ಯೋಗಾಸನ: ವಾಗ್ದೇವಿ ಶಾಲೆಯ ವಿದ್ಯಾರ್ಥಿನಿ ರಾಷ್ಟ್ರಮಟ್ಟಕ್ಕೆ ಆಯ್ಕೆ
– ಶಿಕ್ಷಣ, ಕ್ರೀಡೆ, ಸಾಂಸ್ಕೃತಿಕ ಎಲ್ಲದ್ರಲ್ಲೂ ವಾಗ್ದೇವಿ ವಿದ್ಯಾರ್ಥಿಗಳ ಸಾಧನೆ
– ತೀರ್ಥಹಳ್ಳಿಯ ಅಗ್ರಹಾರದ ಶ್ರೀಪ್ರದ ಹಾಗೂ ನಟೇಶ್ ದಂಪತಿಗಳ ಪುತ್ರಿ
ನಮ್ಮೂರ್ ಎಕ್ಸ್ ಪ್ರೆಸ್ ನ್ಯೂಸ್
ತೀರ್ಥಹಳ್ಳಿ: ಬೆಂಗಳೂರಿನಲ್ಲಿ ಏ. 24ರಂದು ನಡೆದ 2026ನೇ ಸಾಲಿನ ಕರ್ನಾಟಕ ರಾಜ್ಯಮಟ್ಟದ ನಾಲ್ಕನೇ ಯೋಗಾಸನ ಚಾಂಪಿಯನ್ ಶಿಪ್ ನಲ್ಲಿ ತೀರ್ಥಹಳ್ಳಿಯ ವಾಗ್ದೇವಿ ಶಾಲೆಯ ಎಂಟನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ಸಂಹಿತ ಉಡುಪ ಅವರು ಭಾಗವಹಿಸಿದ್ದರು. ಸಂಹಿತ ಅವರು ಸಾಂಪ್ರದಾಯಿಕ ರಿದಮಿಕ್ ಯೋಗಾಸನ ಸ್ಪರ್ಧೆಯಲ್ಲಿ ಅತ್ಯುತ್ತಮ ಪ್ರದರ್ಶನವನ್ನು ನೀಡುವುದರ ಮೂಲಕ, ಚಿನ್ನದ ಪದಕಕ್ಕೆ ಕೊರಳೊಡ್ಡಿದ್ದಾರೆ. ಈ ಮೂಲಕ ಅವರು ಮುಂದಿನ ದಿನಗಳಲ್ಲಿ ಉತ್ತರಖಂಡದಲ್ಲಿ ನಡೆಯುವ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿ, ಜಿಲ್ಲೆಗೆ ಮತ್ತು ತಾಲ್ಲೂಕಿಗೆ ಕೀರ್ತಿಯನ್ನು ತಂದಿದ್ದಾರೆ.
ಸಂಹಿತ ಅವರು ತೀರ್ಥಹಳ್ಳಿಯ ಅಗ್ರಹಾರದ ನಿವಾಸಿಗಳಾದ ಶ್ರೀಪ್ರದ ಹಾಗೂ ನಟೇಶ್ ದಂಪತಿಗಳ ಪುತ್ರಿಯಾಗಿದ್ದಾರೆ. ಸಂಹಿತ ಅವರ ಈ ಸಾಧನೆಗೆ ವಾಗ್ದೇವಿ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು, ಸದಸ್ಯರು, ಶಿಕ್ಷಕ ವೃಂದದವರು ಮತ್ತು ಪೋಷಕರು ಅಭಿನಂದನೆಗಳನ್ನು ಸಲ್ಲಿಸಿದ್ದು, ರಾಷ್ಟ್ರಮಟ್ಟದ ಸ್ಪರ್ಧೆಯಲ್ಲೂ ಕೂಡ ಚಿನ್ನದ ಪದಕ ತನ್ನದಾಗಿಸಿಕೊಳ್ಳಲಿ ಎಂದು ತುಂಬು ಹೃದಯದಿಂದ ಹಾರೈಸಿದ್ದಾರೆ.








