Categories
ರಾಜ್ಯ

ಟಾಪ್ 3 ನ್ಯೂಸ್ ಕರ್ನಾಟಕ

15 ಟನ್ ಅಕ್ರಮ ಗೋಮಾಂಸ ಸಾಗಣೆ ಕಾರಿಗೆ ಬೆಂಕಿ!
– ಕಾರಿಗೆ ಬೆಂಕಿ ಹಚ್ಚಿದ ಶ್ರೀರಾಮಸೇನೆ ಕಾರ್ಯಕರ್ತರು
– ದೇವನಹಳ್ಳಿಯಲ್ಲಿ ಘಟನೆ: ಭಾರೀ ಬಂದೋಬಸ್ತ್
– ಚಿಕ್ಕಮಗಳೂರಲ್ಲಿ ಗಣೇಶ ವಿಸರ್ಜನೆ ವೇಳೆ ಸಾವು
– ಕೋಲಾರದಲ್ಲಿ ಡಾನ್ಸ್ ಮಾಡಬೇಡ ಎಂದಿದಕ್ಕೆ ಯುವತಿ ಆತ್ಮಹತ್ಯೆ!

NAMMUR EXPRESS NEWS
ದೇವನಹಳ್ಳಿ: ಅಕ್ರಮವಾಗಿ 15 ಟನ್ ಗೋಮಾಂಸ ಸಾಗಿಸಲಾಗುತ್ತಿತ್ತೆನ್ನಲಾದ ನಾಲ್ಕು ಗೂಡ್ಸ್ ವಾಹನಗಳನ್ನು ಶ್ರೀರಾಮಸೇನೆ ಕಾರ್ಯಕರ್ತರು ತಡೆದ ಘಟನೆ ನಡೆದಿದ್ದು, ಈ ವೇಳೆ ಗೋಮಾಂಸ ಸಾಗಾಟಗಾರರು ಶ್ರೀರಾಮ ಸೇನೆ ಕಾರ್ಯಕರ್ತರ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ ಎಂದು ಆರೋಪಿಸಿ ಗೋಮಾಂಸ ಸಾಗಾಟ ಮಾಡುತ್ತಿದ್ದವರ ಕಾರಿಗೆ ಬೆಂಕಿ ಹಚ್ಚಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ ಐಬಿ ವೃತ್ತದಲ್ಲಿ ನಡೆದಿದೆ.
ಕಾರಿಗೆ ಬೆಂಕಿ ಹಚ್ಚಿದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ. ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದೇ ವೇಳೆ ಗೂಡ್ಸ್
ವಾಹನಗಳಲ್ಲಿದ್ದ ಗೋಮಾಂಸವನ್ನು ವಶಕ್ಕೆ ಪಡೆದಿದ್ದಾರೆ.

ಕಾರಿಗೆ ಬೆಂಕಿ ಹಚ್ಚಿದರೂ ಸಮಾಧಾನಗೊಳ್ಳದ ಶ್ರೀರಾಮಸೇನೆ ಕಾರ್ಯಕರ್ತರು, ಗೋಮಾಂಸ ಸಾಗಾಟ ಮಾಡುತ್ತಿದ್ದವರ ತಲೆಯ ಮೇಲೆ ಹಸುಗಳ ರುಂಡಗಳನ್ನು ಇರಿಸಿದ್ದು ಎದೆಗೆ ಒದ್ದು ಗೂಂಡಾಗಿರಿ ಪ್ರದರ್ಶಿಸಿದರು. ಈ ವೇಳೆ ಮಧ್ಯ ಪ್ರವೇಶಿಸಿದ ಪೊಲೀಸರು ಹಲ್ಲೆ ನಡೆಸದಂತೆ ಸೂಚನೆ ನೀಡಿದ್ದಾರೆ ಎಂದು ವರದಿಯಾಗಿದೆ. ಘಟನೆಗೆ ಸಂಬಂಧಿಸಿದಂತೆ ಗೂಂಡಾಗಿರಿ ನಡೆಸಿದ 20 ಕ್ಕೂ ಅಧಿಕ ಶ್ರೀರಾಮಸೇನೆ ಕಾರ್ಯಕರ್ತರನ್ನು ದೊಡ್ಡಬಳ್ಳಾಪುರ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ನಗರದೆಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಸ್ಥಳದಲ್ಲಿ ಎಸ್ಪಿ, ಎಎಸ್ಪಿ, ಡಿವೈಎಸ್ಪಿ ಹಾಗೂ ಇಸ್ಪೆಕ್ಟರ್ ಮೊಕ್ಕಾಂ ಹೂಡಿದ್ದಾರೆ. ಐಬಿ ವೃತ್ತ ಹಾಗೂ ಗುಂಜೂರು ಟೋಲ್‌ಗಳ ಸಿಸಿಟಿವಿಯನ್ನು ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಗಣಪತಿ ವಿಸರ್ಜನೆ ವೇಳೆ ಕೆರೆಯಲ್ಲಿ ಮುಳುಗಿ ಸಾವು!

ಗಣೇಶೋತ್ಸವದ ಗಣಪತಿ ವಿಸರ್ಜನೆ ವೇಳೆ ಯುವಕನೋರ್ವ ಕೆರೆ ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ಚಿಕ್ಕಮಗಳೂರು ತಾಲೂಕಿನ ಕುರುಬರಹಳ್ಳಿ ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದಿದೆ.ಮೃತರನ್ನು ಸ್ಥಳೀಯ ನಿವಾಸಿ ಗಣೇಶ್ (25) ಎಂದು ಗುರುತಿಸಲಾಗಿದೆ.

ಡಾನ್ಸ್ ಕ್ಲಾಸ್‌ಗೆ ಹೋಗಬೇಡವೆಂದಿದಕ್ಕೆ ಆತ್ಮಹತ್ಯೆ!

ಕೋಲಾರ: ಡಾನ್ಸ್ ಕ್ಲಾಸ್‌ಗೆ ಹೋಗಬೇಡವೆಂದು ಪೋಷಕರು ಗದರಿಸಿದ್ದರಿಂದ ಮನನೊಂದ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಚಿನ್ನಕೋಟೆ ಗ್ರಾಮದ ಕೀರ್ತನಾ ಆತ್ಮಹತ್ಯೆ ಮಾಡಿಕೊಂಡ ಯುವತಿ. ಡ್ಯಾನ್ಸ್ ಎಂದರೆ ತುಂಬಾ ಇಷ್ಟಪಡುತ್ತಿದ್ದ ಕೀರ್ತನಾ ಡ್ಯಾನ್ಸ್ ಕ್ಲಾಸ್ ಗೆ ಹೋಗುತ್ತಿದ್ದಳು. ಆದರೆ ಈಕೆಗೆ ಡಾನ್ಸ್ ಕ್ಲಾಸ್ ಗೆ ಹೋಗಬೇಡವೆಂದು ಪೋಷಕರು ಗದರಿಸಿದ್ದಾರೆ. ಇದರಿಂದ ಮನನೊಂದ ಕೀರ್ತನಾ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಕುರಿತು ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.