ತೀರ್ಥಹಳ್ಳಿಯ ಹುಡುಗ ಥ್ರೋಬಾಲ್ ಕ್ರೀಡೆಯಲ್ಲಿ ರಾಷ್ಟ್ರ ಮಟ್ಟಕ್ಕೆ!
– ಸನ್ಮಾನ್ ಸಹ್ಯಾದ್ರಿ ಪಿಯು ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ
NAMMUR EXPRESS NEWS
ತೀರ್ಥಹಳ್ಳಿ: ತೀರ್ಥಹಳ್ಳಿ ಸಹ್ಯಾದ್ರಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಥ್ರೋಬಾಲ್‌ನಲ್ಲಿ ಸನ್ಮಾನ್ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಡಿಸೆಂಬರ್ 27 ರಿಂದ 29 ರವರಗೆ ತಮಿಳುನಾಡಿನಲ್ಲಿ ನಡೆಯಲಿರುವ ಜೂನಿಯರ್ ನ್ಯಾಶನಲ್ ಚಾಂಪಿಯನ್ಶಿಪ್ 2023-24 ರಲ್ಲಿ ಅವರು ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಭಾಗಿಯಾಗಲಿದ್ದಾರೆ. ಈತ ತಾಲೂಕಿಗೆ ಮತ್ತು ಶಿಕ್ಷಣ ಸಂಸ್ಥೆಗೆ ಕೀರ್ತಿಯನ್ನು ತಂದಿರುತ್ತಾರೆ. ಈ ಕ್ರೀಡಾ ಪ್ರತಿಭೆಯನ್ನು ಹಾಗೂ ಇವರಿಗೆ ತರಬೇತಿ ನೀಡಿದ ದೈಹಿಕ ಶಿಕ್ಷಕರಾದ ಜಗದೀಶ್ ಎಮ್.ಎಸ್ ಇವರಿಗೆ ಸಹ್ಯಾದ್ರಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಆಡಳಿತಾಧಿಕಾರಿಗಳು,ಪ್ರಾಂಶುಪಾಲರು, ಬೋಧಕ ಮತ್ತು ಬೋಧಕೇತರ ವರ್ಗದವರು ಹಾರ್ದಿಕವಾಗಿ ಅಭಿನಂದಿಸಿ ಶುಭ ಹಾರೈಸಿದ್ದಾರೆ. ಇವರ ಮುಂದಿನ ಕ್ರೀಡಾ ಪ್ರಯಾಣ ಯಶಸ್ವಿಯಾಗಲೆಂದು ನಮ್ಮೂರ್ ಎಕ್ಸ್‌ಪ್ರೆಸ್ ಶುಭ ಹಾರೈಸಿದೆ.