ಸಂಕ್ರಾಂತಿಯಿಂದ ಎರಡು ದಿನ ಮಳೆ!?
– ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ
– ಹವಾಮಾನ ಇಲಾಖೆ ಮುನ್ಸೂಚನೆ ಎಚ್ಚರ
NAMMUR EXPRESS NEWS
ಕರ್ನಾಟಕದಲ್ಲಿ ಚಳಿಯ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ದಕ್ಷಿಣ ಒಳನಾಡಿನಲ್ಲಿ ಸಂಕ್ರಾಂತಿಯಿಂದ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ಕೊಡಗು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಹೆಚ್ಚಿನ ಬದಲಾವಣೆ ಇಲ್ಲ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣಹವೆ ಮುಂದುವರೆಯಲಿದ್ದು, ಚಳಿ ಇರಲಿದೆ. ಬೀದರ್ನಲ್ಲಿ 10.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್ಎಎಲ್ನಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 28.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಧಾರವಾಡದಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 11.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 12.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 31.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 13.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.