ರಾಜ್ಯದ ಟ್ರಕ್ಕಿಂಗ್ ತಾಣಗಳಿಗೆ ತಾತ್ಕಾಲಿಕ ನಿರ್ಬಂಧ
– ಹುಬ್ಬಳ್ಳಿ : ರಾಜ್ಯ ರೈತ ಸಂಘದ ಕಾರ್ಯಾಧ್ಯಕ್ಷ ಅಪಘಾತದಲ್ಲಿ ಸಾವು: ಹಲವು ಅನುಮಾನ
– ಬೆಂಗಳೂರು: 3 ಕೋಟಿ ರೂ. ಮೌಲ್ಯದ ಇ-ಸಿಗರೇಟ್ ವಶ!
NAMMUR EXPRESS NEWS
ಬೆಂಗಳೂರು: ರಾಜ್ಯದ ಆನ್ ಲೈನ್ ಬುಕ್ಕಿಂಗ್ ಇಲ್ಲದ ಎಲ್ಲಾ ಚಾರಣ ತಾಣಗಳಿಗೆ ತಾತ್ಕಾಲಿಕ ನಿರ್ಬಂಧ ಹಾಕಲು ಸಚಿವರ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ. ರಾಜ್ಯದ ಆನ್ ಲೈನ್ ಬುಕ್ಕಿಂಗ್ ಇಲ್ಲದ ಎಲ್ಲಾ ಚಾರಣ ತಾಣಗಳಲ್ಲಿ ಆನ್ ಲೈನ್ ಬುಕ್ಕಿಂಗ್ ವ್ಯವಸ್ಥೆ, ನಿರ್ದಿಷ್ಟ ಸಂಖ್ಯೆಗೆ ಸೀಮಿತಗೊಳಿಸುವ ಪ್ರಮಾಣಿತ ಕಾರ್ಯ ವಿಧಾನ ಬರುವವರೆಗೆ ತಾತ್ಕಾಲಿಕ ನಿರ್ಬಂಧ ಹೇರಲು ಸಚಿವರು ಸೂಚಿಸಿದ್ದಾರೆ.
ಗಣರಾಜ್ಯೋತ್ಸವದಂದು ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯದ ಬಳಿ ಇರುವ ಕುಮಾರ ಪರ್ವತ ಟ್ರೆಕ್ಕಿಂಗ್ ಮಾಡಲು ಸಾವಿರಾರು ಮಂದಿ ಏಕಾಏಕಿ ಆಗಮಿಸಿದ್ದರು. ಇದರ ಫೋಟೋ ಹಾಗೂ ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿತ್ತು. ಸಾವಿರಾರು ಬಂದು ಏಕಾಏಕಿ ಚಾರಣಕ್ಕೆ ಬಂದಿದ್ದರಿಂದ ಅರಣ್ಯ ಪ್ರದೇಶಕ್ಕೆ ತೊಂದರೆ ಆಗಿದೆ ಎನ್ನಲಾಗಿತ್ತು. ಈ ಬೆನ್ನಲ್ಲೇ ಸರ್ಕಾರ ಹೊಸ ರೂಲ್ಸ್ ಜಾರಿಗೆ ತರಲು ಪ್ಲಾನ್ ಮಾಡುತ್ತಿದೆ.
ಅಪಘಾತದಲ್ಲಿ ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಸಾವು.!
ಕೊಪ್ಪಳ : ಕೊಪ್ಪಳ ತಾಲ್ಲೂಕಿನ ಶಹಾಪುರ ಟೋಲ್ ಗೇಟ್ ಬಳಿ ಸಂಭವಿಸಿದ ಅಪಘಾತವೊಂದರಲ್ಲಿ ರಾಜ್ಯ ವ್ಯಾಪ್ತಿಯ ರೈತ ನಾಯಕ ಜೆ. ಕಾರ್ತಿಕ್ (40) ಸಾವಿಗೀಡಾಗಿದ್ದಾರೆ. ಅಪಘಾತ ನಡೆದ ರೀತಿ ನೋಡಿದರೆ ಸಂಶಯ ವ್ಯಕ್ತವಾಗಿದ್ದು, ಹಲವು ಊಹಾಪೋಹಗಳನ್ನು ಹುಟ್ಟುಹಾಕಿದೆ. ಇನ್ನೂ ಈ ಕುರಿತು ಪೊಲೀಸರು ಪರಿಶೀಲಿಸುತ್ತಿದ್ದಾರೆ. ಜೆ. ಕಾರ್ತಿಕ್ ಅವರು ಓಡಿಸುತ್ತಿದ್ದ ಬೈಕ್ ಹೆದ್ದಾರಿ ಬಳಿ ಬಿದ್ದಿದ್ದು, ಅದರ ಪಕ್ಕದಲ್ಲಿ ತೀವ್ರ ಗಾಯಗೊಂಡು ತಲೆಯಿಂದ ರಕ್ತ ಸೋರುತ್ತಿದ್ದ ಕಾರ್ತಿಕ್ ಕಂಡುಬಂದಿದ್ದರು. ಗಾಯಗೊಂಡಿದ್ದ ಕಾರ್ತಿಕ್ ಅವರನ್ನು ಹುಬ್ಬಳ್ಳಿಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗಿನ ಜಾವ 4.30ರ ವೇಳೆ ಅವರು ಮೃತಪಟ್ಟರು. ಜೆ. ಕಾರ್ತಿಕ್ ಅವರು ವಿಜಯನಗರ ಜಿಲ್ಲೆಯ ಹೊಸಪೇಟೆಯ ನಿವಾಸಿಯಾಗಿದ್ದು, ಹೊಸಪೇಟೆಯಿಂದ ಕೊಪ್ಪಳದತ್ತ ಬೈಕ್ ನಲ್ಲಿ ತೆರಳುತ್ತಿದ್ದರು. ಕೋಡಿಹಳ್ಳಿ ಚಂದ್ರಶೇಖರ ಬಣದ ರೈತ ಸಂಘದಲ್ಲಿದ್ದರು. ನಂತರ ಕೋಡಿಹಳ್ಳಿ ಚಂದ್ರಶೇಖರ್ ಬಣದಿಂದ ಹೊರಬಂದು ಸ್ವತಃ ಸಂಘವೊಂದನ್ನು ಕಟ್ಟಿದ್ದರು. ಕರ್ನಾಟಕ ರಾಜ್ಯ ರೈತರ ಸಂಘ ಹಸಿರು ಸೇನೆ ಅನ್ನುವ ಸಂಘದಲ್ಲಿ ಸಕ್ರಿಯರಾಗಿದ್ದರು.
3 ಕೋಟಿ ರೂ. ಮೌಲ್ಯದ ಇ-ಸಿಗರೇಟ್ ವಶ!
ಬೆಂಗಳೂರು : 3 ಕೋಟಿ ರೂ.ಮೌಲ್ಯದ ನಿಷೇಧಿತ ಇ-ಸಿಗರೇಟ್ ವಶ ಪಡಿಸಿಕೊಂಡಿರುವ ಬೆಂಗಳೂರು ಪೊಲೀಸರು ಕೇರಳ ಮೂಲದ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಗಳೂರು ನಗರದ ಸುದ್ದ ಗುಂಟೆ ಪಾಳ್ಯ ಪೊಲೀಸ್ ಠಾಣೆಯ ವ್ಯಾಪ್ತಿಯ ಬಿ.ಟಿ.ಎಂ ಲೇಔಟ್ನ ಮನೆಯೊಂದರಲ್ಲಿ ಕೇಂದ್ರ ಸರ್ಕಾರ ನಿಷೇಧಿಸಿರುವ ಎಲೆಕ್ಟ್ರಾನಿಕ್ ಸಿಗರೇಟ್ ಗಳನ್ನು ಕೇರಳ ಮೂಲದ ವ್ಯಕ್ತಿಯೊಬ್ಬ ವಿದೇಶದಿಂದ ಅಕ್ರಮವಾಗಿ ಆಮದು ಮಾಡಿಕೊಂಡು ತನ್ನ ಮನೆಯಲ್ಲಿ ಸಂಗ್ರಹಿಸಿ ಮಾರಾಟ ಮಾಡುತ್ತಿದ್ದ.