ಮತ್ತೆ ಮತದಾನ ಬಂತು!
– 2ನೇ ಹಂತದ ಚುನಾವಣೆಗೆ ಕ್ಷಣಗಣನೆ
– 14 ಕ್ಷೇತ್ರಗಳಲ್ಲಿ ಮತದಾನಕ್ಕೆ ಸಕಲ ಸಿದ್ಧತೆ
– ಮತದಾನ ಮಾಡಿ.. ನಿಮ್ಮ ಹಕ್ಕು ಚಲಾಯಿಸಿ!
NAMMUR EXPRESS NEWS
ರಾಜ್ಯದಲ್ಲಿ ಮೊದಲ ಹಂತದ ಚುನಾವಣೆ ಮುಗಿದಿದ್ದು ಇದೀಗ ಎರಡನೇ ಹಂತದ ಮತದಾನಕ್ಕೆ ಎರಡು ದಿನ ಬಾಕಿ ಇದೆ. 2ನೇ ಹಂತದ ಮತದಾನಕ್ಕೆ ದಿನಗಣನೆ ಆರಂಭವಾಗಿದ್ದು ಚುನಾವಣಾ ಆಯೋಗ ಸಜ್ಜಾಗಿದೆ. ಇನ್ನು ಮತದಾರರು ಕೂಡ ಮತದಾನಕ್ಕೆ ಸಜ್ಜಾಗಿದ್ದಾರೆ. ರಾಜಕೀಯ ನಾಯಕರು ಅಂತಿಮ ಹಂತದ ಪ್ರಚಾರದಲ್ಲಿ ತೊಡಗಿದ್ದಾರೆ.
ಮತದಾರರಿಗೆ ಅನೇಕ ಸೌಲಭ್ಯ!
ಮತದಾರರು ತಮ್ಮ ಮತಗಳನ್ನು ಆರಾಮವಾಗಿ ಚಲಾಯಿಸಬಹುದು. ಮತದಾರರ ಅನುಕೂಲಕ್ಕಾಗಿ, ಬಿಸಿ ಹವಾಮಾನ ಪರಿಸ್ಥಿತಿಗಳನ್ನು ಎದುರಿಸಲು ಸೌಲಭ್ಯಗಳು ಸೇರಿದಂತೆ ಎಲ್ಲಾ ಮತಗಟ್ಟೆಗಳಲ್ಲಿ ನಿಖರವಾದ ವ್ಯವಸ್ಥೆಗಳನ್ನು ಮಾಡಲಾಗಿದೆ. ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಮತದಾನ ಮಾಡುವುದಕ್ಕಾಗಿ ಮತದಾರರ ಜಾಗೃತಿ ಮತ್ತು ಸೌಲಭ್ಯ ಕ್ರಮಗಳನ್ನು ಮತ್ತಷ್ಟು ಹೆಚ್ಚಿಸಲಾಗಿದೆ. ವೃದ್ಧರು/ಹಿರಿಯ ನಾಗರಿಕರು ಮತ್ತು ವಿಕಲಚೇತನರು ಸೇರಿದಂತೆ ಪ್ರತಿಯೊಬ್ಬ ಮತದಾರರು ಸುಲಭವಾಗಿ ಮತ ಚಲಾಯಿಸುವುದನ್ನು ಖಚಿತಪಡಿಸಿಕೊಳ್ಳಲು ನೀರು, ಶೆಡ್, ಶೌಚಾಲಯಗಳು, ಇಳಿಜಾರಿನಂತಹ ಸೌಲಭ್ಯಗಳು, ಸ್ವಯಂಸೇವಕರು, ಗಾಲಿಕುರ್ಚಿಗಳು ಮತ್ತು ವಿದ್ಯುತ್ ನಂತಹ ಕನಿಷ್ಠ ಸೌಲಭ್ಯಗಳನ್ನು ಖಚಿತಪಡಿಸಲಾಗಿದೆ. ಬಿಸಿ ಹವಾಮಾನ ಪರಿಸ್ಥಿತಿಗಳನ್ನು ಎದುರಿಸಲು ವಿಶೇಷ ಗಮನ ನೀಡಲಾಗಿದೆ.
14 ಕ್ಷೇತ್ರಗಳು ಯಾವುವು..?
ರಾಜ್ಯದಲ್ಲಿ ಮೇ 7 ರಂದು ಲೋಕಸಭೆ ಚುನಾವಣೆ 14 ಕ್ಷೇತ್ರಗಳಲ್ಲಿ ನಡೆಯಲಿದೆ. ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ, ಗುಲ್ಬರ್ಗಾ, ರಾಯಚೂರು, ಬೀದರ್, ಕೊಪ್ಪಳ. ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರಕನ್ನಡ, ದಾವಣಗೆರೆ, ಶಿವಮೊಗ್ಗ ಜಿಲ್ಲೆಗಳು ಸೇರಿವೆ. ಈ ಹಿನ್ನೆಲೆ ಮತದಾನದ ದಿನದಂದು ಸಾರ್ವತ್ರಿಕ ರಜೆ ಘೋಷಿಸಿಲು ಆದೇಶ ಹೊರಡಿಸಿದ್ದು, ಈ ಆದೇಶದ ಅನ್ವಯ ಮೇ 07 ರಂದು ವೇತನ ಸಹಿತ ರಜೆ ನೀಡುವಂತೆ ಡಿಸಿ ಹೇಳಿದ್ದಾರೆ.