿಳಾ ಕಂಡಕ್ಟರ್ ಅನ್ನು ಪ್ರಯಾಣಿಕರು ಮೇಲೆತ್ತಿದ್ದಾರೆ.
– ಮಂಡ್ಯ : ರೈಲಿಗೆ ಸಿಲುಕಿ 17ಕ್ಕೂ ಹೆಚ್ಚು ಕುರಿಗಳು ಸಾವು
ಮಂಡ್ಯ : ನಾಯಿಗಳು ಅಟ್ಟಾಡಿಸಿದ ವೇಳೆ ಕುರಿಮಂದೆ ಚದುರಿದ ಪರಿಣಾಮ 17 ಕುರಿಗಳು ರೈಲ್ವೇ ಟ್ರ್ಯಾಕ್ ದಾಟಲು ಯತ್ನಿಸಿದಾಗ ರೈಲಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಹೊಸಬೂದನರು ಗ್ರಾಮದ ಬಳಿ ನಡೆದಿದೆ. ಹೊಸಬೂದನೂರು ಗ್ರಾಮದ ಜಯಮ್ಮ ಅವರಿಗೆ ಸೇರಿದ 17ಕ್ಕೂ ಹೆಚ್ಚು ಕುರಿಗಳು ಮೃತಪಟ್ಟಿದ್ದು, ಸುಮಾರು 2 ಲಕ್ಷ ರೂ.ಗಳಿಗೂ ಹೆಚ್ಚು ನಷ್ಟ ಉಂಟಾಗಿದೆ ಎನ್ನಲಾಗಿದೆ. ಜಯಮ್ಮ ಅವರು ಬಯಲಿನಲ್ಲಿ ಕುರಿಗಳನ್ನು ಮೇಯಿಸಿಕೊಂಡು ಮನೆಗೆ ವಾಪಸ್ ಆಗುತ್ತಿದ್ದ ವೇಳೆ ನಾಯಿಗಳು ಅಟ್ಟಾಡಿಸಿದಾಗ ಚದುರಿದ ಕುರಿಗಳು ರೈಲಿಗೆ ಸಿಲುಕಿ ಮೃತಪಟ್ಟಿವೆ. ಸ್ಥಳಕ್ಕೆ ರೈಲ್ವೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನೆಯ ಸುದ್ದಿ ತಿಳಿದ ಶಾಸಕ ಪಿ.ರವಿಕುಮಾರ್ ಗೌಡ ಅವರು ಕುರಿಗಳನ್ನು ಕಳೆದುಕೊಂಡು ನಷ್ಟಕ್ಕೀಡಾಗಿರುವ ಜಯಮ್ಮ ಅವರಿಗೆ ವೈಯಕ್ತಿಕವಾಗಿ ಪರಿಹಾರ ನೀಡುವುದಾಗಿ ಭರವಸೆ ನೀಡಿದ್ದಾರೆ.