– ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್:
ಓಪಿಎಸ್ ಜಾರಿ?
– ಕರಾವಳಿ ಭಾಗದಲ್ಲಿ ಮತ್ತೆ ಮಳೆ!?
– ಹಾರಲಿದೆ ಪ್ರತಿ ಮನೆಯಲ್ಲೂ ತ್ರಿವರ್ಣ ಧ್ವಜ
NAMMUR EXPRESS NEWS : ರಾಜ್ಯದಲ್ಲಿ ಎನ್ಪಿಎಸ್ ರದ್ದತಿ ಕೋರಿ ಹಲವು ವರ್ಷಗಳಿಂದಲೂ ರಾಜ್ಯ ಸರಕಾರಿ ನೌಕರರು ಹೋರಾಟ ನಡೆಸುತ್ತಿದ್ದಾರೆ. ಆದರೆ ರಾಜ್ಯ ಸರಕಾರ ವಿಧಾನಸಭಾ ಕಲಾಪದಲ್ಲಿ ಹೊಸ ಪಿಂಚಣಿ ವ್ಯವಸ್ಥೆಯನ್ನು ರದ್ದುಗೊಳಿಸಿ, ಹಳೆ ಪಿಂಚಣಿ ವ್ಯವಸ್ಥೆ ಜಾರಿ ಮಾಡುವ ಯಾವುದೇ ಪ್ರಸ್ತಾಪ ಇಲ್ಲ ಎಂದು ಹೇಳಿತ್ತು. ಇದೀಗ ಓಪಿಎಸ್ ಜಾರಿ ಕುರಿತ ಕಡತಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಆರ್ಥಿಕ ಇಲಾಖೆ ಮಾಹಿತಿ ನೀಡಿದೆ.
ಎನ್ಪಿಎಸ್ ರದ್ದತಿ ಕೋರಿ ಹಲವು ಮನವಿಗಳು ಸ್ವೀಕೃತವಾಗಿದ್ದು ಪರಿಶೀಲನೆ ನಡೆಸಲಾಗುತ್ತಿದೆ ಎಂದು ಆರ್ಥಿಕ ಇಲಾಖೆ ಮಾಹಿತಿ ಹಕ್ಕು ಅಧಿನಿಯಮದ ಅಡಿಯಲ್ಲಿ ವೆಂಕಟಾಚಲಯ್ಯ ಅವರು ಸಲ್ಲಿಸಿದ್ದ ಅರ್ಜಿಗೆ ಮಾಹಿತಿಯನ್ನು ನೀಡಿದೆ.
ಕಾಂಗ್ರೆಸ್ ಸರಕಾರ ತಮ್ಮ ಚುನಾವಣಾ ಪ್ರನಾಳಿಕೆಯಲ್ಲಿ ಎನ್ಪಿಎಸ್ ರದ್ದು ಮಾಡುವುದಾಗಿ ಭರವಸೆ ನೀಡಿತ್ತು. ಇನ್ನು ಬಿಜೆಪಿ ಸರಕಾರ ಎನ್ಪಿಎಸ್ ರದ್ದು ಮಾಡುವ ಕುರಿತು ಸಮಿತಿಯೊಂದನ್ನು ರಚನೆ ಮಾಡಲಾಗಿತ್ತು.ಇದೀಗ ರಾಜ್ಯ ಸರಕಾರಿ ನೌಕರರು ಎನ್ಪಿಎಸ್ ರದ್ದತಿ ಕೋರಿ ರಾಜ್ಯ ಸರಕಾರಕ್ಕೆ ಸಾಕಷ್ಟು ಮನವಿಯನ್ನು ಮಾಡಿದ್ದಾರೆ. ರಾಜ್ಯ ಸರಕಾರ ಕೂಡ ಶೀಘ್ರದಲ್ಲಿಯೇ ಈ ಕುರಿತು ಚಿಂತನೆ ನಡೆಸಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಕರಾವಳಿ ಜಿಲ್ಲೆಗಳಲ್ಲಿ ಆ.16ರವರೆಗೂ ಮಳೆ
ಕರಾವಳಿ ಜಿಲ್ಲೆಗಳಲ್ಲಿ ಮಳೆ ಚುರುಕುಗೊಂಡಿದೆ. ಹವಾಮಾನ ಇಲಾಖೆ ವರದಿ ಪ್ರಕಾರ, ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡು ಸೇರಿದಂತೆ ಹಲವಡೆ ಆಗಸ್ಟ್ 16ರವರೆಗೂ ಮಳೆಯಾಗಲಿದೆ. ರಾಜ್ಯದ ಕರಾವಳಿ ಹಲವು ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳಲ್ಲಿ, ಒಳನಾಡಿನ ಕೆಲವಡೆ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಾದ್ಯಂತ ಒಂಡೆರಡು ಕಡೆಗಳಲ್ಲಿ ಬಿರುಗಾಳಿಯ ವೇಗವು ಗಂಟೆಗೆ 30 ರಿಂದ 40 ಕಿ.ಮೀ ಬೀಡುವ ಸಾಧ್ಯತೆ ಇದೆ. ಹೀಗಾಗಿ ಕರಾವಳಿ ಪ್ರದೇಶಗಳಲ್ಲಿ ವಾಸಿಸುವ ಸ್ಥಳೀಯರು, ಪ್ರವಾಸಿಗರು ಹಾಗೂ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅಲ್ಲಿಲ್ಲಿ ಮೋಡ ಚದುರಿದಂತೆ ಉತ್ತಮ ಮಳೆಯಾಗಲಿದೆ.
ಹರ್ ಘರ್ ತಿರಂಗ ಪ್ರತಿ ಮನೆಯಲ್ಲೂ ತ್ರಿವರ್ಣ ಧ್ವಜ
ಭಾರತೀಯ ಅಂಚೆ ಇಲಾಖೆಯು ಕಳೆದ ಸಾಲಿನಂತೆ ಈ ವರ್ಷವು ಸಹ ತ್ರಿವರ್ಣ ಧ್ವಜವನ್ನು ನಿಮ್ಮ ಮನೆ ಬಾಗಿಲಿಗೆ ತಲುಪಿಸುವ ಮಹತ್ವದ ಕಾರ್ಯವನ್ನು ಮಾಡಲಿದೆ.2023 ನೇ ವರ್ಷದ ಸ್ವಾತಂತ್ರ್ಯ ದಿನವನ್ನು ಹೆಮ್ಮೆ ಮತ್ತು ದೇಶಭಕ್ತಿಯೊಂದಿಗೆ ಆಚರಿಸಲು ನಿಮ್ಮ ಸಮೀಪದ ಅಂಚೆ ಕಚೇರಿಯಲ್ಲಿ ಕೇವಲ ರೂ.25/- ಪಾವತಿಸಿ ತ್ರಿವರ್ಣ ಧ್ವಜ ಪಡೆದುಕೊಳ್ಳಬಹುದು. ಆನ್ಲೈನ್ www.indiapost.gov.in ರಲ್ಲಿ ನೊಂದಣಿ ಮಾಡು ವುದರ ಮೂಲಕ ಮನೆ ಬಾಗಿಲಿನಲ್ಲಿಯೇ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಮೀಪದ ಅಂಚೆ ಕಚೇರಿಯನ್ನು ಸಂಪರ್ಕಿಸುವಂತೆ ಇಲಾಖೆ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ : ಜಲಪಾತ ಸಿನಿಮಾಕ್ಕೆ ವಿಜಯಪ್ರಕಾಶ್ ಎಂಟ್ರಿ!
HOW TO APPLY : NEET-UG COUNSELLING 2023