ಟಾಪ್ 4 ನ್ಯೂಸ್ ಕರ್ನಾಟಕ
ರಾಜ್ಯದಲ್ಲಿ ದುರಂತ… ದುರಂತ…!
– ಹಾವೇರಿ: ಮಳೆಯಿಂದ ಮನೆ ಗೋಡೆ ಕುಸಿದು ಇಬ್ಬರು ಮಕ್ಕಳು ಸೇರಿದಂತೆ ಮೂವರ ಮೃತ್ಯು!
– ಕೊಪ್ಪಳ: ರೈಲು ಹರಿದು ಮೂವರು ಯುವಕರು ಸ್ಥಳದಲ್ಲೇ ಸಾವು
– ಬೆಂಗಳೂರು: 12 ಅಧಿಕಾರಿಗಳ ಮನೆಗಳ ಮೇಲೆ ಲೋಕಾ ದಾಳಿ
– ಬೆಂಗಳೂರು: 2 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಅಕ್ಕಿ ಕಳ್ಳತನ: ಬಿಜೆಪಿ ನಾಯಕ ಅರೆಸ್ಟ್!
NAMMUR EXPRESS NEWS
ಹಾವೇರಿ: ಮಳೆಯಿಂದ ಮನೆ ಗೋಡೆ ಕುಸಿದು ಮೂವರು ಮೃತಪಟ್ಟಿರುವ ಘಟನೆ ಜು.19ರ ನಸುಕಿನ ಜಾವ ಸುಮಾರು 3.30ಕ್ಕೆ ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಮಾದಾಪುರ ಗ್ರಾಮದಲ್ಲಿ ನಡೆದಿದೆ.ದುರಂತದಲ್ಲಿ ಮೃತಪಟ್ಟ ಚೆನ್ನಮ್ಮ (30), ಅಮೂಲ್ಯ (3), ಅನನ್ಯಾ (6) ಎಂದು ಗುರುತಿಸಲಾಗಿದೆ. ವೃದ್ಧೆ ಯಲ್ಲಮ್ಮ, ಪುತ್ರ ಮುತ್ತು, ಸೊಸೆ ಸುನೀತಾ ಈ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಸವಣೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಭಾರಿ ಮಳೆಯಾಗುತ್ತಿದೆ. ಆರು ಜನರು ಮನೆಯಲ್ಲಿ ಒಂದೇ ಕಡೆ ಮಲಗಿದ್ದರು. ನಸುಕಿನ ಜಾವ ಸುಮಾರು 3.30ಕ್ಕೆ ಆರು ಜನರ ಮೇಲೆ ಗೋಡೆ ಬಿದ್ದಿದೆ. ಇದರಿಂದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ, ಉಳಿದ ಮೂವರಿಗೆ ಗಂಭೀರ ಗಾಯಗಳಾಗಿವೆ. ಹುಲಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
– ಬೆಂಗಳೂರು: ಎರಡು ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಅಕ್ಕಿ ಕಳ್ಳತನ ಬಿಜೆಪಿ ನಾಯಕನ ಬಂಧನ.
ಬೆಂಗಳೂರು: ಸರ್ಕಾರದ ಅನ್ನಭಾಗ್ಯ ಯೋಜನೆಗೆಂದು ನೀಡಲಾಗಿದ್ದ ಎರಡು ಕೋಟಿಗೂ ಅಧಿಕ ಮೌಲ್ಯದ ಅಕ್ಕಿ ಕಳ್ಳತನ ಪ್ರಕರಣದಲ್ಲಿ ಬಿಜೆಪಿ ನಾಯಕನ ಬಂಧನವಾಗಿದೆ. ಮುಖಂಡ ಮಣಿಕಾಂತ್ ರಾಥೋಡ್ ಅವರನ್ನು ಬಂಧಿಸಲಾಗಿದೆ. ಯಾದಗಿರಿ ಜಿಲ್ಲೆಯ ಶಹಾಪುರದ ಸರ್ಕಾರಿ ಗೋದಾಮಿನಲ್ಲಿ ಸಂಗ್ರಹಿಸಲಾಗಿದ್ದ 6077 ಕ್ವಿಂಟಾಲ್ ಅಕ್ಕಿಯನ್ನು ರಾಥೋಡ್ ಕಳ್ಳತನ ಮಾಡಿದ್ದಾರೆ. ಕಲಬುರಗಿಯಲ್ಲಿರುವ ರಾಠೋಡ್ ಅವರ ಮನೆಯಲ್ಲಿ ಶಹಾಪುರ ಪೊಲೀಸರು ಬಂಧಿಸಿದ್ದಾರೆ. ರಾಥೋಡ್ ಅವರನ್ನು ಪೊಲೀಸರು ವಿಚಾರಣೆಗೆ ಕರೆದರೂ ಹಾಜರಿರಲಿಲ್ಲ. ಇದಾದ ಬಳಿಕ ಆತನನ್ನು ಬಂಧಿಸಲಾಗಿತ್ತು. ರಾಥೋಡ್ ಅವರು 2023ರ ವಿಧಾನಸಭಾ ಚುನಾವಣೆಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಸ್ಪರ್ಧಿಸಿದ್ದರು. ಅನ್ನಭಾಗ್ಯ ಯೋಜನೆಯು ಆರ್ಥಿಕವಾಗಿ ಹಿಂದುಳಿದ ಕುಟುಂಬದ ಪ್ರತಿಯೊಬ್ಬ ಸದಸ್ಯರಿಗೆ ತಿಂಗಳಿಗೆ 19 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡುತ್ತದೆ.
– ಕೊಪ್ಪಳ: ರೈಲು ಹರಿದು ಮೂವರು ಯುವಕರು ಸ್ಥಳದಲ್ಲೇ ಸಾವು!
ಕೊಪ್ಪಳ : ರಾಜ್ಯದಲ್ಲಿ ಮತ್ತೊಂದು ಘೋರ ದುರಂತವೊಂದು ಸಂಭವಿಸಿದ್ದು, ಕುಡಿದ ಮತ್ತಿನಲ್ಲಿ ರೈಲ್ವೇ ಟ್ರ್ಯಾಕ್ ಮೇಲೆ ಮಲಗಿದ್ದ ಮೂವರು ಯುವಕರ ಮೇಲೆ ರೈಲು ಹರಿದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ಮೌನೇಶ್ (೨೩), ಸುನೀಲ್ (೨೩), ವೆಂಕಟ ಭೀಮಾನಾಯ್ (೨೦) ಎಂದು ಗುರುತಿಸಲಾಗಿದೆ.ಹುಬ್ಬಳ್ಳಿಯಿಂದ ಸಿಂಧೂನೂರಿಗೆ ತೆರಳುತ್ತಿದ್ದ ರೈಲು ಹರಿದು ಯುವಕರು ಸಾವನ್ನಪ್ಪಿದ್ದಾರೆ. ಗದಗ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿಯ ಹೊರವಲಯದಲ್ಲಿ ರೈಲ್ವೇ ಟ್ರ್ಯಾಕ್ ಮೇಲೆ ಕುಡಿದ ಮತ್ತಿನಲ್ಲಿ ಮಲಗಿದ್ದ ಮೂವರು ಯುವಕರ ಮೇಲೆ ರೈಲು ಹರಿದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಏಕಕಾಲಕ್ಕೆ ಲೋಕಾಯುಕ್ತ 12 ಅಧಿಕಾರಿಗಳ ಮೇಲೆ ದಾಳಿ
ಬೆಂಗಳೂರು: ರಾಜ್ಯಾದ್ಯಂತ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರಾಜ್ಯದ 12 ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದೆ. ಶಿವಮೊಗ್ಗ, ಯಾದಗಿರಿ, ತುಮಕೂರು ಸೇರಿದಂತೆ 54 ಸ್ಥಳಗಳಲ್ಲಿ ಏಕಕಾಲಕ್ಕೆ ಲೋಕಾಯುಕ್ತ ದಾಳಿ ನಡೆಸಲಾಗಿದೆ. ಬೆಂಗಳೂರು ನಗರದ ಆರು ಅಧಿಕಾರಿಗಳ ಮೇಲೆ ದಾಳಿ ನಡೆಸಲಾಗಿದೆ. ಬೆಂಗಳೂರು, ಮೈಸೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಶಿವಮೊಗ್ಗ, ಯಾದಗಿರಿ, ತುಮಕೂರಿನಲ್ಲಿ ಏಕಕಾಲಕ್ಕೆ 100ಕ್ಕೂ ಅಧಿಕ ಲೋಕಾಯುಕ್ತ ಅಧಿಕಾರಿಗಳ ತಂಡದಿಂದ ದಾಳಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಇಬ್ಬರು ಅಧಿಕಾರಿಗಳ ಮನೆಗಳ ಮೇಲೆ ದಾಳಿ ನಡೆಸಲಾಗಿದೆ. ಯಾದಗಿರಿ, ತುಮಕೂರಿನಲ್ಲಿ ತಲಾ ಒಬ್ಬ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆದಿದೆ. ದಾಳಿ ನಡೆಸಿದ ಅಧಿಕಾರಿಗಳು ಅಕ್ರಮ ಆಸ್ತಿಗೆ ಸಂಬಂಧಿಸಿದ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಆದಾಯಕ್ಕೂ ಮೀರಿ ಅಕ್ರಮ ಆಸ್ತಿ ಸಂಪಾದನೆ ಹಿನ್ನಲೆಯಲ್ಲಿ ದಾಳಿ ನಡೆದಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.