Categories
ರಾಜ್ಯ

ಕರ್ನಾಟಕ ಟಾಪ್ 4 ನ್ಯೂಸ್..!

ಮುರುಘಾಶ್ರೀ ಮತ್ತೆ ಅರೆಸ್ಟ್!
– ಸಾಂಬಾರ್ ಪಾತ್ರೆಗೆ ಬಿದ್ದಿದ್ದ ಬಾಲಕಿ ಸಾವು.!
– ಬೆಸ್ಕಾಂ ನಿರ್ಲಕ್ಷಕ್ಕೆ ರಾಜಧಾನಿಯಲ್ಲಿ ಇಬ್ಬರ ಸಾವು.!
– ಕರ್ತವ್ಯ ನಿರತ ಪೊಲೀಸ್‌ ಸಿಬ್ಬಂದಿ ಮೇಲೆ ಹಲ್ಲೆ

NAMMUR EXPRESS NEWS
ದಾವಣಗೆರೆ: ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದ ಸ್ವಾಮೀಜಿ ಮುರುಘಾಶ್ರೀ ಜಾಮೀನು ಪಡೆದು ಬಿಡುಗಡೆಯಾದ ಕೆಲವೇ ದಿನದಲ್ಲಿ ಮತ್ತೆ ಅರೆಸ್ಟ್ ಆಗಿದ್ದಾರೆ. ವಿಚಾರಣೆಗೆ ಕೋರ್ಟ್ ಗೆ ಹಾಜರಾಗದೇ, ವಿಡಿಯೋ ಕಾನ್ಸರೆನ್ಸ್ ನಲ್ಲಿ ಹಾಜರಾಗುವುದಾಗಿ ಆರೋಪಿ ಸ್ವಾಮೀಜಿ ಪಟ್ಟು ಹಿಡಿದ್ದಿದ್ದು, ಈ ಹಿನ್ನೆಲೆಯಲ್ಲಿ ಕೋರ್ಟ್ ಅರೆಸ್ಟ್ ವಾರೆಂಟ್ ನೀಡಿತ್ತು. ತನಿಖಾಧಿಕಾರಿ ಡಿವೈಎಸ್ ಪಿ ಅನಿಲ್, ಸಿಪಿಐ ಮುದ್ದುರಾಜ್ ನೇತೃತ್ವದ ಅಧಿಕಾರಿಗಳ ತಂಡ ಮಠಕ್ಕೆ ಆಗಮಿಸಿತ್ತು. ಬಳಿಕ ಆರೋಪಿ ಶ್ರೀಯ ಕೋಣೆಗೆ ತೆರಳಿ ಅರೆಸ್ಟ್ ವಾರೆಂಟ್ ತೋರಿಸಿ ಕರೆದುಕೊಂಡು ಹೋಗಿದ್ದಾರೆ.

ಸಾಂಬಾರ್ ಪಾತ್ರೆಗೆ ಬಿದ್ದಿದ್ದ ಬಾಲಕಿ ಸಾವು!

ಕಲಬುರಗಿ: ಬಿಸಿಯೂಟದ ಸಾಂಬಾರ್ ಪಾತ್ರೆಯಲ್ಲಿ ಬಿದ್ದು ಗಂಭೀರ ಗಾಯಗೊಂಡಿದ್ದ ಅಫಜಲಪುರ ತಾಲೂಕು ಚಿಮಣಗೇರಾ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿನಿ ಚಿಕಿತ್ಸೆ ಫಲಸದೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಭಾನುವಾರ ಕೊನೆಯುಸಿರೆಳೆದಿದ್ದಾಳೆ. 2ನೇ ತರಗತಿ ಓದುತ್ತಿದ್ದ ಮಹಾಂತಮ್ಮ (8) ನ.16ರಂದು ಶಾಲೆಯಲ್ಲಿ ಮಧ್ಯಾಹ್ನ ಬಿಸಿಯೂಟ ಸೇವಿಸಲು ಸರದಿ ನಿಂತಾಗ ಮಕ್ಕಳ ತಳ್ಳಾಟದಲ್ಲಿ ಆಯತಪ್ಪಿ ಸಾಂಬಾರ್ ಪಾತ್ರೆಯಲ್ಲಿ ಬಿದ್ದಿದ್ದಳು. ಗಂಭೀರ ಗಾಯಗೊಂಡಿದ್ದ ಆಕೆಯನ್ನು ಶನಿವಾರ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಸ್ಕಾಂ ನಿರ್ಲಕ್ಷಕ್ಕೆ ಇಬ್ಬರ ಸಾವು

ಬೆಸ್ಕಾಂ ನಿರ್ಲಕ್ಷ್ಯಕ್ಕೆ ವಿದ್ಯುತ್‌ ತಂತಿ ತುಳಿದು ತಾಯಿ, ಮಗಳು ಸಜೀವ ದಹನವಾದ ಘಟನೆ ಬೆಂಗಳೂರಿನ ವೈಟ್‌ಫೀಲ್ಡ್‌ ಕಾಡುಗೋಡಿಯಲ್ಲಿ ನಡೆದಿತ್ತು. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹ ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಯಿತು. ಕೊನೆಗೆ ಪೊಲೀಸರ ಮಧ್ಯಪ್ರವೇಶದಿಂದ ಎರಡೂ ಕುಟುಂಬದವರು ಮೃತದೇಹವನ್ನು ದೇವನಗುಂದಿ ಬಳಿ ಸ್ಮಶಾನಕ್ಕೆ ಕೊಂಡೊಯ್ದಿದ್ದಾರೆ. ಜೊತೆಗೆ ಪೊಲೀಸರು ತೆರಳಿದ್ದಾರೆ. ಇನ್ನೂ ಈ ಪ್ರಕರಣಕ್ಕೆ ಸಂಬಂಧ ಬೆಸ್ಕಾಂ ಅಧಿಕಾರಿಗಳನ್ನ ವಶಕ್ಕೆ ಪಡೆಯಲಾಗಿತ್ತು. ಆದ್ರೆ ಐವರು ಆರೋಪಿಗಳು ಭಾನುವಾರ ರಾತ್ರಿ ಸುಮಾರು 1 ಗಂಟೆಗೆ ಸ್ಟೇಷನ್ ಬೇಲ್ ಮೇಲೆ ಬಿಡುಗಡೆಯಾಗಿದ್ದಾರೆ. ಇದಕ್ಕೆ ಮೃತರ ಸಂಬಂಧಿಕರು ವಿರೋಧ ವ್ಯಕ್ತಪಡಿಸಿದ್ದಾರೆ.

ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ: ಅರೆಸ್ಟ್

ಮಡಿಕೇರಿ : ಕರ್ತವ್ಯ ನಿರತ ಪೊಲೀಸ್‌ ಸಿಬ್ಬಂದಿ ಮೇಲೆ ವ್ಯಕ್ತಿಯೊಬ್ಬರು ಹೆಲ್ಕೆಟ್ ನಿಂದ ಹಲ್ಲೆ ಮಾಡಿರುವ ಘಟನೆ ಸಿದ್ದಾಪುರ ಬಸ್‌ ನಿಲ್ದಾಣದಲ್ಲಿ ವರದಿಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸಿ.ಎ.ಗಣಪತಿ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪೊಲೀಸ್‌ ಸಿಬ್ಬಂದಿ ಸಂತೋಷ್ ಚೌಹಾನ ಎಂಬುವವರು ಹಲ್ಲೆಗೊಳಗಾಗಿದ್ದು, ಸಿದ್ದಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸ್‌ ಸಿಬ್ಬಂದಿ ಸಂತೋಷ್ ಚೌಹಾನ ಎಂಬುವವರು ಹಲ್ಲೆಗೊಳಗಾಗಿದ್ದು, ಸಿದ್ದಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.