ಮೈಸೂರಲ್ಲಿ ಕಾಡಾನೆ ದಾಳಿಗೆ ರೈತ ಬಲಿ
– ಹಾಸನದಲ್ಲಿ ಕಾರ್ಮಿಕರ ಮೇಲೆ ಆನೆ ದಾಳಿ
– ಹಾಸನ ಮೂಲದ ಮಹಿಳಾ ಕ್ರೀಡಾಪಟು ಆತ್ಮಹತ್ಯೆ
– ಪ್ರಸಿದ್ಧ ಐಸ್ ಕ್ರೀಮ್ ಉದ್ಯಮಿ ಸೊಸೆ ಸಾವು
– ರಾಜ್ಯದ ಇತರೆ ಕ್ರೈಂ ಸುದ್ದಿಗಳು
NAMMUR EXPRESS NEWS
ಮೈಸೂರು: ಜಮೀನಿನಲ್ಲಿ ಬೆಳೆ ಕಾವಲಿಗೆ ಹೋಗಿದ್ದ ರೈತನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ರೈತ ಜಮೀನಿನಲ್ಲೇ ಮೃತಪಟ್ಟ ಘಟನೆ ಮೈಸೂರು ಜಿಲ್ಲೆ ಎಚ್ಡಿ ಕೋಟೆ ತಾಲೂಕಿನ ಮಾಸ್ತಿಗುಡಿಯ ಪುನರ್ವಸತಿ ತಾಣದ ಬಳಿ ನಡೆದಿದೆ. ಆನೆ ದಾಳಿಗೆ ಮೃತಪಟ್ಟ ದುರ್ದೈವಿ ಎಚ್ಡಿ ಕೋಟೆ ತಾಲೂಕಿನ ಮಾಸ್ತಿಗುಡಿ ಗ್ರಾಮದ ರೈತ ವಸಂತ (35) ಎಂದು ಗುರುತಿಸಲಾಗಿದೆ. ಈತ ತನ್ನ ಜಮೀನಿನಲ್ಲಿ ಹಾಕಿದ್ದ ಮುಸುಕಿನ ಜೋಳವನ್ನು ಕಾಡು ಪ್ರಾಣಿಗಳಿಂದ ರಕ್ಷಣೆ ಮಾಡಲು ಕಾವಲಿಗೆ ಹೋಗಿದ್ದರು. ಈ ಸಂದರ್ಭದಲ್ಲಿ ಗುರುವಾರ ತಡರಾತ್ರಿ ಆಹಾರ ಅರಸಿ ನಾಗರಹೊಳೆ ಕಾಡಿನಿಂದ ಕಾಡಾನೆ ಬಂದಿದೆ. ಈ ಆನೆಯನ್ನು ಹಿಮ್ಮೆಟ್ಟಿಸಲು ಹೋದ ರೈತ ವಸಂತ್ ಮೇಲೆ ಕಾಡಾನೆ ದಾಳಿ ಮಾಡಿದೆ. ಪರಿಣಾಮ ರೈತ ವಸಂತ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಾಹಿತಿ ತಿಳಿದಾಕ್ಷಣ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ
ಹಾಸನದಲ್ಲಿ ಕಾರ್ಮಿಕರ ಮೇಲೆ ಕಾಡಾನೆ ದಾಳಿ.
ಬೇಲೂರು ತಾಲೂಕಿನ ಬಿಕ್ಕೋಡು ಹೋಬಳಿಯ ಅಂಕಿಹಳ್ಳಿಯ ಗಜೇಂದ್ರಪುರದ ಸಮೀಪ ಪಶ್ಚಿಮ ಬಂಗಾಳ ಮೂಲದ ಗಾರೆ ಕೆಲಸದ ಕಾರ್ಮಿಕನ ಮೇಲೆ ಕಾಡಾನೆ ದಾಳಿ ನಡೆಸಿರುವ ಘಟನೆ ಶುಕ್ರವಾರ ಸಂಜೆ ನಡೆದಿದೆ. ಪಶ್ಚಿಮ ಬಂಗಾಳ ಮೂಲದ ದೀಪಕ ರಾಯ್ ಗಾಯಗೊಂಡಿರುವ ಕಾರ್ಮಿಕನಾಗಿದ್ದು ಅವರಿಗೆ ಸಕಲೇಶಪುರ ಕ್ರಾಪರ್ಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗಾರೆ ಕೆಲಸ ಮುಗಿಸಿಕೊಂಡು ದಿನಸಿ ವಸ್ತು ಖರೀದಿಸಲು ಗ್ರಾಮದಲ್ಲಿದ್ದ ಅಂಗಡಿಗೆ ತೆರಳುತ್ತಿದ್ದ ವೇಳೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಕಾಡಾನೆ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿರುವ ಕಾರ್ಮಿಕನ ಸ್ಥಿತಿ ಚಿಂತಾಜನಕವಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಹಾಸನದ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ
ಡೈರಿ ರಿಚ್ ಐಸ್ ಕ್ರೀಂ ಉದ್ಯಮಿಯ ಸೊಸೆ ಆತ್ಮಹತ್ಯೆ
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಕನಕಮಜಲು ಮೂಲದ ಡೈರಿ ರಿಚ್ ಐಸ್ ಕ್ರೀಂನ ಉದ್ಯಮಿಯ ಸೊಸೆ ಬೆಂಗಳೂರಿನಲ್ಲಿ ಸಾವಿಗೆ ಶರಣಾದ ಘಟನೆ ನಡೆದಿದೆ. ಐಶ್ವರ್ಯ (23) ಎಂಬುವರು ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದು, ಆತ್ಮಹತ್ಯೆಗೆ ಕಾರಣವೇನೆಂದು ತಿಳಿದುಬಂದಿಲ್ಲ. ಬೆಂಗಳೂರಿನಲ್ಲಿ ಉದ್ಯಮಿಯಾಗಿರುವ ಕನಕಮಜಲು ಗ್ರಾಮದ ಗಿರಿಯಪ್ಪ ಗೌಡ ಅವರ ಪುತ್ರ ರಾಜೇಶ್ ಅವರನ್ನು ಐಶ್ವರ್ಯ ಮದುವೆ ಮಾಡಿಕೊಂಡಿದ್ದರು. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಐಶ್ವರ್ಯ ಮನೆಯಲ್ಲಿ ಯಾರು ಇಲ್ಲದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಐಶ್ವರ್ಯ ಅವರ ಮೃತದೇಹ ಸುಳ್ಯಕ್ಕೆ ಬರಲಿದ್ದು, ಕನಕಮಜಲಿನಲ್ಲಿ ಅಂತ್ಯಸಂಸ್ಕಾರ ನೆರವೇರಲಿದೆ ಎಂದು ತಿಳಿದು ಬಂದಿದೆ.
ಅಂತಾರಾಷ್ಟ್ರೀಯ ಮಹಿಳಾ ಕಬಡ್ಡಿ ಕ್ರೀಡಾಪಟು ನೇಣಿಗೆ
ಅಂತಾರಾಷ್ಟ್ರೀಯ ಮಹಿಳಾ ಕಬಡ್ಡಿ ಕ್ರೀಡಾಪಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರದ ನೆಲಮಂಗಲದ ಅರಿಶಿನಕುಂಟೆಯಲ್ಲಿ ವರದಿಯಾಗಿದೆ. ಅರಿಶಿನಕುಂಟೆಯ ಆದರ್ಶನಗರದ ಮನೆಯಲ್ಲಿ ಅಂತಾರಾಷ್ಟ್ರೀಯ ಕಬಡ್ಡಿ ಕ್ರೀಡಾಪಟು ಧನಲಕ್ಷ್ಮಿ(25) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎರಡು ದಿನಗಳ ಹಿಂದೆ ಸ್ನೇಹಿತರೊಂದಿಗೆ ಮೈಸೂರು ದಸರಾ ನೋಡಿಕೊಂಡು ಬಂದಿದ್ದ ಧನಲಕ್ಷ್ಮೀ, ತಂದೆ ಹಾಗೂ ತಮ್ಮ ಮನೆಯಲ್ಲಿರುವಾಗಲೇ ರೂಮ್ನಲ್ಲಿ ನೇಣು ಬಿಗಿದುಕೊಂಡಿದ್ದು, ಅನುಮಾನಗೊಂಡ ತಂದೆ ರೂಮ್ಗೆ ಹೋಗಿ ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಮೂಲತಃ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಕೆ.ತಿಮ್ಮಲಾಪುರದ ಧನಲಕ್ಷ್ಮೀ ಕುಟುಂಬ 5 ವರ್ಷದಿಂದ ನೆಲಮಂಗಲದ ಅರಿಶಿನಕುಂಟೆಯ ಆದರ್ಶನಗರದಲ್ಲಿ ಬಾಡಿಗೆಗೆ ಮಾಡಿಕೊಂಡು ವಾಸವಿದ್ದರು. ಅಂತಾರಾಷ್ಟ್ರೀಯ ಮಟ್ಟದಲ್ಲಿ 3 ಬಾರಿ ಕಬ್ಬಡಿ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಧನಲಕ್ಷ್ಮಿ ಕಾಡುಗೋಡಿ ಖಾಸಗಿ ಕಂಪೆನಿಯಲ್ಲಿ ಉದ್ಯೋಗಿಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಹಾಸ್ಟೆಲ್ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು.!
ಗೃಹ ಸಚಿವ ಡಾ. ಜಿ. ಪರಮೇಶ್ವರ್ ಒಡೆತನದ ತುಮಕೂರಿನ ಸಿದ್ದಾರ್ಥ ಇಂಜಿನಿಯರ್ ಕಾಲೇಜಿನ ಹಾಸ್ಟೆಲ್ ಕೊಠಡಿಯಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿನಿ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಚಿತ್ರದುರ್ಗದ ಹೊಳಲ್ಕೆರೆ ತಾಲ್ಲೂಕಿನ ಶಿವಪುರ ಗ್ರಾಮದ ನಿವಾಸಿ ಬನಸಿರಿ (20) ಎಂಬ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈಕೆ ತುಮಕೂರಿನ ಸಿದ್ದಾರ್ಥ ಇಂಜಿನಿಯರಿಂಗ್ ಕಾಲೇಜಿನಲ್ಲಿ ದ್ವಿತೀಯ ವರ್ಷದ ತೃತೀಯ ಸೆಮಿಸ್ಟರ್ ಟೆಲಿಕಾಂ ಇಂಜಿನಿಯರಿಂಗ್ ಓದುತ್ತಿದ್ದಳು ಎಂದು ತಿಳಿದುಬಂದಿದೆ. ಬನಸಿರಿ ಕಾಲೇಜಿನ ಆವರಣದಲ್ಲಿರುವ ಹುಡುಗಿಯರ ಹಾಸ್ಟೆಲ್ನಲ್ಲಿ ಉಳಿದುಕೊಂಡಿದ್ದಳು. ಊಟ ಮುಗಿಸಿಕೊಂಡು ಬಂದ ಬಳಿಕ ಆಕೆ ನೇಣಿಗೆ ಕೊರಳೊಡ್ಡಿದ್ದಾಳೆ. ಆತ್ಮಹತ್ಯೆಗೆ ಕಾರಣ ಏನು ಎಂಬುದು ಇನ್ನೂ ತಿಳಿದು ಬಂದಿಲ್ಲ.
ಡಿವೋರ್ಸ್ಗಾಗಿ ಇನ್ಸಾಗ್ರಾಮ್ನಲ್ಲಿ ಪತ್ನಿಯ ಫೋಟೊ ಅಪ್ಲೋಡ್ ಖಾಸಗಿ ಮಾಡಿದ ಇನ್ಸ್ಪೆಕ್ಟರ್
ಸ್ವಂತ ಪತಿಯೇ ಪತ್ನಿಯ ಹೆಸರಲ್ಲಿ ನಕಲಿ ಇನ್ನಾ ಗ್ರಾಮ್ ಖಾತೆ ತೆಗೆದು ಅದರಲ್ಲಿ ಅವಳ ಖಾಸಗಿ ಫೋಟೊ ಅಪ್ಲೋಡ್ ಮಾಡಿರುವ ಆರೋಪದ ಮೇರೆಗೆ ದೂರು ದಾಖಲಾಗಿದೆ. ಶರವಣ್ ಕುಮಾರ್ ಎಂಬುವವರು ತಮ್ಮ ಪತ್ನಿ ಗರೀಮಾ ಕುಮಾರಿ ಅವರ ಹೆಸರಲ್ಲಿ ನಕಲಿ ಇನ್ಸಾಗ್ರಾಮ್ ಖಾತೆ ತೆಗೆದು ಅದರಲ್ಲಿ ಗರೀಮಾ ಕುಮಾರಿ ಅವರ ಖಾಸಗಿ ಫೋಟೋಗಳನ್ನು ಅಫ್ ಲೋಡ್ ಮಾಡಿದ್ದಾರೆ ಎಂದು ಶರವಣ್ ಕುಮಾರ್ ವಿರುದ್ಧ ಪತ್ನಿ ಗರೀಮಾ ಕುಮಾರಿ ದೂರು ನೀಡಿದ್ದಾರೆ. ದೆಹಲಿಯ ಇಂಟಲಿಜೆನ್ಸ್ ಬ್ಯೂರೊದಲ್ಲಿ ಇನ್ಸ್ಪೆಕ್ಟರ್ ಆಗಿ ಶರವಣ್ ಕುಮಾರ್ ಸೇವೆ ಸಲ್ಲಿಸುತ್ತಿದ್ದಾರೆ. ಶರವಣ್ ವಿರುದ್ಧ ಅವರ ಪತ್ನಿ ಗರೀಮಾ ಕುಮಾರಿ ತಮ್ಮ ಹೆಸರಿನಲ್ಲಿ ನಕಲು ಖಾತೆ ತೆರೆದು ವೈಯಕ್ತಿಕ ಫೋಟೊ, ವಿಡಿಯೊಗಳನ್ನು ಪೋಸ್ಟ್ ಮಾಡಿ ಕಿರುಕುಳ ನೀಡುತ್ತಿದ್ದಾರೆ ದೂರು ನೀಡಿದ್ದು, ಈ ಸಂಬಂಧ ಎಫ್ಐಆರ್ ದಾಖಲಾಗಿದೆ.
ಪ್ರಭಾವಿ ನಾಯಕನ ಪುತ್ರನ ಕೊರಳಲ್ಲಿ ಹುಲಿ ಉಗುರು
ಹುಲಿ ಉಗುರು ಧರಿಸಿರುವ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಲೇ ಇವೆ. ಇದೀಗ ಬೆಳಗಾವಿ ಜಿಲ್ಲೆಯಲ್ಲಿ ಸಚಿವೆ ಹೆಬ್ಬಾಳ್ಕರ್ ನಂತರ ಮತ್ತೊಬ್ಬ ಜಿಲ್ಲೆಯ ಪ್ರಭಾವಿ ನಾಯಕ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಪುತ್ರ ಹುಲಿ ಉಗುರಿನ ಪೆಂಡೆಂಟ್ ಧರಿಸಿರುವ ಫೋಟೋ ಈಗ ಬಾರಿ ಸದ್ದು ಮಾಡುತ್ತಿದೆ. ಅಥಣಿ ಶಾಸಕ ಲಕ್ಷ್ಮಣ ಸವದಿ ಅವರ ಪುತ್ರ ಸುಮಿತ್ ತನ್ನ ಮದುವೆಯಲ್ಲಿ ಹುಲಿ ಉಗುರಿನ ಪೆಂಡೆಂಟ್ ಧರಿಸಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.