ಟಾಪ್ ನ್ಯೂಸ್ ಕರ್ನಾಟಕ
– ಜೈಲಲ್ಲಿ ಪವಿತ್ರಾ ಗೌಡಗೆ ಲಿಪ್ ಸ್ಟಿಕ್ , ಮೇಕಪ್ ಅವಕಾಶ: ಮಹಿಳಾ ಪೊಲೀಸ್ ಅಧಿಕಾರಿಗೆ ನೋಟಿಸ್
– ಸೂರಜ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಆಪ್ತನಿಂದಲೇ ದೂರು
– ಜೈ ಹಿಂದ್ ಹೇಳದ ಓ ವೈ ಸಿ ವಿರುದ್ಧ ದೂರು ದಾಖಲಿಸಿದ ಶೋಭ ಕರಂದ್ಲಾಜೆ!
NAMMUR EXPRESS NEWS
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ಪವಿತ್ರಾ ಗೌಡ ಪೊಲೀಸ್ ವಶದಲ್ಲಿದ್ದ ವೇಳೆ, ಆಕೆಗೆ ಮೇಕಪ್ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ ಎಂಬ ಆರೋಪ ಕೇಳಿ ಬಂದಿದ್ದು, ಆಕೆಯ ಭದ್ರತಾ ಉಸ್ತುವಾರಿ ಹೊತ್ತಿದ್ದ ಮಹಿಳಾ ಪೊಲೀಸರಿಗೆ ಇದೀಗ ಸಂಕಷ್ಟ ಎದುರಾಗಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಆಪ್ತ ಪವಿತ್ರಾ ಗೌಡ ಸುಮಾರು 10 ದಿನಗಳ ಕಾಲ ಪೊಲೀಸ್ ವಶದಲ್ಲಿದ್ದಳು. ಈ ಸಂದರ್ಭ ಆಕೆಗೆ ಸೌಂದರ್ಯವರ್ಧಕಗಳನ್ನು ಬಳಸಿ ಮೇಕಪ್ ಮಾಡಿಕೊಳ್ಳಲು ಅವಕಾಶ ನೀಡಿದ್ದಾರೆ ಎನ್ನುವುದು ಕೇಳಿ ಬರುತ್ತಿರುವ ಆರೋಪ. ಪೊಲೀಸರು ಪವಿತ್ರಾಗೌಡಳನ್ನು ತನಿಖೆ ಸಲುವಾಗಿ 10 ದಿನ ಕಸ್ಟಡಿಗೆ ಪಡೆದಿದ್ದರು. ಆ ವೇಳೆ ಆಕೆ ತುಟಿಗಳಿಗೆ ಲಿಪ್ಪಿಕ್ ಹಾಕಿಕೊಂಡು ಮೇಕಪ್ ಮಾಡಿಕೊಂಡಿದ್ದಳು. ಪವಿತ್ರಾ ತುಟಿಗಳಿಗೆ ಲಿಪ್ ಸ್ಟಿಕ್ ಹಾಕಿಕೊಂಡಿದ್ದ ದೃಶ್ಯಗಳು ಮಾಧ್ಯಮಗಳಲ್ಲಿ ವಿಸ್ತಾರವಾಗಿದ್ದವು. ಈ ಹಿನ್ನಲೆಯಲ್ಲಿ ಪವಿತ್ರಾ ಗೌಡಳ ಭದ್ರತಾ ಉಸ್ತುವಾರಿ ಹೊತ್ತಿದ್ದ ವಿಜಯನಗರ ಪೊಲೀಸ್ ಠಾಣೆಯ ಮಹಿಳಾ ಸಬ್ ಇನ್ಸ್ ಪೆಕ್ಟರ್ ಅವರಿಗೆ ಈ ಸಂಬಂಧ ವಿವರಣೆ ಕೇಳಿ ಪಶ್ಚಿಮ ವಿಭಾಗದ ಡಿಸಿಪಿ ಎಸ್. ಗಿರೀಶ್ ಮೆಮೋ ಕೊಟ್ಟಿದ್ದಾರೆ. ಈ ವರದಿಗಳನ್ನು ಗಂಭೀರವಾಗಿ ಪರಿಗಣಿಸಿದ ಡಿಸಿಪಿ ಗಿರೀಶ್ ಅವರು ಕಸ್ಟಡಿಯಲ್ಲಿದ್ದಾಗ ಕೊಲೆ ಪ್ರಕರಣದ ಆರೋಪಿಗೆ ಲಿಪ್ಪಿಕ್ ಸೇರಿ ಸೌಂದರ್ಯವರ್ಧಕ ಬಳಸಲು ಅವಕಾಶ ಕೊಟ್ಟಿದ್ದು ಹೇಗೆ ಎಂಬ ಕುರಿತು ವಿವರಣೆ ನೀಡುವಂತೆ ಪಿಎಸ್ಐಗೆ ಮೆಮೋ ಕೊಟ್ಟಿದ್ದಾರೆ. ಆದರೆ ಇದುವರೆಗೆ ಮೆಮೋಗೆ ಪಿಎಸ್ಐ ಉತ್ತರ ಕೊಟ್ಟಿಲ್ಲ ಎಂದು ತಿಳಿದು ಬಂದಿದೆ.
ಸೂರಜ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಆಪ್ತನಿಂದಲೇ ದೂರು
ಹಾಸನ: ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ವಿರುದ್ಧ ಮತ್ತೊಂದು ಸಲಿಂಗ ಕಾಮ ದೌರ್ಜನ್ಯದ ದೂರು ದಾಖಲಾಗಿದೆ. ಈ ಮೂಲಕ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ.
4 ದಿನಗಳ ಹಿಂದೆಯಷ್ಟೇ ಸೂರಜ್ ಪರವಾಗಿ ದೂರು ನೀಡಿದ್ದ ಶಿವಕುಮಾರ್ ಉಲ್ಟಾ ಹೊಡೆದಿದ್ದು, ಮೂರು ವರ್ಷದ ಹಿಂದೆ ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಹೊಳೆನರಸೀಪುರ ಠಾಣೆಗೆ ದೂರು ನೀಡಿದ್ದಾರೆ.
ಜೂನ್ 21ರಂದು ಸೂರಜ್ ರೇವಣ್ಣ ಪರವಾಗಿ ದೂರು ನೀಡಿದ್ದ ಆಪ್ತ ಶಿವಕುಮಾರ್ ನಾಪತ್ತೆಯಾಗಿದ್ದರು. ಇದೀಗ ಉಲ್ಟಾ ಹೊಡೆದಿದ್ದು ಮೂರು ವರ್ಷಗಳ ಹಿಂದೆ ತನ್ನ ಮೇಲೆಯೂ ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದಾರೆ. ಈ ಮೂಲಕ ಸೂರಜ್ ರೇವಣ್ಣಗೆ ಮತ್ತೆ ಸಂಕಷ್ಟ ಎದುರಾಗಿದೆ.
– ಜೈ ಹಿಂದ್ ಹೇಳದ ಓ ವೈ ಸಿ ವಿರುದ್ಧ ದೂರು ದಾಖಲಿಸಿದ ಶೋಭ ಕರಂದ್ಲಾಜೆ
NAMMUR EXPRESS NEWS
ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಅವರು ಮಂಗಳವಾರ ಸಂಸತ್ತಿನಲ್ಲಿ 18ನೇ ಲೋಕಸಭೆಯ ಅಧಿವೇಶನದ ಎರಡನೇ ದಿನದಂದು ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ‘ಜೈ ಪ್ಯಾಲೆಸ್ತೀನ್’ ಘೋಷಣೆ ಕೂಗುವ ಮೂಲಕ ವಿವಾದವನ್ನು ಹುಟ್ಟುಹಾಕಿದರು. ಅವರ ಮಾತುಗಳು ಬಿಜೆಪಿಯ ಕೋಪಕ್ಕೆ ಕಾರಣವಾಗಿದ್ದು, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ವಿರುದ್ಧ ಔಪಚಾರಿಕ ದೂರು ದಾಖಲಿಸಿದ್ದಾರೆ. ಒವೈಸಿಯ ಭಾಷಣವನ್ನು ಸಂಸತ್ತಿನ ದಾಖಲೆಯಿಂದ ತೆಗೆದುಹಾಕುವಂತೆ ಸ್ಪೀಕರ್ ಮತ್ತು ಗೃಹ ಸಚಿವರಿಗೆ ಪತ್ರ ಬರೆದು ಕರಂದ್ಲಾಜೆ ಅವರು ಓವೈಸಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿದರು. ಘೋಷವಾಕ್ಯವಿಲ್ಲದೆ ಮತ್ತೊಮ್ಮೆ ಪ್ರಮಾಣ ವಚನ ಸ್ವೀಕರಿಸಬೇಕು ಎಂದು ಒತ್ತಾಯಿಸಿದರು.