Categories
ರಾಜ್ಯ

ಟಾಪ್ 5 ನ್ಯೂಸ್ ಕರ್ನಾಟಕ

ಟಾಪ್ 5 ನ್ಯೂಸ್ ಕರ್ನಾಟಕ
– ಬೆಳಗಾವಿ : ಬಾಲಕಿಯರ ಮೇಲೆ ಗ್ಯಾಂಗ್​​ ರೇಪ್​
– ನೆಲಮಂಗಲ : ತಂಗಿಗೆ ಇನ್​ಸ್ಟಾಗ್ರಾಂನಲ್ಲಿ ಅಶ್ಲೀಲ ಮೆಸೇಜ್​ ಕಳಿಸುತ್ತಿದ್ದನಿಗೆ ಅಣ್ಣನಿಂದ ಯುವಕನಿಗೆ ಹಲ್ಲೆ
– ಬಳ್ಳಾರಿ : 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ!
– ಬೆಂಗಳೂರು : ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ಪತ್ನಿ, ಮನೆಯವರಿಗೆ ಚಾಕು ಇರಿದ ಪತಿ
– ಬಳ್ಳಾರಿ : ಬಿಮ್ಸ್ ಆಸ್ಪತ್ರೆಯ ಕಂಪ್ಯೂಟರ್ ಆಪರೇಟರ್​ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ

NAMMUR EXPRESS NEWS
ಬೆಳಗಾವಿ : ರಾಯಬಾಗ ತಾಲೂಕಿನ ಸವಸುದ್ದಿ ಗ್ರಾಮದ ಬಳಿಯ ಗುಡ್ಡಗಾಡು ಪ್ರದೇಶದಲ್ಲಿ ಬಾಲಕಿಯರ ಮೇಲೆ ಗ್ಯಾಂಗ್ ರೇಪ್ ಆಗಿದೆ. ಮೂವರು ಸೇರಿಕೊಂಡು ಇಬ್ಬರು ಬಾಲಕಿಯರ ಮೇಲೆ ಅತ್ಯಾಚಾರವೆಸಗಿದ್ದಾರೆ. ಅತ್ಯಾಚಾರ ಎಸಗಿದ ಅಭಿಷೇಕ್, ಆದಿಲ್ ಜಮಾದಾರ್ ಮತ್ತು ಚಾಲಕ ಕೌತುಕ್ ಬಡಿಗೇರ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಸಂಬಂಧ ಬೆಳಗಾವಿ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಡಾ.ಭೀಮಾಶಂಕರ್ ಗುಳೇದ್ ಮಾತನಾಡಿ, “ಆರೋಪಿ ಅಭಿಷೇಕ್ ಇನ್‌ಸ್ಟಾಗ್ರಾಂ ಮೂಲಕ ಓರ್ವ ಬಾಲಕಿಗೆ ಪರಿಚಯವಾಗಿದ್ದಾನೆ. ಸವದತ್ತಿಗೆ ಹೋಗುತ್ತಿದ್ದೇನೆ ನೀನು ಬಾ ಎಂದು ಬಾಲಕಿಗೆ ಪುಸಲಾಯಿಸಿದ್ದಾನೆ. ಈತನ ಮಾತು ನಂಬಿ, ನೊಂದ ಬಾಲಕಿ ತನ್ನ ಸ್ನೇಹಿತೆಯನ್ನ ಕರೆದುಕೊಂಡು, ಇಬ್ಬರೂ ಒಟ್ಟಾಗಿ ಹಾರೂಗೇರಿ ಬಸ್ ನಿಲ್ದಾಣದಕ್ಕೆ ಹೋಗಿದ್ದಾರೆ” ಎಂದು ಹೇಳಿದರು. ಆರೋಪಿ ಅಭಿಷೇಕ ಸಂತ್ರಸ್ತ ಬಾಲಕಿಯರನ್ನು ಎರ್ಟಿಗಾ ಕಾರಿನಲ್ಲಿ ಕರೆದುಕೊಂಡು ಹೋಗಿದ್ದಾನೆ. ಎರ್ಟಿಗಾ ಕಾರಿನಲ್ಲಿ ಮೂರೂ ಜನ ಆರೋಪಿಗಳಿದ್ದರು. ಸಂತ್ರಸ್ತ ಬಾಲಕಿಯರನ್ನು ರಾಯಬಾಗ ತಾಲೂಕಿನ ಸವಸುದ್ದಿ ಗ್ರಾಮದ ಬಳಿಯ ಗುಡ್ಡಗಾಡು ಪ್ರದೇಶಕ್ಕೆ ಕರೆದುಕೊಂಡು ಹೋಗಿದ್ದಾರೆ. ಜನವರಿ 3ರಂದು ಮಧ್ಯಾಹ್ನದ ವೇಳೆಗೆ ಗುಡ್ಡದಲ್ಲಿ ಬಾಲಕಿಯರ ಮೇಲೆ ಅತ್ಯಾಚಾರವೆಸಗಿದ್ದಾರೆ” ಎಂದು ತಿಳಿಸಿದರು. ಸಂತ್ರಸ್ತ ಬಾಲಕಿಯರು ಮನೆಯಲ್ಲಿ ಈ ವಿಚಾರ ತಿಳಿಸಿದ್ದಾರೆ. ಬಳಿಕ, ಸಂತ್ರಸ್ತ ಬಾಲಕಿ ತಮ್ಮ ಸೋದರ ಸಂಬಂಧಿ ಜೊತೆಗೆ ಬಂದು ಜನವರಿ 13ರಂದು ಹಾರೂಗೇರಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರು ಕೊಟ್ಟ 24 ಗಂಟೆಯೊಳಗೆ ಇಬ್ಬರು ಆರೋಪಿಯನ್ನ ಬಂಧಿಸಲಾಗಿದೆ. ನಂತರ, ಮತ್ತೋರ್ವ ಆರೋಪಿಯನ್ನು ಬಂಧಿಸಲಾಗಿದೆ” ಎಂದರು. “ಆರೋಪಿಗಳ ಹಿನ್ನಲೆಯನ್ನು ಪರಿಶೀಲನೆ ಮಾಡುತ್ತೇವೆ. ಇನ್‌ಸ್ಟಾಗ್ರಾಂನಲ್ಲಿ ಹುಡುಗಿ ಹಾಕಿದ್ದ ರೀಲ್ಸ್ ಪಾಲೋ ಮಾಡುತ್ತಿದ್ದ. ಅವರ ಮೊಬೈಲ್​ಗಳನ್ನು ಜಪ್ತಿ ಮಾಡಿದ್ದು ಅದರಲ್ಲಿ ವಿಡಿಯೋಗಳು ಸಿಕ್ಕಿವೆ. ಗ್ಯಾಂಗ್ ರೇಪ್ ಪ್ರಕರಣ ಅಂತ ಕೇಸ್​ ದಾಖಲಿಸಿದ್ದೇವೆ” ಎಂದು ಮಾಹಿತಿ ನೀಡಿದರು.

– ನೆಲಮಂಗಲ : ತಂಗಿಗೆ ಇನ್​ಸ್ಟಾಗ್ರಾಂನಲ್ಲಿ ಅಶ್ಲೀಲ ಮೆಸೇಜ್​ ಕಳಿಸುತ್ತಿದ್ದನಿಗೆ ಅಣ್ಣನಿಂದ ಯುವಕನಿಗೆ ಹಲ್ಲೆ

ನೆಲಮಂಗಲ : ಇನ್​ಸ್ಟಾಗ್ರಾಂನಲ್ಲಿ ಯುವತಿಗೆ ಅಶ್ಲೀಲ ಮೆಸೇಜ್​ ಕಳಿಸುತ್ತಿದ್ದನಿಗೆ ಯುವತಿ ಅಣ್ಣನಿಂದ ಧರ್ಮದೇಟು ನೀಡಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಕೆಂಪಲಿಂಗನಹಳ್ಳಿ ಗ್ರಾಮದಲ್ಲಿ ನಡೆದಿದೆ. ಸತೀಶ್​ಗೆ ಯುವತಿ ಅಣ್ಣ ರಮೇಶ್​ನಿಂದ ಹಲ್ಲೆ ಮಾಡಲಾಗಿದೆ. ನೆಲಮಂಗಲ ಟೌನ್ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸತೀಶ್ ಇನ್​ಸ್ಟಾಗ್ರಾಂನಲ್ಲಿ ಯುವತಿಗೆ ಅಶ್ಲೀಲ ಮೆಸೇಜ್​ ಕಳಿಸುತ್ತಿದ್ದ. ಯುವತಿ ಮೊಬೈಲ್​ನಿಂದ ಲೊಕೇಷನ್ ಹಾಕಿದ್ದ ಅಣ್ಣ ರಮೇಶ್, ಕೆಂಪಲಿಂಗನಹಳ್ಳಿ ಬಂದಾಗ ಏಕಾಏಕಿ ಮುಖಕ್ಕೆ ಗುದ್ದಿ ತೀವ್ರ ಹಲ್ಲೆ ಮಾಡಿದ್ದಾರೆ. ಹಲ್ಲೆಗೊಳಗಾದ ಸತೀಶ್​ನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಹಲ್ಲೆಗೈದು ಪರಾರಿಯಾದ ರಮೇಶ್​ಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

– ಬಳ್ಳಾರಿ : 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ!

ಬಳ್ಳಾರಿ : ಮನೆ ಮುಂದೆ ಆಟವಾಡುತ್ತಿದ್ದ ಐದು ವರ್ಷದ ಬಾಲಕಿಯನ್ನ ಪುಸುಲಾಯಿಸಿ ಕರೆದೊಯ್ದು ದುಷ್ಕರ್ಮಿಯಿಂದ ಅತ್ಯಾಚಾರ ಎಸಗಿರುವಂತಹ ಘಟನೆ ಜಿಲ್ಲೆಯ ತೋರಣಗಲ್​ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪೋಕ್ಸೋ ಕಾಯ್ದೆಯಡಿ ಕೇಸ್ ದಾಖಲಿಸಿ ಪೊಲೀಸರಿಂದ ತನಿಖೆ ನಡೆಸಿದ್ದಾರೆ. ಸದ್ಯ ಆರೋಪಿ ಇರುವ ಸಿಸಿ ಟಿವಿ ವಿಡಿಯೋ ವೈರಲ್ ಆಗಿದೆ. ಹತ್ತು ವರ್ಷದ ಹಿಂದೆ ಕೆಲಸ ಅರಸಿ ಬಂದು ಖಾಸಗಿ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ದಂಪತಿಯ ಮಗುವಿನ ಮೇಲೆ ಅತ್ಯಾಚಾರವೆಸಗಲಾಗಿದೆ. ಲೈಂಗಿಕ ದಾಳಿಯಿಂದ ಮಗುವಿಗೆ ಆಂತರಿಕ ಗಾಯವಾಗಿ, ತೀವ್ರ ರಕ್ತಸ್ರಾವ ಉಂಟಾಗಿದೆ. ಕೂಡಲೇ ಮಗುವಿಗೆ ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ನೀಡಲಾಗಿದ್ದು, ಈ ವೇಳೆ ಅತ್ಯಾಚಾರ ನಡೆದಿರುವುದು ಧೃಡಪಟ್ಟಿದೆ. ಮಗುವಿಗೆ ಶಸ್ತ್ರ ಚಿಕಿತ್ಸೆ ಮಾಡಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದೆ.

– ಬೆಂಗಳೂರು : ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ಪತ್ನಿ, ಮನೆಯವರಿಗೆ ಚಾಕು ಇರಿದ ಪತಿ

ಬೆಂಗಳೂರು : ಪತಿಯ ಅನೈತಿಕ ಸಂಬಂಧ ಪ್ರಶ್ನೆ ಮಾಡಿದ್ದಕ್ಕೆ ಪತ್ನಿ ಹಾಗೂ ಮನೆಯವರಿಗೆ ಚಾಕುವಿನಿಂದ ಹಲ್ಲೆ ಮಾಡಿರುವಂತಹ ಘಟನೆ ಬೆಂಗಳೂರು ಉತ್ತರ ತಾಲೂಕಿನ ಸೊಂಡೆಕೊಪ್ಪದಲ್ಲಿ ನಡೆದಿದೆ. ಪತ್ನಿ ಮುಮ್ತಾಜ್, ಪತ್ನಿಯ ತಾಯಿ ಶಬೀನ, ಅಣ್ಣ ಅರ್ಬಜ್​ಗೆ ಪತಿ ಅಜರುದ್ದೀನ್ ಚಾಕು ಇರಿದಿದ್ದಾರೆ. ಹಲ್ಲೆ ನಡೆಸಿ ಪರಾರಿಯಾಗುತ್ತಿದ್ದ ವೇಳೆ ಪತ್ನಿ ಮನೆಯವರಿಂದ ಅಜರುದ್ದೀನ್ ಮೇಲೆ ಹಲ್ಲೆ ಮಾಡಲಾಗಿದೆ. ಯುವತಿ ಸೀಮಾ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಅಜರುದ್ದೀನ್, ಇದೇ ವಿಷಯವಾಗಿ ಪರಸ್ಪರ ಬಡಿದಾಡಿಕೊಂಡು ಆಸ್ಪತ್ರೆ ಸೇರಿದ್ದು, ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

– ಬಳ್ಳಾರಿ : ಬಿಮ್ಸ್ ಆಸ್ಪತ್ರೆಯ ಕಂಪ್ಯೂಟರ್ ಆಪರೇಟರ್​ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ

ಬಳ್ಳಾರಿ : ಬಳ್ಳಾರಿಯ ಬಿಮ್ಸ್ ಆಸ್ಪತ್ರೆಯಲ್ಲಿ ಹೊರ ಗುತ್ತಿಗೆ ಆಧಾರದಲ್ಲಿ ಕಂಪ್ಯೂಟರ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದ ಮಹಿಳೆ ಮೇಲೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧೀಕ್ಷಕ ನಿರಂತರ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎನ್ನುವ ಆರೋಪ ಕೇಳಿ ಬಂದಿತ್ತು. ಮಹಿಳೆಯ ಮೇಲೆ ಎರಡು ವರ್ಷಗಳಿಂದ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಅಧೀಕ್ಷಕ ವಿ.ಕೆ‌. ವೆಂಕಟೇಶ ವಿರುದ್ಧ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿ ಬಂದಿತ್ತು. ಸಂತ್ರಸ್ತೆಗೆ ಹೆದರಿಸಿ, ನಾನು ಹೇಳಿದಕ್ಕೆ ಸಹಕರಿಸಬೇಕು ಇಲ್ಲ ಅಂದ್ರೆ ನಿನ್ನ ಕೆಲಸದಿಂದ ತೆಗೆದು ಹಾಕುತ್ತೇನೆ ಅಂತಾ ಬೆದರಿಸಿ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿತ್ತು. ಜೊತೆಗೆ ಮಹಿಳೆಯ ಜೊತೆಗೆದಿದ್ದ ಖಾಸಗಿ ಫೋಟೋ ಮತ್ತು ವಿಡಿಯೋಗಳನ್ನ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುವುದಾಗಿ ಹೆದರಿಸಿ ಪದೆ ಪದೆ ಲೈಂಗಿಕ ದೌರ್ಜನ್ಯ ಎಸಗಿ ಕಿರುಕುಳ ನೀಡುತ್ತಿದ್ದನಂತೆ. ಹೀಗಾಗಿ ಬೇಸತ್ತ ಮಹಿಳೆ ಬಳ್ಳಾರಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಿಸಿದ್ದರು. ಇನ್ನು ಪ್ರಕರಣ ಕೈಗೆತ್ತಿಕೊಂಡ ಪೋಲಿಸರು ಅಧಿಕ್ಷಕ ವಿ.ಕೆ.ವೆಂಕಟೇಶ ನನ್ನ ಅರೆಸ್ಟ್ ಮಾಡಿದ್ದರು.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.