ಹೆಲ್ಮೆಟ್ ಧರಿಸಿ ಜೀವ ಹಾನಿ ತಪ್ಪಿಸಿ..!
– ಸರ್ಕಾರ ಬೈಕ್ ಸವಾರ, ಹಿಂಬದಿ ಸವಾರರಿಗೆ ಹೆಲ್ಮೆಟ್ ಕಡ್ಡಾಯ
– ಬೈಕ್ ಅಲ್ಲಿ ಶೋಕಿ ಬೇಡ, ಇರೋದೊಂದೇ ಜೀವನ
NAMMUR EXPRESS
ರಾಜ್ಯದಲ್ಲಿ ಅಪಘಾತ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರತಿಯೊಬ್ಬ ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ಜೀವ ಹಾನಿಯಾಗುವುದನ್ನು ತಪ್ಪಿಸಬೇಕು. ಇತ್ತೀಚೆಗೆ ಅಪಘಾತವಾಗಿರುವ ಪ್ರಕರಣದಲ್ಲಿ ಹೆಚ್ಚಾಗಿ ಹೆಲ್ಮೆಟ್ ಇಲ್ಲದೆ ದ್ವಿಚಕ್ರ ವಾಹನ ನಡೆಸುತ್ತಿರುವರೇ ಮೃತಪಟ್ಟಿದ್ದಾರೆ. ಅದಕ್ಕಾಗಿ ಸರ್ಕಾರ ಬೈಕ್ ಸವಾರ ಹಾಗೂ ಹಿಂಬದಿ ಸವಾರರಿಗೆ ಹೆಲ್ಮೆಟ್ ಕಡ್ಡಾಯಗೊಳಿಸಿದೆ. ಅದಕ್ಕಾಗಿ ಸರ್ಕಾರ ಬೈಕ್ ಸವಾರ ಹಾಗೂ ಹಿಂಬದಿ ಸವಾರರಿಗೆ ಹೆಲ್ಮೆಟ್ ಕಡ್ಡಾಯಗೊಳಿಸಿದೆ. ಆದರೂ ಕೂಡ ಬೈಕ್ ಸವಾರರು ಹೆಲ್ಮೆಟ್ ಧರಿಸದ ಕಾರಣ ಅಪಘಾತ ಸಂಭವಿಸಿ ಸಾವು ನೋವುಗಳು ಸಂಭವಿಸುತ್ತಿವೆ.
ರಸ್ತೆ ಅಪಘಾತದಲ್ಲಿ ಶೇ.70 ರಷ್ಟು ಜನರು ತೆಲೆಗೆ ಪಟ್ಟಾಗಿಯೇ ಸಾವಿಗೀಡಾಗಿದ್ದಾರೆ. ದ್ವಿಚಕ್ರ ವಾಹನ ಸವಾರ ಅಪಘಾತ ಸಂದರ್ಭದಲ್ಲಿ ಹೆಲ್ಮೆಟ್ ಧರಿಸಿದ್ದರೆ ಬದುಕುಳಿಯುವ ಸಾಧ್ಯತೆ ಶೇ.80 ರಷ್ಟು ಇರುತ್ತದೆ. ಪ್ರತಿಯೊಬ್ಬ ಬೈಕ್ ಸವಾರರು ಹೆಲ್ಮೆಟ್ ಬಳಸಿ ಅಮೂಲ್ಯವಾದ ಜೀವ ರಕ್ಷಿಸಿಕೊಳ್ಳುವ ಜತೆಗೆ ತಮ್ಮ ಕುಟುಂಬ ಭದ್ರತೆಯನ್ನು ಕಾಪಾಡಿಕೊಳ್ಳಬೇಕು. ನಿಯಮ ಉಲ್ಲಂಘಿಸಿದರೆ ಮೋಟಾರ್ ಕಾಯ್ದೆ ಪ್ರಕಾರ ಕಾನೂನು ಕ್ರಮ ಜರುಗಿಸಬೇಕಾಗುವುದು. ಚಿಕ್ಕ ಮಕ್ಕಳು ಬೈಕ್ ಓಡಿಸುವುದು, ಅವರ ಕೈಯಲ್ಲಿ ಬೈಕ್ ಕೊಡುವುದು ಅಪರಾಧವಾಗಿದೆ. ಜೀವ ರಕ್ಷಣೆಗಾಗಿ ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ.