ಗ್ಯಾಸ್ ಸಿಲಿಂಡರ್ ಸ್ಫೋಟಕ್ಕೆ ಅಪ್ಪ ಮಗ ಬಲಿ!
– ಬೆಂಗಳೂರಲ್ಲಿ ನಡೆದ ಘಟನೆ ಗ್ಯಾಸ್ ಬಗ್ಗೆ ಹುಷಾರ್
– ಮೂಡಿಗೆರೆ:ವಿದ್ಯಾರ್ಥಿನಿ ಶವ ಬಾವಿಯಲ್ಲಿ ಪತ್ತೆ!
– ಕಾಲೇಜು ವಿದ್ಯಾರ್ಥಿನಿ ನಾಲ್ಕು ದಿನಗಳ ಹಿಂದೆ ನಾಪತ್ತೆ
– ಕುವೆಂಪು ವಿವಿ ವೆಬ್ ಹ್ಯಾಕ್: ಪ್ಯಾಲಿಸ್ತೀನ್ ಪರ ದುಷ್ಕರ್ಮಿಗಳ ಕೃತ್ಯ
NAMMUR EXPRESS NEWS
ಬೆಂಗಳೂರು: ಬೆಂಗಳೂರಿನ ಬೇಗೂರು ಬಳಿಯ ಲಕ್ಷ್ಮಿ ಬಡಾವಣೆಯಲ್ಲಿ ಅಡುಗೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಐವರಿಗೆ ಗಾಯವಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಗಾಯಗೊಂಡಿದ್ದ ಮಗು, ತಂದೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಎರಡೂವರೆ ವರ್ಷದ ಮಗು ರೋಹನ್ ಮತ್ತು ತಂದೆ ಸಂದೇಶ್(30) ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಉಳಿದ ಮೂವರು ಗಾಯಾಳುಗಳಿಗೆ ಚಿಕಿತ್ಸೆ ಮುಂದುವರಿದಿದೆ. ಸಿಲಿಂಡರ್ ಸ್ಫೋಟದಿಂದ ಗಾಯಗೊಂಡಿದ್ದ ಮಗು- ತಂದೆಯನ್ನು ಮೊದಲು ಸೆಂಟ್ ಜೋಸೆಫ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೆ ಇಬ್ಬರೂ ಪ್ರಾಣಬಿಟ್ಟಿದ್ದಾರೆ. ಉಳಿದ ಮೂವರು ಗಾಯಾಳುಗಳಿಗೆ ಚಿಕಿತ್ಸೆ ಮುಂದುವರೆದಿದೆ.
ಕುವೆಂಪು ವಿವಿ ವೆಬ್ ಹ್ಯಾಕ್: ಪ್ಯಾಲಿಸ್ತೀನ್ ಪರ ದುಷ್ಕರ್ಮಿಗಳ ಕೃತ್ಯ
ಶಿವಮೊಗ್ಗ: ಮಲೆನಾಡಿನ ಪ್ರತಿಷ್ಠಿತ ಕುವೆಂಪು ವಿಶ್ವ ವಿದ್ಯಾಲಯದ ಅಧಿಕೃತ ವೆಬ್ ಸೈಟ್ ಅನ್ನು ಹ್ಯಾಕ್ ಮಾಡಿ ವೆಬ್ಅದರಲ್ಲಿ ಪ್ಯಾಲಸ್ತೀನ್ ಪರ ಬರಹಗಳನ್ನು ಪ್ರಕಟ ಮಾಡಿದ್ದಾರೆ. ದುಷ್ಕರ್ಮಿಗಳು ವಿವರಣೆಯಲ್ಲಿ ಸೇವ್ ಪ್ಯಾಲಸ್ತೀನ್ ಎಂದು ಬರೆದಿದ್ದು, ಬುಧವಾರ ರಾತ್ರಿ ಹ್ಯಾಕ್ ಆಗಿರುವುದಾಗಿ ತಿಳಿದು ಬಂದಿದೆ 2018ರ ಮೇ ತಿಂಗಳಲ್ಲಿ ವಿವಿ ವೆಬ್ಸೈಟ್ ಹ್ಯಾಕ್ ಮಾಡಲಾಗಿತ್ತು. ಅಲ್ಲದೆ ವೆಬ್ ಸೈಟ್ನ ಹೋಮ್ ಪೇಜ್ನಲ್ಲಿ ಪಾಕಿಸ್ತಾನ ಪರವಾಗಿ ಘೋಷಣೆಗಳನ್ನು ಪ್ರಕಟಿಸಲಾಗಿತ್ತು. ಈಗ ಮತ್ತೊಮ್ಮೆ ಹ್ಯಾಕ್ ಆಗಿದೆ. https://www.kuvempu.ac.in ವಿಳಾಸ ಹೊಂದಿರುವ ವೆಬ್ ಸೈಟ್ ಹ್ಯಾಕ್ ಮಾಡಲಾಗಿದೆ ಎಂದು ಶಿವಮೊಗ್ಗ ಸಿಇಎನ್ ಠಾಣೆ ಪೊಲಿಸರಿಗೆ ಮೌಖಿಕವಾಗಿ ಮಾಹಿತಿ ನೀಡಿದ ಕುವೆಂಪು ವಿವಿ ಆಡಳಿತಾಧಿಕಾರಿಗಳು ಕೂಡಲೇ ಮಧ್ಯ ಪ್ರವೇಶಿಸಿ ತಾಂತ್ರಿಕ ನೆರವನ್ನು ನೀಡಿ ಸಮಸ್ಯೆಯನ್ನು ಬಗೆಹರಿಸಿಕೊಡುವಂತೆ ಕೇಳಿಕೊಳ್ಳಲಾಗಿತ್ತು ಎಂದು ತಿಳಿದು ಬಂದಿದೆ.
ಮೂಡಿಗೆರೆ:ವಿದ್ಯಾರ್ಥಿನಿ ಶವ ಬಾವಿಯಲ್ಲಿ ಪತ್ತೆ!
ಮೂಡಿಗೆರೆ: ನಾಲ್ಕು ದಿನಗಳ ಹಿಂದೆ ಕಾಣೆಯಾಗಿದ್ದ ಕಾಲೇಜು ವಿದ್ಯಾರ್ಥಿನಿ ಶವವಾಗಿ ಪತ್ತೆಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಗೋಣಿಬೀಡು ಠಾಣೆ ವ್ಯಾಪ್ತಿಯ ಜಿ.ಹೊಸಳ್ಳಿ ಗ್ರಾಮದಲ್ಲಿ ನಡೆದಿದೆ. ಸೃಷ್ಟಿ (19) ಹಾಸನದ ವುಮೆನ್ಸ್ ಕಾಲೇಜಿನಲ್ಲಿ ಪ್ರಥಮ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದು ಹಾಸ್ಟೆಲ್ ನಿಂದ ಕಾಲೇಜಿಗೆ ಹೋಗುತ್ತಿದ್ದರು ಎಂದು ತಿಳಿದು ಬಂದಿದೆ. ಕಳೆದ ವಾರ ಮನೆಗೆ ಬಂದಿದ್ದು, ಡಿಸೆಂಬರ್ 21ರ ಗುರುವಾರ ಸಂಜೆ ಇದ್ದಕ್ಕಿದ್ದಂತೆ ಮನೆಯಿಂದ ನಾಪತ್ತೆಯಾಗಿದ್ದಳು. ಸೃಷ್ಟಿಗಾಗಿ ಸುತ್ತಮುತ್ತಲ ಪ್ರದೇಶಗಳಲ್ಲಿ ತೀವ್ರ ಹುಡುಕಾಟ ನಡೆಸಲಾಗಿತ್ತು ಆದರೆ ಪತ್ತೆಯಾಗಿರಲಿಲ್ಲ.
ಭಾನುವಾರ ಮುಂಜಾನೆ ಗ್ರಾಮದ ಕುಡಿಯುವ ನೀರಿನ ಮೋಟರ್ ಅಳವಡಿಸಿರುವ ಬಾವಿಯಲ್ಲಿ ಯುವತಿಯ ಶವ ತೇಲುತ್ತಿರುವುದನ್ನು ವಾಟರ್ ಮ್ಯಾನ್ ಗಮನಿಸಿ ಮಾಹಿತಿ ನೀಡಿದ್ದಾರೆ. ಗೋಣಿಬೀಡು ಠಾಣೆಯಲ್ಲಿ ದೂರು ದಾಖಲಾಗಿದ್ದು ಶವವನ್ನು ಮೇಲೆತ್ತಲು ತಯಾರಿ ನಡೆಸಲಾಗಿದೆ. ಇನ್ನು ಸೃಷ್ಟಿ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.