Categories
ತೀರ್ಥಹಳ್ಳಿ

ತೀರ್ಥಹಳ್ಳಿಯಲ್ಲಿ ನಾರಾಯಣ ಗುರುಗಳ 169ನೇ ಜಯಂತಿ ಆಚರಣೆ

ತೀರ್ಥಹಳ್ಳಿಯಲ್ಲಿ ನಾರಾಯಣ ಗುರುಗಳ 169ನೇ ಜಯಂತಿ ಆಚರಣೆ
– ನೂರಾರು ಸಂಖ್ಯೆಯಲ್ಲಿ ಆಗಮಿಸಿದ ಆರ್ಯ ಈಡಿಗ ಸಮಾಜದ ಬಾಂಧವರು

NAMMUR EXPRESS NEWS
ತೀರ್ಥಹಳ್ಳಿ: ತೀರ್ಥಹಳ್ಳಿ ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ಆರ್ಯ ಈಡಿಗರ ಸಂಘ, ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಮಾಜ ಸೇವಾ ಸಂಘ, ನಾರಾಯಣ ಗುರು ವಿಚಾರ ವೇದಿಕೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ನಾರಾಯಣ ಗುರುಗಳ 169ನೇ ಜಯಂತಿಯನ್ನು ಗುರುವಾರ ಬೆಳಗ್ಗೆ ಒಂಬತ್ತು ಗಂಟೆಗೆ ಬೊಮ್ಮರಸಾಯನ ಅಗ್ರಹಾರದಲ್ಲಿರುವ ನಾರಾಯಣ ಗುರುಭವನದಲ್ಲಿ ಸತ್ಯನಾರಾಯಣ ಪೂಜೆ ನೆರವೇರಿಸಲಾಯಿತು. ನಂತರ ಪ್ರಸಾದ ವಿನಿಯೋಗದ ಬಳಿಕ ಎಸ್ ಎನ್ ಜಿವಿ ಸಂಘಟನೆ,ಆರ್ಯ ಈಡಿಗರ ಸಂಘ, ಬಿಲ್ಲವ ಸಂಘ ಹಾಗೂ ಗುರುಗಳ ಸಮ್ಮುಖದಲ್ಲಿ ನಾರಾಯಣ ಗುರು ಭವನದಿಂದ ಮೆರವಣಿಗೆ ಹೊರಡಿಸಲಾಯಿತು. ಮೆರವಣಿಗೆಯು ಕೊಪ್ಪ ಸರ್ಕಲ್ ಮೂಲಕ ಸೊಪ್ಪುಗುಡ್ಡೆ ಶಾಂತವೇರಿ ಗೋಪಾಲಗೌಡ ರಂಗಮಂದಿರ ತಲುಪಿತು ಮೆರವಣಿಗೆಯಲ್ಲಿ ಆರ್ಯ ಈಡಿಗ ಸಮಾಜದ ಎಲ್ಲಾ ಕುಲಬಾಂಧವರು ನೂರಾರು ಸಂಖ್ಯೆಯಲ್ಲಿ ಸೇರಿದ್ದರು.

ನಂತರ ಶಾಂತವೇರಿ ಗೋಪಾಲಗೌಡ ರಂಗಮಂದಿರದಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ನೆರೆದಿದ್ದ ಗಣ್ಯರು ಮಾತನಾಡಿ ಅನೇಕ ತತ್ವಗಳನ್ನ ಆದರ್ಶಗಳನ್ನ ಸಮಾಜಕ್ಕೆ ನೀಡಿದಂತಹವರು ನಾರಾಯಣ ಗುರುಗಳು. ಮೂಡನಂಬಿಕೆ, ಜಾತಿ ಪದ್ಧತಿ ಸೇರಿದಂತೆ ಅನೇಕ ಅನಿಷ್ಟ ಪದ್ಧತಿಗಳ ಆಚರಣೆಗಳ ವಿರುದ್ಧ ಧ್ವನಿಯನ್ನು ಎತ್ತಿದವರು ನಾರಾಯಣ ಗುರುಗಳು. ನಾವೆಲ್ಲರೂ ಸಮಾನರು ಎಂಬ ಸಂದೇಶವನ್ನು ಸಮಾಜಕ್ಕೆ ಸಾರಿದವರು ನಾರಾಯಣ ಗುರುಗಳ ಎಂದರು. ಅವಧೂತ ಶ್ರೀ ಶ್ರೀ ಯೋಗಾನಂದ ಗುರುಗಳು ಶ್ರೀ ನಾರಾಯಣ ಗುರುಗಳ ವಿಚಾರಧಾರೆಯನ್ನು ಸಿದ್ಧಾಂತವನ್ನು ಪ್ರವಚನ ಮೂಲಕ ಸಂದೇಶ ನೀಡಿದರು. ಕಾರ್ಯಕ್ರಮದಲ್ಲಿ ಶಾಸಕ ಆರಗ ಜ್ಞಾನೇಂದ್ರ, ತಾಲೂಕು ದಂಡಾಧಿಕಾರಿ ಲಿಂಗರಾಜು, ರೆಹಮತುಲ್ಲಾ ಅಸಾದಿ, ಸತ್ಯಜಿತ್ ಸುರತ್ಕಲ್, ಬೇಗುವಳ್ಳಿ ಸತೀಶ್, ಮೂಡುಬ ರಾಘವೇಂದ್ರ, ಡಾ.ಮೋಹನ್ ಚಂದ್ರಗುತ್ತಿ, ಪಟ್ಟಣ ಪಂಚಾಯಿತಿಯ ಮುಖ್ಯ ಅಧಿಕಾರಿ ಕುರಿಯ ಕೋಸ್, ಟಿ. ಮಂಜುನಾಥ್, ರಾಮಚಂದ್ರ, ಕ್ಷೇತ್ರ ಶಿಕ್ಷಣಾಧಿಕಾರಿ ಗಣೇಶ್, ಮೇಲಿನಕೊಪ್ಪ ರಮೇಶ್, ತಾಲೂಕು ಪಂಚಾಯಿತಿಯ ಇ ಒ ಶ್ವೇತಾ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು

ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಾಂಸ್ಕೃತಿಕ ಇಲಾಖೆ ವತಿಯಿಂದ ಆಯೋಜಿಸಿದ ಬ್ರಹ್ಮಶ್ರೀ ನಾರಾಯಣಗುರುಗಳ ಮತ್ತು ಶರಣ ನುಲಿಯ ಚಂದ್ರಯ್ಯ ಜಯಂತಿಯ ಅಂಗವಾಗಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಸಚಿವರು ಸನ್ಮಾನ್ಯ ಶ್ರೀ ಮಧುಬಂಗಾರಪ್ಪ ಅವರು ಪಾಲ್ಗೊಂಡು ಭಾವಚಿತ್ರಕ್ಕೆ ಪುಷ್ಪ ನಮನದ ಮೂಲಕ ಗೌರವ ಸಲ್ಲಿಸಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.

ಇದನ್ನೂ ಓದಿ : 20 ಕೆಜಿ ಗೋ ಮಾಂಸ ವಶಕ್ಕೆ ಪಡೆದ ಪೊಲೀಸರು
[embedyt] https://www.youtube.com/watch?v=7aC6PnGPWLU%5B/embedyt%5D

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.