ಟಾಪ್ 7 ಕರ್ನಾಟಕ ನ್ಯೂಸ್
– ಸಾಲು ಮರದ ತಿಮ್ಮಕ್ಕಗೆ ತುರ್ತು ಚಿಕಿತ್ಸೆ!
– ಡ್ರೋನ್ ಪ್ರತಾಪ್ ಗೆ ಬಿಗ್ ಶಾಕ್!: 10 ದಿನ ಜೈಲು
– ಅಂತಾರಾಷ್ಟ್ರೀಯ ತಬಲಾ ವಾದಕ ಜಾಕಿರ್ ಹುಸೇನ್ ನೆನಪು ಮಾತ್ರ
– ಚಿತ್ರದುರ್ಗ: ಮೀನು ಹಿಡಿಯಲು ಹಾಕಿದ್ದ ಬಲೆಯಲ್ಲಿ ಯುವಕ ಸಾವು
– ಕೊಡಗು: ಒಡಹುಟ್ಟಿದ ಅಣ್ಣನನ್ನೇ ಗುಂಡಿಕ್ಕಿ ಕೊಂದ ತಮ್ಮ!
– ಸೋಮೇಶ್ವರ: ಕಾಲು ಜಾರಿ ಸಮುದ್ರಕ್ಕೆ ಬಿದ್ದ ಮಹಿಳೆ ಮುಳುಗಿ ಸಾವು
– ಗದಗ: ನಾಪತ್ತೆಯಾಗಿದ್ದ ಬಾಲಕ ಕೃಷಿಹೊಂಡದಲ್ಲಿ ಶವವಾಗಿ ಪತ್ತೆ
NAMMUR EXPRESS NEWS
ಬೆಂಗಳೂರು: ವೃಕ್ಷಮಾತೆ ಎಂದೇ ಹೆಸರಾಗಿರುವಂತ ಸಾಲುಮರದ ತಿಮ್ಮಕ್ಕ ಅವರು ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ಅವರ ಆರೋಗ್ಯದಲ್ಲಿ ಏರುಪೇರು ಆದ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ ವೈದ್ಯರು ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ.
ಬೆಂಗಳೂರಿನ ಜಯನಗರದಲ್ಲಿರುವಂತ ಅಪೋಲೋ ಆಸ್ಪತ್ರೆಗೆ ವೃಕ್ಷಮಾತೆಯೆಂದೇ ಹೆಸರಾಗಿರುವಂತ ಸಾಲುಮರದ ತಿಮ್ಮಕ್ಕ ಅವರನ್ನು ತೀವ್ರ ಅನಾರೋಗ್ಯದ ಕಾರಣ ದಾಖಲಿಸಲಾಗಿದೆ. ಕಳೆದ 17 ದಿನಗಳಿಂದ ಆಸ್ಪತ್ರೆಯಲ್ಲಿ ಸಾಲುಮರದ ತಿಮ್ಮಕ್ಕ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಡ್ರೋನ್ ಪ್ರತಾಪ್ ಗೆ ಬಿಗ್ ಶಾಕ್!: 10 ದಿನ ಜೈಲು
ಕೃಷಿ ಹೊಂಡದಲ್ಲಿ ಸೋಡಿಯಂ ಸ್ಪೋಟಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಡ್ರೋನ್ ಪ್ರತಾಪ್ ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿ ಇಂದು ಅಂತ್ಯವಾಗಿತ್ತು.ಬಳಿಕ ಪೊಲೀಸರು ಮಧುಗಿರಿ ತಾಲೂಕಿನ JMFC ಕೋರ್ಟಿಗೆ ಡ್ರೋನ್ ಪ್ರತಾಪ್ ಅವರನ್ನು ಪೊಲೀಸರು ಹಾಜರಿಪಡಿಸಿದ್ದರು. ವಿಚಾರಣೆ ಬಳಿಕ ಡ್ರೋನ್ ಪ್ರತಾಪ್ ಅವರನ್ನು ಡಿಸೆಂಬರ್ 26ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ. ಡಿಸೆಂಬರ್ 26ರವರೆಗೂ ಡ್ರೋನ್ ಪ್ರತಾಪ್ ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ನ್ಯಾಯಾಂಗ ಬಂಧನಕ್ಕೆ ಮಧುಗಿರಿ ಜೆ ಎಂ ಎಫ್ ಸಿ ಕೋರ್ಟ್ ಆದೇಶ ಹೊರಡಿಸಿದೆ. ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಜಿಎಂಎಸ್ಸಿ ನ್ಯಾಯಾಲಯವು ಡಿಸೆಂಬರ್ 26ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ. ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನಲ್ಲಿ ಡ್ರೋನ್ ಪ್ರತಾಪ್ ಕಳೆದ ಕೆಲವು ದಿನಗಳ ಹಿಂದೆ ಅನುಮತಿ ಪಡೆಯದೆ ಕೃಷಿ ಹೊಂಡದಲ್ಲಿ ಸೋಡಿಯಂ ಬಳಸಿ ಸ್ಪೋಟಿಸಿದ್ದ ಘಟನೆ ವಿಡಿಯೋ ಮಾಡಿ ಹರಿಬಿಟ್ಟಿದ್ದರು. ಈ ವಿಚಾರವಾಗಿ ಮದುಗಿರಿ ತಾಲೂಕು ಮಿಡಿಶೇಸಿ ಠಾಣೆ ಪೋಲಿಸರು ಅರೆಸ್ಟ್ ಮಾಡಿದ್ದರು. ಬಳಿಕ ಅವರ ಇಬ್ಬರು ಸ್ನೇಹಿತರನ್ನು ಕೂಡ ಅರೆಸ್ಟ್ ಮಾಡಿ ವಿಚಾರಣೆ ಒಳಪಡಿಸಿದ್ದರು.ಇದೀಗ ಡಿಸೆಂಬರ್ 26ರವರೆಗೆ ಅಂದರೆ 10 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ.
– ಅಂತಾರಾಷ್ಟ್ರೀಯ ತಬಲಾ ವಾದಕ ಜಾಕಿರ್ ಹುಸೇನ್ ಇನ್ನಿಲ್ಲ!
ಭಾರತದ ಪ್ರಸಿದ್ಧ ಶಾಸ್ತ್ರೀಯ ಸಂಗೀತಗಾರರಲ್ಲಿ ಒಬ್ಬರಾಗಿದ್ದ ಖ್ಯಾತ ತಬಲಾ ವಾದಕ ಅಲ್ಲಾರಖಾ ಅವರ ಹಿರಿಯ ಪುತ್ರನಾಗಿದ್ದ ಜಾಕೀರ್ ಹುಸೇನ್, 1951 ರಂದು ಮುಂಬೈನಲ್ಲಿ ಜನಿಸಿದ್ದರು. ಚಿಕ್ಕ ವಯಸ್ಸಿನಿಂದಲೂ ಸಂಗೀತದ ವಾತಾವರಣದಲ್ಲಿ ಬೆಳೆದಿದ್ದರು. ಅವರ ತಂದೆಯ ಕಟ್ಟುನಿಟ್ಟಿನ ಮಾರ್ಗದರ್ಶನದಲ್ಲಿ ಜಾಕಿರ್ ಹುಸೇನ್ ಅಸಾಧಾರಣ ಪ್ರತಿಭೆಯಾಗಿ ಹೊರಹೊಮ್ಮಿ, ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಗಳಿಸಿದರು. ಜಾಕೀರ್ ಹುಸೇನ್ ಅವರು ಏಳು ಬಾರಿ ಗ್ರ್ಯಾಮಿ ಪ್ರಶಸ್ತಿ ನಾಮನಿರ್ದೇಶನ ಪಡೆದಿದ್ದರು. ಈ ಪೈಕಿ , ಮೂರು ಬಾರಿ ಪ್ರಶಸ್ತಿಗಳನ್ನು ಗೆದ್ದಿದ್ದರು.
– ಚಿತ್ರದುರ್ಗ: ಮೀನು ಹಿಡಿಯಲು ಹಾಕಿದ್ದ ಬಲೆಯಲ್ಲಿ ಸಿಲುಕಿ ಯುವಕ ಸಾವು
ಚಿತ್ರದುರ್ಗ: ವೇದಾವತಿ ನದಿಯಲ್ಲಿ ಮೀನು ಹಿಡಿಯಲು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ನಡೆದಿದೆ. ಮೃತ ಯುವಕ ಶಿಡ್ಲಯ್ಯನಕೋಟೆ ಶ್ರೀಧರ(40) ಬೆಳಗಿನ ಜಾವ 4.30ರ ವೇಳೆಗೆ ನದಿಯಲ್ಲಿ ಮೀನು ಎತ್ತಲು ಹೋದಾಗ ಕಾಲಿಗೆ ಬಲೆ ಸಿಲುಕಿ ನೀರಿನಿಂದ ಹೊರಬರಲಾಗದೆ ಮೃತಪಟ್ಟಿದ್ದಾನೆ. ಮೂಲತಃ ಮೀನು ಹಿಡಿಯುತ್ತಿದ್ದ ಶ್ರೀಧರ, ಈಜು ಬಲ್ಲವನಾಗಿದ್ದ. ಆದರೆ, ಅಚಾನಕ್ ಕಾಲಿಗೆ ಬಲೆ ತೊಡರು ಹಾಕಿಕೊಂಡಿದ್ದು, ಬಿಡಿಸಿಕೊಳ್ಳಲು ಸಾಧ್ಯವಾಗಿಲ್ಲ. ಹಿರಿಯೂರು ತಾಲೂಕಿನ ಹೊಸಹಳ್ಳಿ ಬಳಿಯಿರುವ ಚೆಕ್ ಡ್ಯಾಂ ನಲ್ಲಿ ಮೀನು ಹಿಡಿಯಲು ಹೋಗಿದ್ದಾಗ ಈ ದುರ್ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಅಬ್ಬಿನಹೊಳೆ ಠಾಣೆ ಪೊಲೀಸರು ಅಗ್ನಿಶಾಮಕ ದಳ ತೆರಳಿ ಪರಿಶೀಲನೆ ನಡೆಸಿದ್ದು, ಯುವಕ ಮೃತ ದೇಹವನ್ನು ನೀರಿನಿಂದ ಮೇಲೆ ತೆಗೆದಿದ್ದಾರೆ.
– ಕೊಡಗು: ಒಡಹುಟ್ಟಿದ ಅಣ್ಣನನ್ನೇ ಗುಂಡಿಕ್ಕಿ ಕೊಂದ ತಮ್ಮ
ಕೊಡಗು : ನಾಡ ಬಂದೂಕಿನಿಂದ ಗುಂಡು ಹೊಡೆದು ತಮ್ಮನಿಂದಲೇ ಅಣ್ಣನನ್ನು ಕೊಲೆ ಮಾಡಿರುವಂತಹ ಘಟನೆ ಮಡಿಕೇರಿ ತಾಲೂಕಿನ ಗಾಳಿಬೀಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಣಚಲು ಗ್ರಾಮದಲ್ಲಿ ನಡೆದಿದೆ. ಅಣ್ಣ ಧರ್ಮನನ್ನು ಸಹೋದರ ಪ್ರತ್ತು ಕೊಲೆ ಮಾಡಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
– ಸೋಮೇಶ್ವರ: ಕಾಲು ಜಾರಿ ಸಮುದ್ರಕ್ಕೆ ಬಿದ್ದ ಮಹಿಳೆ ಮುಳುಗಿ ಸಾವು
ಸೋಮೇಶ್ವರ: ಕಾಲು ಜಾರಿ ಸಮುದ್ರಕ್ಕೆ ಬಿದ್ದ ಮಹಿಳೆ ಮುಳುಗಿ ಸಾವನ್ನಪ್ಪಿರುವಂತಹ ಘಟನೆ ಮಂಗಳೂರು ಹೊರವಲಯದ ಸೋಮೇಶ್ವರ ಕಡಲ ತೀರದಲ್ಲಿ ನಡೆದಿದೆ. ದೇರೆಬೈಲ್ ನಿವಾಸಿ ಉಷಾ (72) ಮೃತ ಮಹಿಳೆ. ತಂಗಿ ನಿಶಾ ಭಂಡಾರಿ ಅವರ ಪತಿ ಕರುಣಾಕರ ಭಂಡಾರಿ ಪಿಂಡ ಪ್ರಧಾನ ವಿಧಿಯಲ್ಲಿ ಉಷಾ ಭಾಗವಹಿಸಿದ್ದರು. ಈ ವೇಳೆ ಪುರೋಹಿತರು ಸಮುದ್ರ ತೀರದಲ್ಲಿ ಪಿಂಡ ಪ್ರದಾನ ನೆರವೇರಿಸಿದ ಬಳಿಕ ಸಮುದ್ರಕ್ಕೆ ಇಳಿದಿದ್ದರು. ಈ ವೇಳೆ ಮುಳಗುತ್ತಿದ್ದ ಉಷಾ ಅವರ ರಕ್ಷಣೆಗೆ ಸ್ಥಳೀಯರು ಮತ್ತು ನಾಡದೋಣಿ ಮೀನುಗಾರರು ಮುಂದಾಗಿದ್ದರು. ಆದರೆ ಅಷ್ಟರಲ್ಲಾಗಲೇ ಸಮುದ್ರದಲ್ಲಿ ಮುಳುಗಿ ಉಷಾ ಮೃತಪಟ್ಟಿದ್ದಾರೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
– ಗದಗ: ನಾಪತ್ತೆಯಾಗಿದ್ದ ಬಾಲಕ ಕೃಷಿಹೊಂಡದಲ್ಲಿ ಶವವಾಗಿ ಪತ್ತೆ
ಗದಗ: ಮೂರು ದಿನದಿಂದ ನಾಪತ್ತೆಯಾಗಿದ್ದ ಬಾಲಕ ಕೃಷಿಹೊಂಡದಲ್ಲಿ ಶವವಾಗಿ ಪತ್ತೆಯಾದಂತಹ ಘಟನೆ ಗದಗ ನಗರದ ಗಂಗಿಮಡಿ ಬಳಿಯ ಜಮೀನೊಂದರಲ್ಲಿ ನಡೆದಿದೆ. ಶಿವಾಜಿ ವಡ್ಡೇಪಲ್ಲಿ (14) ಮೃತ ಬಾಲಕ. ಮೂರು ದಿನಗಳ ಹಿಂದೆ ಮನೆಯಿಂದ ಕಾಣೆಯಾಗಿದ್ದ. ಪೋಷಕರು ಗದಗ ಗ್ರಾಮಾಂತರ ಠಾಣೆಯಲ್ಲಿ ಕಾಣೆಯಾಗಿರುವ ಬಗ್ಗೆ ದೂರು ನೀಡಿದ್ದರು. ಕೃಷಿ ಹೊಂಡದಲ್ಲಿ ಒಳ ಉಡುಪಿನ ಮೇಲೆ ಶವವಾಗಿ ಬಾಲಕ ಪತ್ತೆಯಾಗಿದ್ದಾನೆ. ಈಜಲು ಹೋಗಿ ಮೃತಪಟ್ಟಿರುವ ಬಗ್ಗೆ ಶಂಕೆ ವ್ಯಕ್ತವಾಗಿತ್ತು. ಮಗನ ಕಳೆದುಕೊಂಡು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಗದಗ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು.