Categories
ರಾಜ್ಯ

ಟಾಪ್ 4 ನ್ಯೂಸ್ ಕರ್ನಾಟಕ

ಟಾಪ್ 4 ನ್ಯೂಸ್ ಕರ್ನಾಟಕ

ರಾಮನಗರ: ನಟ ದರ್ಶನ ಸ್ಥಿತಿಗೆ ಮರುಗಿ ಅಭಿಮಾನಿ ಆತ್ಮಹತ್ಯೆ.?
– ಬೆಳಗಾವಿ : ರಸ್ತೆ ದಾಟುವಾಗ ಹರಿದ ಕಾರುಒದ್ದಾಡಿ ಪ್ರಾಣಬಿಟ್ಟ ಬಾಲಕ
– ವಿಜಯನಗರ: ಮೊಟ್ಟೆ ಹೊತ್ತು ಹೊರಟಿದ್ದ ಲಾರಿ ಪಲ್ಟಿ
– ರಾಯಚೂರು: ನಿಂತಿದ್ದ ಟ್ಯಾಂಕರ್‌ ಟ್ಯಾಲಿಗೆ ಬೈಕ್‌ ಡಿಕ್ಕಿ ಸವಾರ ಸಾವು, ಮತ್ತೋರ್ವ ಗಂಭೀರ

NAMMUR EXPRESS NEWS
ರಾಮನಗರ : ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಮಾಳೆದೊಡ್ಡಿ ಗ್ರಾಮದಲ್ಲಿ ದರ್ಶನ್‌ ಸ್ಥಿತಿಗೆ ಅಭಿಮಾನಿಯೊಬ್ಬ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ ಸ್ಥಿತಿಯನ್ನು ಕಂಡು ಅಭಿಮಾನಿ ಸೂಸೈಡ್ ಮಾಡಿಕೊಂಡಿದ್ದಾರೆ. ಬೈರೇಶ್‌ ಹೆಸರಿನ ದರ್ಶನ್‌ ಅಭಿಮಾನಿ ಮೋರಿಗೆ ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ. ತಮ್ಮ ಹೀರೋಗೆ ಈ ಸ್ಥಿತಿ ಬರಬಾರದಿತ್ತು ಎಂದು ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಕಳೆದ ಎರಡು ಮೂರು ದಿನಗಳಿಂದ ಭೈರೇಶ್‌ ಅನ್ನ ನೀರು ಬಿಟ್ಟಿದ್ದ. ನಟ ದರ್ಶನ್‌ಗಾದ ಪರಿಸ್ಥಿತಿ ನೆನೆದು ತುಂಬಾ ಮರುಗಿದ್ದರು. ನಿತ್ರಾಣಗೊಂಡು ಮೋರಿಗೆ ಬಿದ್ದು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಸಾಮಾಜಿಕ ಜಾಲಾತಾಣದಲ್ಲಿ ಚರ್ಚೆ ನಡೆಯುತ್ತಿದ್ದು, ನಿಜವಾಗಲೂ ನೋವಿನಲ್ಲಿಯೇ ಆತ ಮೃತಪಟ್ಟನೇ ಎನ್ನುವ ಪ್ರಶ್ನೆ ಮೂಡಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು, ಹೆಚ್ಚಿನ ಮಾಹಿತಿ ಬರಬೇಕಿದೆ.

– ಬೆಳಗಾವಿ : ರಸ್ತೆ ದಾಟುವಾಗ ಹರಿದ ಕಾರುಒದ್ದಾಡಿ ಪ್ರಾಣಬಿಟ್ಟ ಬಾಲಕ

ಬೆಳಗಾವಿ: ಕಾರೊಂದು ಹರಿದ ಪರಿಣಾಮ ಬಾಲಕನೊರ್ವ ದಾರುಣವಾಗಿ ಮೃತಪಟ್ಟಿದ್ದಾನೆ. ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ನಾಗನೂರು ಗ್ರಾಮದಲ್ಲಿ ದುರ್ಘಟನೆ ನಡೆದಿದೆ. ವಿನಯ್ ಲಕ್ಷ್ಮಣ ಕೆಂಚನ್ನವರ್(8) ಮೃತ ದುರ್ದೈವಿ. ಅಂದಹಾಗೇ ವಿನಯ್‌ ನಾಗನೂರು ಬಳಿ ರಸ್ತೆ ದಾಟುವಾಗ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಗಂಭೀರ ಗಾಯಗೊಂಡಿದ್ದ ವಿನಯ್‌ ತೀವ್ರ ರಕ್ತಸ್ರಾವವಾಗಿ ಒದ್ದಾಡುತ್ತಿದ್ದ. ಇತ್ತ ಅಪಘಾತವಾಗುತ್ತಿದ್ದಂತೆ ಕಾರು ಚಾಲಕನೇ ಬಾಲಕನನ್ನು ಆಸ್ಪತ್ರೆಗೆ ಕರೆತಂದಿದ್ದಾರೆ. ಅಂದಹಾಗೇ ವಿನಯ್‌ ನಾಗನೂರು ಬಳಿ ರಸ್ತೆ ದಾಟುವಾಗ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಗಂಭೀರ ಗಾಯಗೊಂಡಿದ್ದ ವಿನಯ್‌ ತೀವ್ರ ರಕ್ತಸ್ರಾವವಾಗಿ ಒದ್ದಾಡುತ್ತಿದ್ದ. ಇತ್ತ ಅಪಘಾತವಾಗುತ್ತಿದ್ದಂತೆ ಕಾರು ಚಾಲಕನೇ ಬಾಲಕನನ್ನು ಆಸ್ಪತ್ರೆಗೆ ಕರೆತಂದಿದ್ದಾರೆ.
ಆದರೆ ವೈದ್ಯರು ಪರೀಕ್ಷಿಸಿ ಬಾಲಕ ಮೃತಪಟ್ಟಿದ್ದಾಗಿ ಖಚಿತ ಪಡಿಸಿದ್ದಾರೆ. ಬಳಿಕ ಆಸ್ಪತ್ರೆಯಿಂದ ಚಾಲಕ ನೇರ ಠಾಣೆಗೆ ಹಾಜರಾಗಿದ್ದಾನೆ. ಸದ್ಯ ಬಾಲಕನ ಮೃತದೇಹವು ಗೋಕಾಕ ಸರ್ಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗುತ್ತದೆ. ಮೂಡಲಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.

– ವಿಜಯನಗರ: ಮೊಟ್ಟೆ ಹೊತ್ತು ಹೊರಟಿದ್ದ ಲಾರಿ ಪಲ್ಟಿ

ವಿಜಯನಗರ: ಮೊಟ್ಟೆ ಹೊತ್ತು ಹೊರಟಿದ್ದ ಲಾರಿಯೊಂದು ಪಲ್ಟಿಯಾಗಿದೆ. ರಾಷ್ಟ್ರೀಯ ಹೆದ್ದಾರಿ 50ರ ಶಿವಪುರ ಗ್ರಾಮದ ಬಳಿ ಘಟನೆ ನಡೆದಿದೆ. ವಿಜಯನಗರದ ಕೂಡ್ಲಿಗಿ ತಾಲೂಕಿನ ಹಾರುವನಹಳ್ಳಿ ಗ್ರಾಮದ ಬಳಿಯ ಕೋಳಿ ಫಾರಂನಿಂದ ಲೋಡ್ ಆಗಿ ಲಾರಿ ಹೊರಟಿತ್ತು. ನಿದ್ರೆ ಮಂಪರಿನಲ್ಲಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದೆ. ಲಾರಿ ಪಲ್ಟಿಯಾದ ರಭಸಕ್ಕೆ ಮೊಟ್ಟೆಗಳು ಒಡೆದು ಹೋಗಿತ್ತು. ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

– ರಾಯಚೂರು: ನಿಂತಿದ್ದ ಟ್ಯಾಂಕರ್‌ ಟ್ಯಾಲಿಗೆ ಬೈಕ್‌ ಡಿಕ್ಕಿ ಸವಾರ ಸಾವು, ಮತ್ತೋರ್ವ ಗಂಭೀರ

ರಾಯಚೂರು: ನಿಂತಿದ್ದ ಟ್ಯಾಂಕರ್ ಟ್ಯಾಲಿಗೆ ಬೈಕ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಮೃತಪಟ್ಟರೆ, ಮತ್ತೋರ್ವನಿಗೆ ಗಂಭೀರ ಗಾಯವಾಗಿದೆ. ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಅಂಕುಶದೊಡ್ಡಿ ಗ್ರಾಮದ ಬಳಿ ಅಪಘಾತ ನಡೆದಿದೆ. ಯಮನಪ್ಪ (40) ಮೃತ ದುರ್ದೈವಿ. ಮಸ್ಕಿ ತಾಲೂಕಿನ ಗುಡಿಹಾಳ ಗ್ರಾಮದ ಯಮನಪ್ಪ ಲಿಂಗಸೂಗೂರು ಕಡೆಯಿಂದ ಮಸ್ಕಿ ಕಡೆಗೆ ಬೈಕ್‌ನಲ್ಲಿ ಹೋಗುತ್ತಿದ್ದರು. ಈ ವೇಳೆ ನಿಂತಿದ್ದ ಟ್ಯಾಂಕರ್‌ ಟ್ಯಾಲಿ ಕಾಣದೆ ಬೈಕ್‌ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ತಲೆಗೆ ಗಂಭೀರ ಪೆಟ್ಟಾಗಿದ್ದು, ಯಮನಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜತೆಗೆ ಇದ್ದ ಗಂಗಣ್ಣ ಎಂಬಾತನಿಗೆ ಗಂಭೀರ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಸ್ಕಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ನಜ್ಜು-ಗುಜ್ಜಾಗಿದ್ದ ಬೈಕ್‌ ಅನ್ನು ವಶಕ್ಕೆ ಪಡೆಯಲಾಗಿದೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.