ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ?!
* ಅರ್ಜಿ ವಜಾಗೊಳಿಸಿದ ಕರ್ನಾಟಕ ಹೈಕೋರ್ಟ್
* ರಾಜ್ಯಪಾಲರ ಪ್ರಾಸಿಕ್ಯೂಶನ್ ಅನುಮತಿಗೆ ಪರ ಆದೇಶ
NAMMUR EXPRESS NEWS
ಬೆಂಗಳೂರು: ಮುಡಾ ಹಗರಣದಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ಕ್ರಮ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾ ಮಾಡಿದೆ. ರಾಜ್ಯಪಾಲರ ಕ್ರಮವನ್ನು ಎತ್ತಿಹಿಡಿದಿದೆ. ಈ ಮೂಲಕ ಸಿಎಂ ಸಿದ್ದರಾಮಯ್ಯ ಅವರಿಗೆ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ.
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಭಾಗಿಯಾಗಿದ್ದಾರೆ ಎಂದು ಆರೋಪ ಕೇಳಿಬಂದಿತ್ತು. ಈ ಬಗ್ಗೆ ರಾಜ್ಯಪಾಲರಿಗೆ ಖಾಸಗಿ ವ್ಯಕ್ತಿಗಳಿಂದ ದೂರು ಬಂದಿತ್ತು. ಈ ಬಗ್ಗೆ ಕ್ರಮ ಕೈಗೊಂಡ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಸ್ ದಾಖಲಿಸಿ ತನಿಖೆ ನಡೆಸಲು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿ ಆದೇಶ ಹೊರಡಿಸಿದ್ದರು.
ರಾಜ್ಯಪಾಲರ ಈ ಕ್ರಮವನ್ನು ಪ್ರಶ್ನೆ ಮಾಡಿ ಸಿದ್ದರಾಮಯ್ಯ ಹೈಕೋರ್ಟ್ ಮೆಟ್ಟಿಲೇರಿದ್ದರು.
ಕಳೆದ ಒಂದು ತಿಂಗಳಿಂದ ವಾದ ವಿವಾದ ಆಲಿಸಿ ಹೈಕೋರ್ಟ್ನ ಎಂ ನಾಗಪ್ರಸನ್ನ ಅವರ ಏಕ ಸದಸ್ಯ ಪೀಠವು ಸೆ. 24ರಂದು ತೀರ್ಪು ಪ್ರಕಟಿಸಿದೆ. ರಾಜ್ಯಪಾಲರು ಪ್ರಾಸಿಕ್ಯೂಶನ್ಗೆ ನೀಡಿರುವ ಅನುಮತಿ ಸರಿಯಾಗಿದೆ. ತಡೆ ನೀಡಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಹೇಳಿದೆ.