Categories
ರಾಜ್ಯ

ರಾಜ್ಯದಲ್ಲಿ ಅಕಾಲಿಕ ಮಳೆ ಕಿರಿಕ್!

ರಾಜ್ಯದಲ್ಲಿ ಅಕಾಲಿಕ ಮಳೆ ಕಿರಿಕ್!
– ಬೆಂಗಳೂರು, ಮಲೆನಾಡು, ಕರಾವಳಿ ಸೇರಿ ಹಲವೆಡೆ ಮಳೆ
– ಮಳೆ ಕಾರಣದಿಂದ ಬೆಳೆ ನಷ್ಟ: ಜನತೆಗೆ ತೊಂದರೆ

NAMMUR EXPRESS NEWS
ಬೆಂಗಳೂರು : ರಾಜ್ಯ ರಾಜಧಾನಿ ಸೇರಿ ರಾಜ್ಯದ ಹಲವೆಡೆ ಮಳೆಯಾಟ ಮುಂದುವರಿದಿದೆ. ಶುಕ್ರವಾರ ಕೂಡ ಬೆಂಗಳೂರು, ಮಲೆನಾಡು, ಕರಾವಳಿ ಸೇರಿ ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದೆ. ನವೆಂಬರ್ 16ರಂದು ವಿವಿಧ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಆಗಲಿದೆ. ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ ಹಿನ್ನೆಲೆಯಲ್ಲಿ ಎಲ್ಲೋ ಅಲರ್ಟ್ ಎಚ್ಚರಿಕೆ’ ನೀಡಲಾಗಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಗಳಿಗೆ ಭಾರೀ ಮಳೆ ಆಗಲಿದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಧಾರವಾಡ, ಹಾವೇರಿ, ಕೊಪ್ಪಳ, ಯಾದಗಿರಿ, ಬೀದರ್, ಕೊಪ್ಪಳ, ಕಲಬುರಗಿ, ಬೀದರ್, ರಾಯಚೂರು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಆಗಲಿದೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ದಾವಣಗೆರೆ, ಚಿತ್ರದುರ್ಗ, ಹಾಸನ ಜಿಲ್ಲೆ ಸೇರಿ ವಿವಿಧ ಕಡೆಗಳಲ್ಲಿ ಲಘು ಮಳೆ ಆಗಲಿದೆ. .

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.